ಬೆಂಗಳೂರು : ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ 15ನೇ ಆರೋಪಿ ಎನಿಸಿರುವ ವಿನಯ್ ಕುಲಕರ್ಣಿಗೆ ಮತ್ತೊಂದು ಹಿನ್ನೆಡೆಯಾಗಿದೆ. ಧಾರವಾಡದ ಕಾಂಗ್ರೆಸ್ ಅಭ್ಯರ್ಥಿ ಎನಿಸಿರುವ ವಿನಯ್ ಕುಲಕರ್ಣಿ ಕ್ಷೇತ್ರಕ್ಕೆ ಪ್ರವೇಶಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನಿಂದ ಜಾಮೀನು ಪಡೆದಿದ್ದ ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಆದರೆ ಚುನಾವಣೆಯ ದೃಷ್ಟಿಯಿಂದ 50 ದಿನಗಳ ಕಾಲ ಧಾರವಾಡದಲ್ಲಿ ಪ್ರಚಾರ ಮಾಡಲು ಅವಕಾಶ ನೀಡಬೇಕು ಎಂದು ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ಇದೀಗ ವಜಾ ಆಗಿದೆ.
ಕೆಲವು ದಿನಗಳ ಹಿಂದಷ್ಟೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಅಲ್ಲಿಯೂ ಅವರ ಅರ್ಜಿ ವಜಾಗೊಂಡಿತ್ತು. ಇದಾದ ಬಳಿಕ ವಿನಯ್ ಕುಲಕರ್ಣಿ ಹೈಕೋರ್ಟ್ ಮೊರೆ ಹೋಗಿದ್ದು ಇಲ್ಲಿಯೂ ಅವರಿಗೆ ಹಿನ್ನಡೆಯಾಗಿದೆ.











