ಟೀಮ್ ಇಂಡಿಯಾದ (ಟೀಮ್ india) ಮಾಜಿ ಆಟಗಾರ ವಿನೋದ್ ಕಾಂಬ್ಳಿ (Vinod kambli) ಸದ್ಯ ಥಾಣೆಯ ಆಕೃತಿ ಆಸ್ಪತ್ರೆಯಲ್ಲಿ (Akruthi hospital) ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂತ್ರ ಸೋಂಕು ಸೇರಿದಂತೆ ವಿವಿಧ ಸಮಸ್ಯೆಗಳಿಂದ ಬಳಲುತ್ತಿರುವ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಇದೇ ಖುಷಿಯಲ್ಲಿ ಕಾಂಬ್ಳಿ ಆಸ್ಪತ್ರೆಯಲ್ಲಿ ಡ್ಯಾನ್ಸ್ ಮಾಡಿದ್ದಾರೆ.

ಆಸ್ಪತ್ರೆಯಲ್ಲಿ ಮಹಿಳೆಯೊಂದಿಗೆ ನೃತ್ಯ ಮಾಡುತ್ತಿರುವ ವಿನೋದ್ ಕಾಂಬ್ಳಿ ಅವರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ (Social media) ವೈರಲ್ ಆಗಿದ್ದು, ಇದರೊಂದಿಗೆ ಅವರ ಆರೋಗ್ಯದಲ್ಲಿ ಉತ್ತಮ ಚೇತರಿಕೆ ಕಂಡು ಬಂದಿರುವುದು ಬಹಿರಂಗವಾಗಿದೆ.

ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅತಿಯಾದ ಮದ್ಯಪಾನದ ಚಟದಿಂದ ಅನ್ಯಾರೋಗ್ಯಕ್ಕೆ ತುತ್ತಾಗಿ ಮತಿ ಕಳೆದುಕೊಂಡವರಂತೆ ವರ್ತಿಸುತ್ತಿದ್ದರು. ವೀಲ್ ಚೇರ್ ಬಿಟ್ಟು ಮೇಲೇಳಲಾಗದ ಪರಿಸ್ಥಿತಿಯಲ್ಲಿ ಇದ್ದವರನ್ನು ನಿರಂತರ ಚಿಕಿಸ್ತೆಗೆ ಒಳಪಡಿಸಲಾಗಿದ್ದು, ಆಸ್ಪತ್ರೆ ಸಂಪೂರ್ಣ ಉಚಿತ ಚಿಕಿಸ್ತೆಯ ಭರವಸೆ ನೀಡಿದೆ.
ಹೀಗೆ ಚಿಕಿತ್ಸೆಯಿಂದ ಕೊಂಚ ಗುಣಮುಖರಾಗಿರುವ ವಿನೋದ್ ಕಾಂಬ್ಳಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಜೊತೆ ಡಾನ್ಸ್ ಮಾಡಿ ಹರ್ಷ ವ್ಯಕ್ತಪಡಿಸಿದ್ದಾರೆ.











