ಬೆಂಗಳೂರು: ಮೇ.22 : ಮತದಾರರ ದತ್ತಾಂಶ (Voter ID Scam) ಸಂಗ್ರಹಿಸಲು ಎನ್‌ಜಿಒ (NGO) ಚಿಲುಮೆಗೆ (Chilume institute) ಅವಕಾಶ ನೀಡಿದ ಆರೋಪದ ಮೇಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ವಕ್ತಾರ ರಮೇಶ್ ಬಾಬು (RameshBabu) ಆಗ್ರಹಿಸಿದ್ದಾರೆ.
ವೋಟರ್ ಐಡಿ ಅಕ್ರಮದ ಪ್ರಕರಣವನ್ನು ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ನಿಮ್ಮ ʼಪ್ರತಿಧ್ವನಿʼ ವರದಿಯನ್ನು ಬಿತ್ತರಿಸಿತ್ತು. ಪ್ರತಿಧ್ವನಿಯಲ್ಲಿ ಸುದ್ದಿ ಪ್ರಕಟವಾದ ಬಳಿಕ ಬಿಜೆಪಿ ಸರ್ಕಾರ ಈ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಹೇಳಿದ್ದರು.
ಹೊಸ ಸರ್ಕಾರ ಚಿಲುಮೆ ಸಂಸ್ಥೆಯ (Chilume institute) ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು (investigation) ರಚಿಸಬೇಕು ಎಂದು ಬಾಬು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರನ್ನ ಮನವಿ ಮಾಡಿದ್ದಾರೆ. ಬೆಂಗಳೂರು ಮಹಾನಗರ ಪಾಲಿಕೆಯ ಜಿಲ್ಲಾ ಚುನಾವಣಾ ಅಧಿಕಾರಿಯಾಗಿ ಪಾಲಿಕೆಯ ಮುಖ್ಯ ಆಯುಕ್ತರಾಗಿದ್ದ ತುಷಾರ್ ಗಿರಿನಾಥ್ ಅವರು, ಚಿಲುಮೆ ಖಾಸಗಿ ಸಂಸ್ಥೆಗೆ ಮತದಾರರ ಖಾಸಗಿ ವಿಷಯ ಸಂಗ್ರಹಣೆಗೆ ಅವಕಾಶ ನೀಡಿ ಲೋಪ ಎಸಗಿದ್ದಾರೆ. ಈ ಮೂಲಕ ಬಿಬಿಎಂಪಿ ವ್ಯಾಪ್ತಿಯ ಸುಮಾರು ೪-೫ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ (Congress) ಪಕ್ಷದ ಅಭ್ಯರ್ಥಿಗಳ ಸೋಲಿಗೆ ಕಾರಣರಾಗಿದ್ದಾರೆ. ಹೀಗಾಗಿ ಇವರ ವಿರುದ್ಧ ಕ್ರಮ ಜರುಗಿಸ ಬೇಕು ಎಂದು ರಮೇಶ್ ಬಾಬು ಮನವಿ ಮಾಡಿದ್ದಾರೆ.