• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಾಲಕಿಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ ಧೂರ್ತನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

ಪ್ರತಿಧ್ವನಿ by ಪ್ರತಿಧ್ವನಿ
September 4, 2024
in Top Story, ಇತರೆ / Others
0
Share on WhatsAppShare on FacebookShare on Telegram

ಇತ್ತೀಚಿನ ದಿನಗಳಲ್ಲಿ ದೇಶಾದ್ಯಂತ ಲೈಂಗಿಕ ಮಹಿಳೆಯರ ಮೇಲಾಗುತ್ತಿರುವ ಲೈಂಗಿಕ ದೌರ್ಜನ್ಯದ ಪ್ರಕರಣಗಳು ತೀರಾ ಹೆಚ್ಚುತ್ತಿದೆ.ಮಹಿಳೆಯರು, ವೃದ್ಧರು, ಮಕ್ಕಳೆಂದೂ ನೋಡದೆ ಕಾಮುಕರು ಅತ್ಯಾಚಾರ ಎಸಗುತ್ತಿದ್ದಾರೆ

ADVERTISEMENT

ಎಷ್ಟೇ ಕಠಿಣ ಕಾನೂನು ಕ್ರಮಗಳನ್ನು ಜಾರಿಗೆ ತಂದ್ರೂ ಮಹಿಳೆಯ ಮೇಲಾಗುತ್ತಿರುವ ದೌರ್ಜನ್ಯ, ಕಿರುಕುಳ, ಅತ್ಯಾಚಾರಗಳ ಸಂಖ್ಯೆ ಕಡಿಮೆಯಾಗಿಲ್ಲ. ಪ್ರತಿನಿತ್ಯ ಮಹಿಳೆಯರು, ಹೆಣ್ಣು ಮಕ್ಕಳು ಒಂದಲ್ಲಾ ಒಂದು ರೀತಿಯಲ್ಲಿ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಅದರಲ್ಲೂ ಕೆಲ ಕಾಮುಕರು ಮಕ್ಕಳೆಂಬುದನ್ನೂ ನೋಡದೆ ಪುಟ್ಟ ಪುಟ್ಟ ಹೆಣ್ಣು ಮಕ್ಕಳ ಮೇಲೂ ಕೂಡಾ ಲೈಂಗಿಕ ದೌರ್ಜನ್ಯವನ್ನು ಎಸಗುತ್ತಿದ್ದಾರೆ.

బాలికపై అత్యాచారయత్నం చేసిన వ్యక్తికి దేహశుద్ది చేసిన ప్రజలు

నంద్యాల – అవుకు మండలం కాశిపురం గ్రామంలో ఏడో తరగతి చదువుతున్న విద్యార్థినిపై అత్యాచారయత్నం చేసిన దాసయ్య.

బాలిక కేకలు వేయటంతో దాసయ్యను పట్టుకున్న స్థానికులు.. కట్టేసి కొట్టి, నిందితుడిని పోలీసులకు అప్పగించిన స్థానికులు. pic.twitter.com/BqVHR7ks2D

— Telugu Scribe (@TeluguScribe) September 2, 2024

ಇಂತಹ ನಾಚಿಕೆಗೇಡಿನ ಪ್ರಕರಣಗಳ ಸುದ್ದಿಗಳು ಕೇಳಿ ಬರುತ್ತಲೇ ಇರುತ್ತವೆ. ಇದೀಗ ಅಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ವ್ಯಕ್ತಿಯೊಬ್ಬ 7 ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿಯ ಕಿರುಚಾಟಕ್ಕೆ ಓಡಿ ಬಂದ ಸ್ಥಳೀಯರು ಅತ್ಯಾಚಾರಕ್ಕೆ ಯತ್ನಿಸಿದ ಧೂರ್ತನನ್ನು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಈ ಘಟನೆ ಆಂಧ್ರಪ್ರದೇಶದ ನಂದ್ಯಾಲ-ಅವುಕು ಮಂಡಲ ವ್ಯಾಪ್ತಿಯ ಕಾಶಿಪುರು ಗ್ರಾಮದಲ್ಲಿ ನಡೆದಿದ್ದು, ದಾಸಯ್ಯ ಎಂಬ ವ್ಯಕ್ತಿ 7 ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮೊದಲೇ ಬಾಲಕಿಯ ಮೇಲೆ ಕಣ್ಣಿಟ್ಟಿದ್ದ ಆತ, ಆ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಆಕೆಯ ಮೇಲೆ ಅತ್ಯಾಚಾರ ಎಸಗಲು ಮುಂದಾಗಿದ್ದಾನೆ.ಬಾಲಕಿ ಜೋರಾಗಿ ಕಿರುಚಾಡಿದಾಗ ಓಡಿ ಬಂದ ಸ್ಥಳಿಯರು, ಕಾಮುಕನನ್ನು ಹಿಡಿದು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಜಾಡಿಸಿ ನಂತರ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಕುರಿತ ವಿಡಿಯೋವನ್ನು TeluguScribe ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಲು ಮುಂದಾದವನನ್ನು ಸ್ಥಳೀಯರೆಲ್ಲರೂ ಸೇರಿ ಆತನನ್ನು ಕಂಬಕ್ಕೆg ಕಟ್ಟಿ ಹಿಗ್ಗಾಮುಗ್ಗಾ ಥಳಿಸುವ ದೃಶ್ಯವನ್ನು ಕಾಣಬಹುದು. ನಂತರ ಪೊಲೀಸರು ಬಂದು ಆತನನ್ನು ಠಾಣೆಗೆ ಎಳೆದೊಯ್ದಿದ್ದಾರೆ.

Tags: crimeDepartment of Women and Child WelfareVillagers thrashed a rascal
Previous Post

ವಜಾಗೊಂಡಿದ್ದ ನಾಲ್ವರು ಮಹಿಳಾ ಸಿವಿಲ್‌ ನ್ಯಾಯಾಧೀಶರ ಮರು ನೇಮಕ

Next Post

ವಸತಿ ಶಾಲೆಯಲ್ಲಿ SSLC ವಿದ್ಯಾರ್ಥಿನಿ ನೇಣಿಗೆ ಶರಣು

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post

ವಸತಿ ಶಾಲೆಯಲ್ಲಿ SSLC ವಿದ್ಯಾರ್ಥಿನಿ ನೇಣಿಗೆ ಶರಣು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada