ನವೆಂಬರ್ 5ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್ನ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತದ ಸ್ಫೋಟಕ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ 49ನೇ ಏಕದಿನ ಶತಕ ಬಾರಿಸುವ ಮೂಲಕ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಸರಿಗಟ್ಟಿ ಇತಿಹಾಸ ಸೃಷ್ಟಿಸಿದ್ದಾರೆ.
ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 49 ಶತಕ ಸಿಡಿಸಿ ಅತಿ ಹೆಚ್ಚು ಶತಕ ಗಳಿಸಿದ ಬ್ಯಾಟ್ಸ್ಮನ್ ಪಟ್ಟಿಯಲ್ಲಿ ಭಾರತದ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರಿದ್ದರು ಈಗ ಆ ದಾಖಲೆಯನ್ನು ವಿರಾಟ್ ಕೊಹ್ಲಿ ಸರಿಗಟ್ಟಿ ಇತಿಹಾಸ ಬರೆದರು.
ವಿಶೇಷವೇನೆಂದರೆ ಇಂದು ವಿರಾಟ್ ಕೊಹ್ಲಿ ತಮ್ಮ 35ನೇ ಜನ್ಮದಿನ. ಇಂದೇ ಅವರು ಏಕದಿನ ಕ್ರಿಕೆಟ್ನಲ್ಲಿ 49ನೇ ಏಕದಿನ ಕ್ರಿಕೆಟ್ ಶತಕ ಬಾರಿಸಿ ದಾಖಲೆ ಬರೆದಿದ್ದಾರೆ. ಈಡನ್ ಗಾರ್ಡನ್ಸ್ನಲ್ಲಿ ನೆರೆದಿದ್ದ ಪ್ರೇಕ್ಷಕರು ಹಾಗೂ ಕೊಹ್ಲಿ ಅಭಿಮಾನಿಗಳು ಮೊಬೈಲ್ ಟಾರ್ಚ್ ಮೂಲಕ ಬೆಳಗಿಸಿ ಅವರ ಸಾಧನೆಯನ್ನು ಸಂಭ್ರಮಿಸಿದ್ದಾರೆ.
ಏಕದಿನ ಕ್ರಿಕೆಟ್ನಲ್ಲಿ 49ನೇ ಶತಕದ ಗಡಿ ತಲುಪಲು ವಿರಾಟ್ ಕೊಹ್ಲಿಗೆ ಕೇವಲ 277 ಇನ್ನಿಂಗ್ಸ್ಗಳಾಡಿದ್ದಾರೆ.

ವಿರಾಟ್ ಕೊಹ್ಲಿ ಶತಕ ಮತ್ತು ಶ್ರೇಯಸ್ ಅಯ್ಯರ್ ಅವರ ಅರ್ಧಶತಕದ ಇನ್ನಿಂಗ್ಸ್ನ ನೆರವಿನಿಂದ ಟೀಮ್ ಇಂಡಿಯಾ ಕೋಲ್ಕತ್ತಾದ ಈಡನ್ಗಾರ್ಡನ್ಸ್ ಮೈದಾನದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 327 ರನ್ನ ಸ್ಪರ್ಧಾತ್ಮಕ ಗುರಿಯನ್ನು ನೀಡಿದೆ. ನಿಗದಿತ 50 ಓವರ್ ಆಡಿದ ಭಾರತ ತಂಡ 5 ವಿಕೆಟ್ ಕಳೆದುಕೊಂಡು 326 ರನ್ ಕಲೆಹಾಕಿದೆ.