• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜು.3ಕ್ಕೆ ವಿನಯ್‌ ರಾಜ್‌ಕುಮಾರ್‌ ಅಭಿನಯದ ‘ಗ್ರಾಮಾಯಣ’ ತೆರೆಗೆ: ಹೇಗಿದೆ ಟ್ರೇಲರ್?

ಪ್ರತಿಧ್ವನಿ by ಪ್ರತಿಧ್ವನಿ
June 29, 2026
in Top Story, ಸಿನಿಮಾ
0
ಜು.3ಕ್ಕೆ ವಿನಯ್‌ ರಾಜ್‌ಕುಮಾರ್‌ ಅಭಿನಯದ ‘ಗ್ರಾಮಾಯಣ’ ತೆರೆಗೆ: ಹೇಗಿದೆ ಟ್ರೇಲರ್?
Share on WhatsAppShare on FacebookShare on Telegram
ADVERTISEMENT

ಲಹರಿ ಫಿಲಂಸ್ ನಿರ್ಮಾಣದ, ದೇವನೂರು ಚಂದ್ರು ರಚನೆ – ನಿರ್ದೇಶನದ ಹಾಗೂ ವಿನಯ್ ರಾಜಕುಮಾರ್ – ಮೇಘ ಶೆಟ್ಟಿ ನಾಯಕ – ನಾಯಕಿಯಾಗಿ ಅಭಿನಯಿಸಿರುವ “ಗ್ರಾಮಾಯಣ” ಚಿತ್ರದ‌ ಟ್ರೇಲರ್ ಬಿಡುಗಡೆ ಹಾಗೂ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು.

 ದುನಿಯಾ ವಿಜಯ್ ಹಾಗೂ ನಟಿ ಅಪರ್ಣ ಅವರ ಪತಿ ನಾಗರಾಜ್ ವಸ್ತಾರೆ ಅವರಿಂದ “ಗ್ರಾಮಾಯಣ”ದ ಟ್ರೇಲರ್ ಅನಾವರಣವಾಯಿತು. ರಾಘವೇಂದ್ರ ರಾಜಕುಮಾರ್, ಮಂಗಳ ರಾಘವೇಂದ್ರ ರಾಜಕುಮಾರ್, ಸಂಗೀತ ನಿರ್ದೇಶಕ ಹಂಸಲೇಖ, ಯವ ರಾಜಕುಮಾರ್, ನಟ ನವೀನ್ ಶಂಕರ್, ನಿರ್ದೇಶಕ ಸಿಂಪಲ್ ಸುನಿ ಸೇರಿದಂತೆ ಅನೇಕ ಗಣ್ಯರು ಸಮಾರಂಭಕ್ಕೆ ಆಗಮಿಸಿ, ” ಗ್ರಾಮಾಯಣ”ಕ್ಕೆ ಶುಭ ಕೋರಿದರು.

🌧️☔C S Patil : ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..! #cspatil #karnataka #pratidhvani

ನನಗೆ ವಿನಯ್ ರಾಜಕುಮಾರ್ ಎಂದರೆ ಬಹಳ ಇಷ್ಟ ಎಂದು‌ ಟ್ರೇಲರ್ ಬಿಡುಗಡೆ ಮಾತನಾಡಿದ ನಟ ದುನಿಯಾ ವಿಜಯ್, ಟ್ರೇಲರ್ ಅದ್ಭುತವಾಗಿದೆ. ದೇವನೂರು ಚಂದ್ರು ಉತ್ತಮ ನಿರ್ದೇಶಕ.‌ ನಾನು ಅವರನ್ನು ಎರಡನೇ ಸೂರಿ ಅಂತಲೇ ಕರೆಯುತ್ತೇನೆ.‌ ಈ ಚಿತ್ರವನ್ನು ನಿರ್ಮಾಣ ಮಾಡಿರುವ ಲಹರಿ ಸಂಸ್ಥೆಗೆ ಹಾಗೂ‌ ಇಡೀ “ಗ್ರಾಮಾಯಣ” ತಂಡಕ್ಕೆ ಒಳ್ಳೆಯದಾಗಲಿ ಎಂದರು.

