ದೆಹಲಿ: ತವರಿನಲ್ಲಿ ನಡೆಯಲಿರುವ ಅಫ್ಘಾನಿಸ್ತಾನ(Afghanistan) ವಿರುದ್ಧದ ಟಿ20(T20I Series) ಸರಣಿಗೆ ಟೀಂ ಇಂಡಿಯಾ(Team India)ವನ್ನು ಪ್ರಕಟಿಸಲಾಗಿದ್ದು, ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ(Virat Kohli) ಬರೋಬ್ಬರಿ 14 ತಿಂಗಳುಗಳ ಬಳಿಕ ಟಿ20 ತಂಡದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಚೇಸ್ ಮಾಸ್ಟರ್ ಕೊಹ್ಲಿ ಕೊನೆಯದಾಗಿ 2022ರಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಕೊನೆಯದಾಗಿ ಟಿ20 ಪಂದ್ಯದಲ್ಲಿ ಕಾಣಿಸಿಕೊಂಡಿದ್ದರು. ಇದಾದ ನಂತರದ 14 ತಿಂಗಳುಗಳಲ್ಲಿ ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ವಿರಾಟ್ ಕಾಣಿಸಿಕೊಂಡಿರಲಿಲ್ಲ. ಆದರೆ ಇದೀಗ ಅಫ್ಘಾನಿಸ್ತಾನದ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ವಿರಾಟ್ ಕೊಹ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದು, 14 ತಿಂಗಳ ಬಳಿಕ ಅಂತಾರಾಷ್ಟ್ರೀಯ ಟಿ20 ಪಂದ್ಯವನ್ನಾಡಲು ಸಜ್ಜಾಗಿದ್ದಾರೆ.
ಟಿ20 ಕ್ರಿಕೆಟ್ನಲ್ಲಿ ಕಿಂಗ್ ಕೊಹ್ಲಿ ಅದ್ಭುತ ದಾಖಲೆ ಹೊಂದಿದ್ದು, 52.73ರ ಬ್ಯಾಟಿಂಗ್ ಸರಾಸರಿಯಲ್ಲಿ 4008 ರನ್ಗಳನ್ನು ಕಲೆಹಾಕಿದ್ದಾರೆ. 2022ರಲ್ಲಿ ರನ್ ಮಷಿನ್ ವಿರಾಟ್ ಕೊಹ್ಲಿ ಅಫ್ಘಾನಿಸ್ತಾನದ ವಿರುದ್ಧದ ಟಿ20 ಪಂದ್ಯದಲ್ಲಿ 122* ರನ್ಗಳ ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. 137.97ರ ಸ್ಟ್ರೈಕ್ ರೇಟ್ನೊಂದಿಗೆ ಕೊಹ್ಲಿ, 37 ಅರ್ಧಶತಕಗಳನ್ನು ದಾಖಲಿಸಿದ ಹೆಗ್ಗಳಿಕೆ ಹೊಂದಿದ್ದಾರೆ. ಟಿ20 ವಿಶ್ವಕಪ್ಗಳಲ್ಲಿ ಎರಡು ಬಾರಿ(2014, 2016) ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ಏಕೈಕ ಆಟಗಾರ ಎಂಬ ಹೆಗ್ಗಳಿಕೆ ಕೊಹ್ಲಿ ಅವರಿಗಿದೆ.