ಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹುಬ್ಬಳ್ಳಿಗೆ ದಿಢೀರ್ ಭೇಟಿ ನೀಡಿದ್ದಾರೆ. ಆರ್‌ಎಸ್‌ಎಸ್ ಕೇಂದ್ರ ಕಚೇರಿ ಕೇಶವ್ ಕುಂಜದಲ್ಲಿ ಗೌಪ್ತ ಮಾತುಕತೆ ನಡೆಸುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಒಂದು ಗಂಟೆಗೂ ಹೆಚ್ಚು ಕಾಲದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ RSS ನಾಯಕರ ಜೊತೆಗೆ ಮಾತುಕತೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಯ ಹೆಗ್ಗೆರಿಯಲ್ಲಿರುವ ಕೇಶವ ಕುಂಜ ಸಭೆಯಲ್ಲಿ ಆರ್‌ಎಸ್‌ಎಸ್ ಉತ್ತರ ಪ್ರಾಂತ ಪ್ರಚಾರಕ ನರೇಂದ್ರ ಭಾಗಿಯಾಗಿದ್ದಾರೆ.

ಆರ್‌ಎಸ್‌ಎಸ್ ಪ್ರಮುಖರ ಜೊತೆ ವಿಜಯೇಂದ್ರ ಚರ್ಚೆ ನಡೆಸುತ್ತಿದ್ದು, ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ ಬಂಡಾಯದ ಬಗ್ಗೆ ಚರ್ಚೆ ನಡೆಸುತ್ತಿರುವ ಬಗ್ಗೆ ಮಾಹಿತಿಯಿದ್ದು,ಬಂಡಾಯ ಶಮನಕ್ಕೆ ಈ ಸಭೆ ಮಹತ್ವ ಪಡೆದುಕೊಂಡಿದೆ.

ಬಿಜೆಪಿ ಪಕ್ಷದೊಳಗಿನ ಆಂತರಿಕ ತಿಕ್ಕಾಟ, ಮೂರು ಕ್ಷೇತ್ರಗಳ ಉಪಚುನಾವಣೆ ಕುರಿತು ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಇದೆ. ಸ್ಥಳೀಯ ಮುಖಂಡರನ್ನು ಹೊರಗಿಟ್ಟು ಚರ್ಚೆಯಲ್ಲಿ ತೊಡಗಿರುವುದು ಕುತೂಹಲಕ್ಕೆ ಕಾರಣವಾಗಿದೆ.