ಅಪರ್ಣ, “ಗ್ರಾಮಾಯಣ” ಚಿತ್ರದ ಚಿತ್ರೀಕರಣ ಮುಗಿಸಿಕೊಂಡು ಬಂದ‌ ಮೇಲೆ ಅಲ್ಲಿನ ವಿಷಯಗಳನ್ನು ನನ್ನ ಬಳಿ ಹಂಚಿಕೊಳ್ಳುತ್ತಿದ್ದರು. ಇಂದು ಅವರಿಲ್ಲದೆ ಅವರ ಅಭಿನಯದ ಚಿತ್ರದ ಟ್ರೇಲರ್ ಅನಾವರಣ ಮಾಡಿದ್ದು, ಬಹಳ ಬೇಸರವಾಗಿದೆ‌. “ಗ್ರಾಮಾಯಣ” ಯಶಸ್ವಿಯಾಗಲಿ ಎಂದು ನಟಿ ಅಪರ್ಣ ಪತಿ ನಾಗರಾಜ್ ವಸ್ತಾರೆ ಹೇಳಿದರು.

Nagaraj Vastare : ಪತ್ನಿ ನೆನೆದು ವೇದಿಕೆ ಮೇಲೆ ಕಣ್ಣೀರಿಟ್ಟ ನಾಗರಾಜ ವಸ್ತಾರೆ..! #pratidhvani

ಈ ಚಿತ್ರದ ಬಗ್ಗೆ ನಾವು ಹೇಳುದಕ್ಕಿಂತ ಅಭಿಮಾನಿಗಳು ಹೇಳಬೇಕು. ಜುಲೈ 3 ಚಿತ್ರ ತೆರೆಗೆ ಬರುತ್ತಿದೆ. ಎಲ್ಲರೂ ನೋಡಿ. ಪ್ರೋತ್ಸಾಹ ನೀಡಿ ಎಂದರು ನಟ ರಾಘವೇಂದ್ರ ರಾಜಕುಮಾರ್. ಅಣ್ಣನ ಚಿತ್ರ ಯಶಸ್ವಿಯಾಗಲೆಂದು ಯುವ ರಾಜಕುಮಾರ್ ಹಾರೈಸಿದರು. ನಿರ್ದೇಶಕ ಸಿಂಪಲ್ ಸುನಿ ಚಿತ್ರದ ಮೊದಲ ಪ್ರದರ್ಶನಕ್ಕೆ ಒಂದು ಆಡಿಯನ್ನೇ ಬುಕ್ ಮಾಡುವುದಾಗಿ ಹೇಳಿದರು. ನಟ ನವೀನ್ ಶಂಕರ್ ಕೂಡ “ಗ್ರಾಮಾಯಣ”ಕ್ಕೆ ಶುಭ ಕೋರಿದರು.

“ಗ್ರಾಮಾಯಣ” ಟ್ರೇಲರ್ ಚೆನ್ನಾಗಿ ಬಂದಿದೆ. ಚಿತ್ರ ಇನ್ನೂ ಚೆನ್ನಾಗಿ ಬಂದಿದೆ. ಇದು ನಮ್ಮ ಲಹರಿ ಸಂಸ್ಥೆ ನಿರ್ಮಾಣದ ಒಂಭತ್ತನೇ ಚಿತ್ರ. ವಿನಯ್ ರಾಜಕುಮಾರ್ ಅವರ ಅಭಿನಯದ ಒಂಭತ್ತನೇ ಚಿತ್ರವೂ ಹೌದು. ಒಂಭತ್ತು ನಮ್ಮ ಸಂಸ್ಥೆಗೆ ಅದೃಷ್ಟದ ಸಂಖ್ಯೆ.‌ ಇಂದು ಆಗಮಿಸಿದ ಎಲ್ಲಾ ಅತಿಥಿಗಳಿಗೆ ಹಾಗೂ ಇಡೀ ಚಿತ್ರತಂಡಕ್ಕೆ ಧನ್ಯವಾದ ಎಂದರು. ನಿರ್ಮಾಪಕ ನವೀನ್ ಮನೋಹರ್ ಅವರು ಸಹ ಎಲ್ಲರಿಗೂ ಧನ್ಯವಾದ ಹೇಳೊದರು. ಲಹರಿ ಸಂಸ್ಥೆಯ ಸ್ಥಾಪಕ ಮನೋಹರ್ ನಾಯ್ಡು ಹಾಗೂ ಅವರ ಸಹೋದರ ರಮೇಶ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ‌

