ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಸಿಎಂ ಬದಲಾವಣೆ ಕುರಿತು ಭಾನುವಾರ ಸಂಜೆ ಸ್ಪಷ್ಟ ಚಿತ್ರಣ ಲಭಿಸಲಿದೆಯೆಂದು, ಯಡಿಯೂರಪ್ಪ ಅವರನ್ನು ಇಳಿಸಿಯೇ ತೀರುತ್ತೇವೆ ಅಂದುಕೊಂಡವರಿಗೆ ನಿರಾಸೆಯಾಗಿದೆ. ಭಾನುವಾರ ರಾತ್ರಿಯವರೆಗೆ ಹೈಕಮಾಂಡಿನಿಂದ ಯಾವುದೇ ಸಂದೇಶ ಬಾರದ ಹಿನ್ನೆಲೆಯಲ್ಲಿ ಇನ್ನಷ್ಟು ಗೊಂದಲಗಳು ಮೂಡಿವೆ.
ನಾಯಕತ್ವ ಬದಲಾವಣೆ ಕುರಿತು ವರಿಷ್ಠರ ಸೂಚನೆಗಾಗಿ ಕಾಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ‘ಯಾವುದೇ ಸಂದೇಶ ಬಂದರೂ ಪಾಲಿಸುತ್ತೇನೆ’ ಎಂದು ಪುನರುಚ್ಛರಿಸಿದ್ದಾರೆ.

ಯಡಿಯೂರಪ್ಪ ನೇತೃತ್ವದ ಸರ್ಕಾರ ಇದೇ 26ಕ್ಕೆ ಎರಡು ವರ್ಷಗಳನ್ನು ಪೂರೈಸಿದ್ದು, ನಾಯಕತ್ವ ಬದಲಾವಣೆ ಸಂಬಂಧಿಸಿದಂತೆ ಭಾನುವಾರ (ಜುಲೈ 25) ವರಿಷ್ಠರಿಂದ ಸಂದೇಶ ಬರಲಿದೆ ಎಂದು ಹೇಳಳಾಗಿತ್ತು. ಹಾಗಿದ್ದರೂ ಭಾನುವಾರ ಬೆಳಿಗ್ಗೆಯಿಂದಲೇ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಂಡು, ಪ್ರವಾಹ ಪರಿಸ್ಥಿತಿ ಅವಲೋಕಿಸಿದ್ದರು. ವರಿಷ್ಠರ ಸಂದೇಶವನ್ನು ಪಾಲಿಸುವುದಾಗಿ ಅಲ್ಲಿಯೂ ಹೇಳಿದ್ದರು.
Also Read: ಗೊಂದಲದ ಗೂಡಾದ ರಾಜ್ಯ ರಾಜಕಾರಣ: ಬಿಎಸ್‌ವೈ ಪರ ಜೆಪಿ ನಡ್ಡಾ ಅಚ್ಚರಿಯ ಹೇಳಿಕೆ!
ಆದರೆ, ನಾಯಕತ್ವ ಬದಲಾವಣೆ ಕುರಿತಂತೆ ಯಾವ ಸೂಚನೆಯನ್ನೂ ಬಿಜೆಪಿ ದೆಹಲಿ ನಾಯಕರು ಬಿಟ್ಟು ಕೊಡುತ್ತಿಲ್ಲ. ‘ನಾಯಕತ್ವ ಬದಲಾವಣೆ ಕುರಿತು ಪಕ್ಷದ ವರಿಷ್ಠರಿಂದ ಯಾವುದೇ ಸಂದೇಶ ಬಂದಿಲ್ಲ’ ಎಂದು ಹೇಳಿರುವ ಬಿಎಸ್‌ವೈ ‘ಯಾವ ಬಗೆಯ ಸಂದೇಶ ಬಂದರೂ ಶಿರಸಾವಹಿಸಿ ಪಾಲಿಸಲು ಸಿದ್ಧ’ ಎಂದು ಪದೇ ಪದೇ ಹೇಳಿದ್ದಾರೆ.
Also Read: ನಾಯಕತ್ವ ಬದಲಾವಣೆ; ಲಿಂಗಾಯತರು, ಬ್ರಾಹ್ಮಣರ ನಡುವೆ ತೀವ್ರ ಪೈಪೋಟಿ; ಚುನಾವಣೆ ಅಸ್ತ್ರವಾಗಿ ದಲಿತ ಸಿಎಂ
ಈ ಎಲ್ಲ ಬೆಳವಣಿಗೆಗಳ ಮಧ್ಯೆಯೇ ಗೋವಾದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು, ಯಡಿಯೂರಪ್ಪ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದ್ದಾರೆ. ನಾಯಕತ್ವ ಬದಲಾವಣೆ ಚರ್ಚೆಯೇ ಇಲ್ಲವೆಂದಿರುವ ನಡ್ಡಾ ಹೇಳಿಕೆ ನಾನಾ ಬಗೆಯ ವಿಶ್ಲೇಷಣೆಗೆ ಎಡೆ ಮಾಡಿ ಕೊಟ್ಟಿದೆ.
ಬೆಳಗಾವಿ ಪ್ರವಾಸ ಮುಗಿಸಿ ನಗರಕ್ಕೆ ಹಿಂದಿರುಗಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಯಡಿಯೂರಪ್ಪ, ‘ಭಾನುವಾರ ರಾತ್ರಿ ಅಥವಾ ಸೋಮ ವಾರ ಬೆಳಿಗ್ಗೆ ಸಂದೇಶ ಬರಬಹುದು ಎಂಬ ನಿರೀಕ್ಷೆ ಇದೆ. ಸಂದೇಶ ಬಂದ ಬಳಿಕ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವೆ. ಅಧಿಕಾರದಲ್ಲಿ ಮುಂದುವರಿಯಿರಿ ಎಂದರೆ ಮುಖ್ಯಮಂತ್ರಿಯಾಗಿ ಕೆಲಸ ನಿರ್ವಹಿಸಿಕೊಂಡು ಹೋಗುವೆ. ರಾಜೀನಾಮೆಗೆ ಸೂಚಿಸಿದರೆ ತಕ್ಷಣವೇ ಹುದ್ದೆಯಿಂದ ಕೆಳಗೆ ಇಳಿಯುತ್ತೇನೆ ಎಂದು ಹೇಳಿದ್ದಾರೆ.
Also Read: ಹೈಕಮಾಂಡ್ ಅಳೆದು ತೂಗಿ ಅರ್ಹರನ್ನೇ ಸಿಎಂ ಮಾಡುತ್ತಾರೆ: ಸಚಿವ ಮುರುಗೇಶ್ ನಿರಾಣಿ
‘ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವ ಕ್ಷಣದವರೆಗೂ ಕೆಲಸ ಮುಂದುವರಿಸುತ್ತೇನೆ. ಸೋಮವಾರಕ್ಕೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗುತ್ತಿವೆ. ಈ ಸಂಬಂಧ ಒಂದು ಕಾರ್ಯಕ್ರಮ ಆಯೋಜಿಸಲಾಗಿದೆ. ಆ ಕಾರ್ಯಕ್ರಮದಲ್ಲಿ ನಮ್ಮ ಸರ್ಕಾರದ ಸಾಧನೆಗಳ ಕುರಿತು ಮಾತನಾಡುತ್ತೇನೆ’ ಎಂದು ಅವರು ಹೇಳಿದ್ದಾರೆ.





