ವರ್ತೂರ್ ಸಂತೋಷ್ ಬಂಧನದ ಬಳಿಕ ರಾಜ್ಯದಲ್ಲಿ ಹುಲಿ ಉಗುರಿನ ಸದ್ದು ರಾಜಕೀಯ ಸಿನಿಮಾ ನಟರಲ್ಲದೆ ಗೌರಿಗದ್ದೆಯ ಸ್ವಯಂ ಘೋಷಿತ ಅವಧೂರ ಬಳಿ ತಲುಪಿದ್ದು, ಆಶ್ರಮ ಸಿಬ್ಬಂದಿ ಈ ಕುರಿತು ಸ್ಪಷ್ಟಿಕರಣ ನೀಡಿದ್ದಾರೆ.
ಹೌದು, ಇದೀಗ ಚಿಕ್ಕಮಗಳೂರು ಜಿಲ್ಲೆಯ ಗೌರಿಗದ್ದೆಯಲ್ಲಿರುವ ಅವಧೂತ ವಿನಯ್ ಗುರೂಜಿ ಹುಲಿ ಚರ್ಮದ ಮೇಲೆ ಕೂತಿರುವ ಫೋಟೋ ವೈರಲ್ ಆಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಗಳು ಕೇಳಿ ಬಂದಿತ್ತು.
ಇದೀಗ ಆಶ್ರಮ ಸಿಬ್ಬಂದಿ ಸ್ಪಷ್ಟನೆ ನೀಡಿದ್ದು, ಶಿವಮೊಗ್ಗ ಮೂಲದ ಅಮರೇಂದ್ರ ಎಂಬುವವರು 2 ವರ್ಷದ ಹಿಂದೆ ಅರಣ್ಯ ಅಧಿಕಾರಿಗಳ ಅನುಮತಿ ಪಡೆದು ವಿನಯ್ ಗುರೂಜಿಗೆ ಹುಲಿ ಚರ್ಮವನ್ನು ಉಡುಗೊರೆ ನೀಡಿದ್ದರು. ಅಮರೇಂದ್ರ ಅವರ ತಂದೆ ಕಾಲದಿಂದಲೂ ಅವರ ಮನೆತಲ್ಲಿದ್ದ ಹುಲಿ ಚರ್ಮವನ್ನು ವಿನಯ್ ಗುರೂಜಿಗೆ ನೀಡಿದ್ದರು. ಇನ್ನು ವಿನಯ್ ಗುರೂಜಿ ಅವರು 2022ರಲ್ಲಿ ಅದನ್ನು ಅರಣ್ಯ ಇಲಾಖೆಗೆ ಹಿಂದಿರುಗಿಸಿದ್ದರು ಎಂದು ಹೇಳಿದೆ.