Lahari Velu : ಮನದುಂಬಿ ಗ್ರಾಮಾಯಣ ಬಗ್ಗೆ ಮಾತಾಡಿದ ಲಹರಿ ವೇಲು..! #laharivelu #Graamaayana

ಈ ವೇದಿಕೆ ನೋಡುತ್ತಿದ್ದರೆ, ನನಗೆ ಚಿತ್ರದ ಆರಂಭದ ದಿನಗಳು ನೆನಪಾಗುತ್ತಿದೆ. ನಮ್ಮ ಚಿತ್ರ ಶುರುವಾಗಿ ಇಷ್ಟು ವರ್ಷ ಆಯಿತು ಅಂತ ಎಲ್ಲರೂ ಹೇಳುತ್ತಿದ್ದಾರೆ. ಆದರೆ ಎಲ್ಲದಕ್ಕೂ ಸಮಯ ಬರಬೇಕು. ಲಹರಿ ಸಂಸ್ಥೆಯವರು ನಮ್ಮ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಅವರಿಗೆ, ನಿರ್ದೇಶಕರಿಗೆ, ಇಡೀ ತಂಡಕ್ಕೆ ಹಾಗೂ ಆಗಮಿಸಿದ ಪ್ರತಿಯೊಬ್ಬ ಗಣ್ಯರಿಗೂ ಧನ್ಯವಾದ ಎಂದು ಮಾತನಾಡಿದ ನಾಯಕ ವಿನಯ್ ರಾಜಕುಮಾರ್, ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಈ ಚಿತ್ರದಲ್ಲಿ ಮಾಡಿರುವುದಾಗಿ ಹೇಳಿದರು.

ಚಿತ್ರದ ಬಗ್ಗೆ ನಾನು ಹೇಳುವುದೇನು ಇಲ್ಲ. ಒಂದಂತೂ ಹೇಳುತ್ತೇನೆ. ಕೊಟ್ಟ ದುಡ್ಡಿಗೆ ಮೋಸವಾಗದ ಚಿತ್ರವಿದು. ಒಂದೊಳ್ಳೆ ಚಿತ್ರ ಮೂಡಿಬರಲು ಸಹಕಾರ ನೀಡಿದ ನಿರ್ಮಾಪಕರಿಗೆ ,‌ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ಧನ್ಯವಾದ ಎಂದು ಹೇಳಿದ ನಿರ್ದೇಶಕ ದೇವನೂರು ಚಂದ್ರು ತುಂಬಾ ಭಾವುಕರಾದರು.

Arun Sagar : ಗ್ರಾಮಾಯಣ ಸಿನಿಮಾ ಬಗ್ಗೆ ನಟ ಅರುಣ್ ಸಾಗರ್ ಏನಂದ್ರು..! #Graamaayana #VinayRajkumar

ನಟಿ ಮೇಘ ಶೆಟ್ಟಿ ಕೂಡ ಎಲ್ಲರಿಗೂ ಧನ್ಯವಾದ ತಿಳಿಸಿದರು. ನಟ ಅರುಣ್ ಸಾಗರ್, ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ, ಛಾಯಾಗ್ರಾಹಕ ಸಂತೋಷ್ ರೈ ಪಾತಾಜೆ, ನೃತ್ಯ ನಿರ್ದೇಶಕ ಮುರಳಿ ಮಾಸ್ಟರ್, ಸಾಹಸ ನಿರ್ದೇಶಕ ಡಿಫರೆಂಟ್ ಡ್ಯಾನಿ ಹಾಗೂ ಗೀತರಚನೆಕಾರ ಪ್ರಮೋದ್ ಮರವಂತೆ ಮುಂತಾದವರು “ಗ್ರಾಮಾಯಣ” ಚಿತ್ರದ ಕುರಿತು ಮಾತನಾಡಿದರು.

