ಬಿಜೆಪಿ ಸುನಾಮಿಯಲ್ಲಿ ಕೊಚ್ಚಿ ಹೋಗಿದ್ದ ಕಾಂಗ್ರೆಸ್ಗೆ ಹಾನಗಲ್ನ ಜನ ಹುಲ್ಲುಕಡ್ಡಿಯ ರೂಪದಲ್ಲಿ ಕೃಪೆ ತೋರಿದ್ದಾರೆ ಎಂದು ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
2023ರ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಅತ್ಯಧಿಕ ಸ್ಥಾನಗಳನ್ನ ಪಡೆದು ಮತ್ತೆ ಅಧಿಕಾರಕ್ಕೇರಲಿದೆ ಎಂದು ವಿಶ್ವಾಸವನ್ನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಜಾತಿ ರಾಜಕಾರಣ, ಅಲ್ಪಸಂಖ್ಯಾತರ ಓಲೈಕೆ, ಜಾತಿಗಳ ನಡುವೆ ಒಡಕು ಮೂಡಿಸುವುದು ಮತ್ತಿತ್ತರ ಕಾರಣಗಳಿಂದಾಗಿ ಸಿಂಧಗಿಯಲ್ಲಿ ಕಾಂಗ್ರೆಸ್ ಹೀನಾಯ ಸೋಲನ್ನುಭವಿಸಿದೆ ಎಂದು ಟೀಕಿಸಿದ್ದಾರೆ.
ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಸುನಾಮಿಗೆ ಬಿಜೆಪಿ ಕೊಚ್ಚಿ ಹೋಗಲಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಈಶ್ವರಪ್ಪ ಹಾನಗಲ್ನಲ್ಲಿ ಗೆದ್ದಿರುವುದನ್ನೇ ದೊಡ್ಡ ಸಾಧನೆ ಎಂದು ಹೇಳಿಕೊಂಡು ಕಾಂಗ್ರೆಸ್ನವರು ಓಡಾಡುತ್ತಿದ್ದಾರೆ. ಮುಖ್ಯಮಂತ್ರಿ ತವರು ಜಿಲ್ಲೆಯಲ್ಲಿ ಬಿಜೆಪಿ ಸೋತಿರುವುದರಿಂದ ಸರ್ಕಾರಕ್ಕೆ ಯಾವುದೇ ರೀತಿಯ ಹಿನ್ನಡೆ ಆಗುವುದಿಲ್ಲ.
ಕಾಂಗ್ರೆಸ್ ಪಕ್ಷದಲ್ಲಿನ ಗುಂಪುಗಳನ್ನು ಉಲೇಖಿಸಿ ಮಾತಡಿದ ಕೆ.ಎಸ್.ಈಶ್ವರಪ್ಪ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಬಿಜೆಪಿ ಬಗ್ಗೆ ಮಾತನಾಡುವ ಬದಲು ತಮ್ಮ ಪಕ್ಷದ ಮೇಲೆ ಪರಿಣಾಮವನ್ನ ಬೀರುತ್ತಿರುವ ಆಂತರಿಕ ಸಮಸ್ಯೆಗಳನ್ನು ಪರಿಹರಿಸುವತ್ತ ಮೊದಲು ಗಮನಹರಿಸಬೇಕು ಎಂದು ಸಲಹೆಯನ್ನ ನೀಡಿದ್ದಾರೆ.
ಹಿಂದೆ ಮಾಜಿ ಮುಖ್ಯಮಂತ್ರಿಗಳಾದ ಜೆ.ಹೆಚ್.ಪಟೇಲ್ ಮತ್ತು ಸಿದ್ದರಾಮಯ್ಯ ತಮ್ಮ ಕ್ಷೇತ್ರದಲ್ಲೇ ಸೋತಿದ್ದರು ಒಂದು ಕ್ಷೇತ್ರದಲ್ಲಿ ಪಕ್ಷ ಸೋತರೆ ಅದು ಎಂದಿಗೂ ನಿರ್ಣಾಯಕ ಎನ್ನಿಸುವುದಿಲ್ಲ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಶುರುವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ಗೆ ಪ್ರತಿಕ್ರಿಯಿಸಿದ ಈಶ್ವರಪ್ಪ ರಾಜ್ಯದಲ್ಲಿ ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂಬ ಕಾರಣಕ್ಕೆ ಹಾನಗಲ್ನ ಜನರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನ ಬೆಂಬಲಿಸಿದ್ದಾರೆ ಎಂದು ಸಿದ್ದರಾಮಯ್ಯನವರ ಟ್ವೀಟ್ಗೆ ತಿರುಗೇಟು ನೀಡಿದ್ದಾರೆ.
ರಾಜ್ಯದಲ್ಲಿ ನಡೆದ ಎರಡು ಉಪಚುನಾವಣೆಯಲ್ಲಿ ಬಿಜೆಪಿ ಒಂದರಲ್ಲಿ ಸೋತಿದೆ ಎಂಬ ಕಾರಣಕ್ಕೆ ರಾಜ್ಯದಲ್ಲಿ ಬೊಮ್ಮಾಯಿ ನೇತೃತ್ವದ ಸರ್ಕಾರದ ವಿರುದ್ದ ಆಡಳಿತ ವಿರೋಧಿ ಅಲೆ ಇದೆ ಎಂದು ಪರಿಗಣಿಸಲು ಸಾಧ್ಯವಿಲ್ಲ. ದೇಶದಲ್ಲಿ ಉಪಚುಣಾವಣೆ ನಡೆದ 30 ಕ್ಷೇತ್ರಗಳ ಪೈಕಿ ಬಿಜೆಪಿ 25ರಲ್ಲಿ ಜಯ ಸಾಧಿಸಿದೆ ಎಂದು ಹೇಳಿದ್ದಾರೆ. ಹಾನಗಲ್ ಮುಖ್ಯಮಂತ್ರಿಯವರ ತವರು ಕ್ಷೇತ್ರವಾದ ಕಾರಣ ಬಿಜೆಪಿ ಕ್ಷೇತ್ರವನ್ನ ಕಳೆದುಕೊಳ್ಳಬಾರದಿತ್ತು ಎಂದು ಪ್ರತಿಪಾದಿಸಿದ್ದಾರೆ. ಸಿಂಧಗಿಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ 31,185 ಮತಗಳ ಅಂತರದಲ್ಲಿ ಜಯ ಸಾಧಿಸಿರುವುದು ನಮ್ಮಗೆ ಸಂತಸವಾಗಿದೆ ಎಂದು ಹೇಳಿದ್ದಾರೆ