ಬೆಂಗಳೂರು (Bengaluru) : ನಮ್ಮ ಶಾಸಕರಿಗೆ ರಾಜ್ಯಸಭೆ ಚುನಾವಣೆ ಮತದಾನದ ತರಬೇತಿ ಹಾಗೂ ಅಣಕು ಮತದಾನ ಮಾಡಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DKShivakumar) ತಿಳಿಸಿದರು.
ಇಂದು ಹಿಲ್ಟನ್ ಹೋಟೆಲ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಅಣಕು ಮತದಾನ ನಡೆಸಿ, ನಾಳೆ ಹೋಟೆಲ್ ನಿಂದ ನೇರವಾಗಿ ವಿಧಾನಸೌಧಕ್ಕೆ ತೆರಳಿ ನಮ್ಮ ಶಾಸಕರು ಮತದಾನ ಮಾಡಲಿದ್ದಾರೆ ಎಂದು ತಿಳಿಸಿದರು.

ನಾಳೆ ಮತದಾನದ ವೇಳೆ ಅಡ್ಡಮತದಾನ ನಡೆಯಲಿದೆಯೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಕಡೆಯಿಂದ ಯಾವುದೇ ಅಡ್ಡ ಮತದಾನ ನಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಅವರ ಅಧ್ಯಕ್ಷತೆಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ.
#karnataka #bengaluru #dkshivakumar #rajyasabhaelection #congress






