ಇಂದು ಬೆಂಗಳೂರಿನ (Bengaluru ) ಫ್ರೀಡಂಪಾರ್ಕ್‌ನಲ್ಲಿ (Freedom park) ಮತಗಳ್ಳತನದ ವಿರುದ್ಧ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul gandhi) ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ಪ್ರತಿಭಟನಾ ಸಮಾವೇಶಕ್ಕೆ ವೋಟ್ ಅಧಿಕಾರ್ ರ್ಯಾಲಿ ಎಂದು ಹೆಸರಿಡಲಾಗಿದೆ.ಈ ಪ್ರತಿಭಟನಾ ರ್ಯಾಲಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

2024ರ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ರಾಹುಲ್ ಗಾಂಧಿ ಬಾಂಬ್ ಸಿಡಿಸಿದ್ದಾರೆ. ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇವತ್ತು (ಆಗಸ್ಟ್ 08) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ಈ ಪ್ರತಿಭಟನಾ ಸಮಾವೇಶಕ್ಕೆ ‘ವೋಟ್ ಅಧಿಕಾರ್ ರ್ಯಾಲಿ’ ಎಂದು ಹೆಸರಿಸಲಾಗಿದ್ದು, ಪ್ರತಿಭಟನಾ ರ್ಯಾಲಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಇನ್ನು ಭದ್ರತೆಗಾಗಿ 6 ಸಾವಿರ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಇಂದು ವಾಹನ ಸವಾರರಿಗೆ ಕಿರಿಕಿರಿ ಆಗುವುದರಲ್ಲಿ ಅನುಮಾನವೇ ಇಲ್ಲ .. ಹೀಗಾಗಿ ಹಲವು ರಸ್ತೆಗಳಲ್ಲಿ ಸಂಚಾರ ಬಂದ್ ಮಾಡಿರುವ ಟ್ರಾಫಿಕ್ ಪೊಲೀಸರು, ಪರ್ಯಾಯ ಮಾರ್ಗಗಳನ್ನು ಆಯ್ಫುಕೊಳ್ಳಲು ಸೂಚನೆ ನೀಡಿದ್ದಾರೆ.