ವಿನಯ್ ರಾಜಕುಮಾರ್, ಮೇಘ ಶೆಟ್ಟಿ, ಲೂಸ್ ಮಾದ ಯೋಗೀಶ್, ಅಚ್ಯುತಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಅರುಣ್ ಸಾಗರ್, ಬಲ ರಾಜವಾಡಿ, ಅಪರ್ಣ ವಸ್ತಾರೆ, ಸೀತಾ ಕೋಟೆ, ಪ್ರಶಾಂತ್ ಹೊನ್ನಾಳಿ, ಅವಿನಾಶ್ ರೈ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Arun Sagar : ಗ್ರಾಮಾಯಣ ಸಿನಿಮಾ ಬಗ್ಗೆ ನಟ ಅರುಣ್ ಸಾಗರ್ ಏನಂದ್ರು..! #Graamaayana #VinayRajkumar
Previous Post

ಯಶ್‌ ‘ಟಾಕ್ಸಿಕ್’ ಕುರಿತು ಹುಮಾ ಖುರೇಷಿ ಗುಣಗಾನ: 8 ನಿಮಿಷದ ಝಲಕ್ ನೋಡಿ ಏನಂದ್ರು ಗೊತ್ತಾ?

Next Post

Breaking: ಬಿಜೆಪಿ ವಕ್ತಾರ ಎಂ.ಜಿ ಮಹೇಶ್ ಪಕ್ಷದಿಂದ ಉಚ್ಚಾಟನೆ

Related Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್
Top Story

ಸಂಕ್ರಾಂತಿಗೆ ಬಿಲ್ಲ ರಂಗ ಬಾಷ ರಿಲೀಸ್? ನಿರ್ಮಾಪಕಿ ರೀಟ್ವೀಟ್‌ಗೆ ಕಿಚ್ಚನ ಫ್ಯಾನ್ಸ್‌ ಫುಲ್‌ ಖುಷ್…‌

by ಪ್ರತಿಧ್ವನಿ
June 29, 2026
0

ಕಿಚ್ಚ ಸುದೀಪ್‌ ಮಾರ್ಕ್‌ ಸಿನಿಮಾ ನಂತರ ಇದೀಗ ಬಿಲ್ಲ ರಂಗ ಬಾಷ ಸಿನಿಮಾದಲ್ಲಿ ಬಿಝಿಯಾಗಿದ್ದಾರೆ. ಸದ್ಯ ಆ ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಕಳೆದೆರಡು ದಿನಗಳಿಂದ ಬೆಂಗಳೂರಿನಲ್ಲೆ ಒಂದಷ್ಟು...

Read moreDetails
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

ಜಗತ್ತಿನಾದ್ಯಂತ ಭೂಕಂಪಗಳ ಸರಣಿ; ಭಾರತಕ್ಕೂ ಇದೆಯೇ ಅಪಾಯ? ತಜ್ಞರು ಹೇಳಿದ್ದೇನು

June 29, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

ಆರ್‌ಎಸ್‌ಎಸ್ ವಿವಾದದಲ್ಲಿ ಪ್ರಿಯಾಂಕ್ ಖರ್ಗೆ ಸಂಕಷ್ಟ; ನ್ಯಾಯಾಲಯದಿಂದ ಸಮನ್ಸ್

June 29, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

June 29, 2026
ಮತ್ತೆ ಒಂದಾದ ‘ಪ್ರೇಮಂ’ ಜೋಡಿ: ನಿವಿನ್ ಪೌಲಿ 50ನೇ ಸಿನಿಮಾ ‘ವಿಜಯಂ’

ಮತ್ತೆ ಒಂದಾದ ‘ಪ್ರೇಮಂ’ ಜೋಡಿ: ನಿವಿನ್ ಪೌಲಿ 50ನೇ ಸಿನಿಮಾ ‘ವಿಜಯಂ’

June 29, 2026
Next Post
Breaking: ಬಿಜೆಪಿ ವಕ್ತಾರ ಎಂ.ಜಿ ಮಹೇಶ್ ಪಕ್ಷದಿಂದ ಉಚ್ಚಾಟನೆ

Breaking: ಬಿಜೆಪಿ ವಕ್ತಾರ ಎಂ.ಜಿ ಮಹೇಶ್ ಪಕ್ಷದಿಂದ ಉಚ್ಚಾಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada