ಬ್ಯಾಟಿಂಗ್ ಮಾಸ್ಟರ್ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಪರ 7000 ರನ್ ಪೂರೈಸಿದ ದಾಖಲೆ ಬರೆದಿದ್ದಾರೆ.
ಮುಂಬೈನಲ್ಲಿ ಗುರುವಾರ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧ ಅರ್ಧಶತಕ ಸಿಡಿಸಿ ಭರ್ಜರಿಯಾಗಿ ಫಾರ್ಮ್ ಗೆ ಮರಳಿದ ಆರ್ ಸಿಬಿ ಪರ 7000 ಪೂರೈಸಿದರು. ಅಲ್ಲದೇ ತಂಡದ ಪರ ಅತೀ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಗೌರವಕ್ಕೆ ಪಾತ್ರರಾದರು.

ಆರ್ ಸಿಬಿ ಪರ ವಿರಾಟ್ ಕೊಹ್ಲಿ 236ನೇ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದು, 5 ಶತಕ ಹಾಗೂ 51 ಅರ್ಧಶತಕದೊಂದಿಗೆ 7000 ರನ್ ಗಡಿ ಪೂರೈಸಿದ್ದಾರೆ.
ಆರ್ ಸಿಬಿ ಪರ 4532 ರನ್ ಗಳಿಸಿರುವ ಎಬಿಡಿ ವಿಲಿಯರ್ಸ್ ಎರಡನೇ ಸ್ಥಾನದಲ್ಲಿದ್ದರೆ, ವೆಸ್ಟ್ ಇಂಡೀಸ್ ನ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಲ್ 3420 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ.






