ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ – ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ -2023ರ ಕಾರ್ಯಚಟುವಟಿಕೆಗೆ ನೀಡಿದ್ದ ಅನುಮತಿಯನ್ನು ದುರುಪಯೋಗಗೊಂಡಿರುವ ಬಗ್ಗೆ ಹಾಗೂ ಚಿಲುಮೆ ಸಂಸ್ಥೆ ಮತದಾರರ ದತ್ತಾಂಶವನ್ನು ಅನಧಿಕೃತವಾಗಿ ಕದ್ದಿರುವ ಬಗ್ಗೆ ಪ್ರತಿಧ್ವನಿ ಮತ್ತು TheNewsMinute ಜಂಟಿ ತನಿಖಾ ವರದಿ ಪ್ರಕಟಿಸಿದ ಬೆನ್ನಲ್ಲೇ ಬಿಬಿಎಂಪಿ ಆಯುಕ್ತ ಹಾಗೂ ಬೆಂಗಳೂರು ಜಿಲ್ಲಾಧಿಕಾರಿಯನ್ನು ಸೇವೆಯಿಂದ ಅಮಾನತ್ತು ಮಾಡಲಾಗಿದೆ.
ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್ ರನ್ನು ಅಮಾನತ್ತು ಮಾಡಿ ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಬೆಂಗಳೂರಿನಲ್ಲಿ ನಡೆದ ಮತದಾರರ ಅಕ್ರಮ ಪರಿಷ್ಕರಣೆ ವಿಚಾರವಾಗಿ ಕೇಂದ್ರ ಚುನಾವಣಾ ಆಯೋಗ ಮಧ್ಯ ಪ್ರವೇಶಿಸಿದ್ದು ರಾಜ್ಯ ಚುನಾವಣಾ ಆಯೋಗಕ್ಕೆ ಚಾಟಿ ಬೀಸಿದೆ.