ಕೇಂದ್ರ ಸರ್ಕಾರ ದೇಶಾದ್ಯಂತ ಜಾರಿಗೊಳಿಸಲು ಆದೇಶಿಸಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು (Waqf amendment act) ರಾಜ್ಯದಲ್ಲಿ ಜಾರಿಗೆ ತರಲು ಬಿಡುವುದಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ (Zameer agenda khan) ಹೇಳಿದ್ದಾರೆ. ಈ ವಕ್ಫ್ ಮಸೂದೆ ತಿದ್ದುಪಡಿ ಮುಸಲ್ಮಾನರ ಹಕ್ಕುಗಳಿಗೆ ಧಕ್ಕೆಯಾಗಲಿದ್ದು ಇದನ್ನು ಜಾರಿ ಮಾಡುವುದಿಲ್ಲ ಎಂದಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಸರ್ಕಾರ ಪಶ್ಚಿಮ ಬಂಗಾಳದ (West bengal) ಮಾದರಿಯಲ್ಲೇ ಇದನ್ನು ವಿರೋಧಿಸಿದೆ. ಹೀಗಾಗಿ ನಮ್ಮ ರಾಜ್ಯದಲ್ಲಿ ನಾವು ಅದನ್ನು ಅನುಷ್ಠಾನ ಮಾಡುವುದಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ಕೇರಳ (Kerala), ತಮಿಳುನಾಡು (Tamil nadu) ಮತ್ತು ಬಂಗಾಳದ ಮಾದರಿಯಲ್ಲೇ ನಾವು ವಿರೋಧಿಸಲಿದ್ದೇವೆ ಎಂದು ಜಮೀರ್ ಹೇಳಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಕ್ಫ್ ತಿದ್ದುಪಡಿ ಕಾಯ್ದೆಗೆ ನಮ್ಮ ರಾಜ್ಯ ಸರ್ಕಾರದ ವಿರೋಧವಿದೆ. ಹೀಗಾಗಿ ರಾಜ್ಯದಲ್ಲಿ ಕಾನೂನು ಜಾರಿಗೆ ತರುವುದಿಲ್ಲ ಎಂದಿದ್ದಾರೆ.