ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣಾ ರಣಕಹಳೆ ಮೊಳಗಿದೆ. ಇದೇ ಮೇ 10ರಂದು ಚುನಾವಣೆ ನಡೆಯಲಿದೆ. ಈಗಾಗಲೇ ಪಕ್ಷದ ನಾಯಕರು, ಮುಖಂಡರು ಅಖಾಡಕ್ಕಿಳಿದು, ಭರ್ಜರಿ ಮತಪ್ರಚಾರ ನಡೆಸಿದ್ದಾರೆ. ಈ ಮಧ್ಯೆ ರಾಜಕೀಯ ನಾಯಕರ ಆರೋಪ – ಪ್ರತ್ಯಾರೋಪಗಳು ತಾರಕಕ್ಕೇರಿವೆ.

ಮೇ 5 ರಂದು ಮಸ್ಕಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಅಬ್ಬರದ ಭಾಷಣದೊಂದಿಗೆ ಆರ್ ಪಿ ಆಕ್ಟ್ ಉಲ್ಲಂಘನೆ ಮಾಡಿದ್ದ ವಿಜಯಪುರ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಮತ್ತೊಂದು ನೋಟಿಸ್ ಜಾರಿಯಾಗಿದೆ. ಯತ್ನಾಳ್ ಆ.ಪಿ.ಆಕ್ಟ್ ಉಲ್ಲಂಘನೆ ಮಾಡಿದ್ದಕ್ಕೆ ಕಾರಣ ಕೇಳಿ ಮಸ್ಕಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ.










