ವಿನಯ್ ಕುಮಾರ್ ಸಕ್ಸೇನಾ ರಾಜಧಾನಿ ದೆಹಲಿಯ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕಗೊಂಡಿದ್ದಾರೆ.
ರಾಷ್ಟ್ರಪತಿ ರಾಮನಾಥನ್ ಕೋವಿಂದ್ ಸೋಮವಾರ ವಿನಯ್ ಕುಮಾರ್ ಸಕ್ಸೇನಾ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದು, ಅಧಿಕಾರ ವಹಿಸಿಕೊಂಡ ದಿನದಿಂದ ಈ ಆದೇಶ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.
ಅನಿಲ್ ಬೈಜಾಲ್ ವೈಯಕ್ತಿಕ ಕಾರಣ ನೀಡಿ ಮೇ 23ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ವಿನಯ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
