ದಕ್ಷಿಣ ಆಫಿಕ್ರಾ ವಿರುದ್ದ ಟೆಸ್ಟ್ ಸರಣಿ ಸೋಲಿನ ಬಳಿಕ ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವವನ್ನು ತ್ಯಜಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕೊಹ್ಲಿ ಅವರು ದೀರ್ಘ ಪತ್ರ ಬರೆದುಕೊಂಡಿದ್ದಾರೆ.
ಭಾರತ ತಂಡವನ್ನು ಸತತ 7ವರ್ಷಗಳಿಂದ ಕಠಿಣ ಪರಿಶ್ರಮ ಪ್ರಾಮಾಣಿಕತೆಯಿಂದ ಮುನ್ನಡೆಸಿದ್ದೇನೆ. ಪ್ರತಿಯೊಂದು ವಿಷಯಕ್ಕೂ ಒಂದು ಕೊನೆಯಿರುತ್ತದೆ. ಅದಕ್ಕೆ ಈಗ ಸರಿಯಾದ ಸಮಯ ಕೂಡಿ ಬಂದಿದೆ ಎಂದು ತಿಳಿಸಿದ್ದಾರೆ. ಭಾರತ ತಂಡವನ್ನು ಮುನ್ನಡೆಸಲು ಅವಕಾಶ ಮಾಡಿಕೊಟ್ಟ ಬಿಸಿಸಿಐಗೆ ಧನ್ಯವಾದಗಳನ್ನು ತಿಳಿಸುವೆ. ಹಾಗೆಯೇ ನನ್ನ ಮೇಲೆ ನಂಬಿಕೆ ಇಟ್ಟಿದ್ದ ಎಂ ಎಸ್ ಧೋನಿ ಅವರನ್ನು ಈ ವೇಳೆ ಸ್ಮರಿಸುವೆ ಎಂದಿದ್ದಾರೆ.
ಈ ಬೆಳವಣಿಗೆ ಬೆನ್ನಲ್ಲೇ ಮುಂದಿನ ಟೆಸ್ಟ್ ನಾಯಕತ್ವವನ್ನು ಕೆ.ಎಲ್.ರಾಹುಲ್ ನಿಭಾಯಿಸಬಹುದು ಎನ್ನುವ ಮಾತುಗಳು ಕೇಳಿಬರುತ್ತಿವೆ.
— Virat Kohli (@imVkohli) January 15, 2022