• Home
  • About Us
  • ಕರ್ನಾಟಕ
Sunday, December 7, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವಕ್ಫ್ ವಿವಾದ:ರಾಜಕೀಯ ಲಾಭದ ದುರುದ್ದೇಶದಿಂದ ಬಿಜೆಪಿ ಪ್ರತಿಭಟನೆಗೆ ಮುಂದು- ಸಿಎಂ ಸಿದ್ದರಾಮಯ್ಯ.

ಪ್ರತಿಧ್ವನಿ by ಪ್ರತಿಧ್ವನಿ
November 3, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ವಕ್ಫ್ ಆಸ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾಗಿರುವ ನೋಟಿಸ್ ಗಳನ್ನು ತಕ್ಷಣ ವಾಪಸ್ ಪಡೆಯಲು ನಮ್ಮ ಸರ್ಕಾರ ಸೂಚನೆ ನೀಡಿದ ನಂತರವೂ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿರುವುದಕ್ಕೆ ರಾಜಕೀಯ ಲಾಭದ ದುರುದ್ದೇಶ ಇದೆಯೇ ಹೊರತು ಇದರಲ್ಲಿ ರೈತರ ಹಿತಾಸಕ್ತಿ ರಕ್ಷಣೆಯ ಯಾವ ಸದುದ್ದೇಶ ಇಲ್ಲ ಎನ್ನುವುದನ್ನು ರಾಜ್ಯದ ಜನತೆ ಅರ್ಥಮಾಡಿಕೊಳ್ಳಬೇಕೆಂದು ಮನವಿ ಮಾಡುತ್ತೇನೆ.

ADVERTISEMENT

ವಕ್ಫ್‌ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯಬೇಕು.ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟೀಸ್‌ಗಳನ್ನು ತಕ್ಷಣ ವಾಪಸ್‌ ಪಡೆಯಬೇಕು.ಕಾನೂನು ಬಾಹಿರವಾಗಿ ಹಾಗೂ ನೋಟೀಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು.ಅಧಿಕಾರಿಗಳು ಎಚ್ಚರ ವಹಿಸಿ ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು ಎಂದು ನಾನು ಸ್ಪಷ್ಟವಾಗಿ ಸೂಚನೆ ನೀಡಿದ್ದೇನೆ.ಈ ಸೂಚನೆಯ ನಂತರವೂ ಬಿಜೆಪಿ ನಾಯಕರು ಯಾವ ಕಾರಣಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ?.

ಜಮೀನಿಗೆ ಸಂಬಂಧಿಸಿದ ವಿವಾದದಲ್ಲಿ ನೋಟಿಸ್ ನೀಡಿ ವಿವರ ಪಡೆಯುವುದು ಒಂದು ಸಾಮಾನ್ಯ ಆಡಳಿತಾತ್ಮಕ ಪ್ರಕ್ರಿಯೆ.ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಬಿಜೆಪಿಯ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ ಮತ್ತು ಜಗದೀಶ್ ಶೆಟ್ಟರ್ ಹಾಗೂ ಜೆಡಿಎಸ್ ಪಕ್ಷದ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದ ಕಾಲದಲ್ಲಿಯೂ ನೋಟಿಸ್ ನೀಡಲಾಗಿತ್ತು.ಈ ವಿವರಗಳನ್ನು ನನ್ನ ಸಹದ್ಯೋಗಿಗಳಾಗಿರುವ ಎಂ.ಬಿ.ಪಾಟೀಲ್, ಪ್ರಿಯಾಂಕ ಖರ್ಗೆ ಮೊದಲಾದವರು ಮಾಧ್ಯಮಗಳಿಗೆ ನೀಡಿದ್ದಾರೆ.

ಬಿಜೆಪಿಯ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಸ್ಲಿಂ ಸಮುದಾಯವನ್ನು ಉದ್ದೇಶಿಸಿ ಮಾತನಾಡುತ್ತಾ ‘‘ವಕ್ಫ್ ಆಸ್ತಿ ಅಲ್ಲಾಹುಗೆ ಸೇರಿದ್ದು, ಆ ಆಸ್ತಿಯನ್ನು ಹಲವರು ಕಬಳಿಸಿದ್ದಾರೆ, ಅದನ್ನು ಒಂದೊಂದು ಇಂಚು ಬಿಡದೆ ವಾಪಸು ಪಡೆಯಬೇಕು, ಇಲ್ಲದೆ ಇದ್ದರೆ ಅಲ್ಲಾಹುವಿನ ದೃಷ್ಟಿಯಲ್ಲಿ ನೀವು ತಪ್ಪಿತಸ್ಥರಾಗುತ್ತಿರಿ’’ ಎಂದು ಹೇಳಿರುವ ವೀಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ, ಇದು ಬಿಜೆಪಿ ನಾಯಕರ ಅತ್ಮವಂಚನೆಯ ನಡವಳಿಕೆಯನ್ನು ಬಯಲು ಮಾಡಿದೆ.

ರಾಜ್ಯ ಬಿಜೆಪಿಯಲ್ಲಿ ಸರಣಿ ಪಟಾಕಿಗಳಂತೆ ಪ್ರತಿನಿತ್ಯ ಭಿನ್ನಮತ ಸ್ಪೋಟಗೊಳ್ಳುತ್ತಿದೆ.ಪರಸ್ಪರ ಆರೋಪಗಳನ್ನು ಮಾಡುವ ಮೂಲಕ ಈ ಪಕ್ಷದ ನಾಯಕರು ರಾಜ್ಯದ ಜನರ ಎದುರು ಬೆತ್ತಲಾಗುತ್ತಿದ್ದಾರೆ.ಈ ಜಗಳ ಬಗೆಹರಿಸುವ ಯಾವ ಪ್ರಯತ್ನವನ್ನೂ ಮಾಡದ ಅವರ ಪಕ್ಷದ ಹೈಕಮಾಂಡ್ ದೂರ ನಿಂತು ಚಂದ ನೋಡುತ್ತಿದೆ. ರಾಜ್ಯದ ಬಿಜೆಪಿ ನಾಯಕರಿಗೆ ಹೈಕಮಾಂಡಿನಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲದ ಹಾಗಿದೆ.ಈ ಮುಜುಗರದಿಂದ ತಪ್ಪಿಸಿಕೊಳ್ಳಲು ಬಿಜೆಪಿ ನಾಯಕರು ದಿನಕ್ಕೊಂದು ವಿವಾದಗಳನ್ನು ಸೃಷ್ಟಿಸಿ ಜನರ ಗಮನ ಬೇರೆ ಕಡೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ.

ಎಲ್ಲ ಜಾತಿ ಮತ್ತು ಧರ್ಮದಲ್ಲಿರುವ ಬಡವರು, ರೈತರು, ಮಹಿಳೆಯರು, ಕಾರ್ಮಿಕರು ಫಲಾನುಭವಿಗಳಾಗಿರುವ ನಮ್ಮ ಗ್ಯಾರಂಟಿ ಯೋಜನೆಗಳು ಬಿಜೆಪಿ ನಾಯಕರ ನಿದ್ದೆಗೆಡಿಸಿದೆ. ತೆರಿಗೆ ಹಂಚಿಕೆ, ಜಿಎಸ್‌ಟಿ ಪರಿಹಾರ ಮತ್ತು ಕೇಂದ್ರ ಪ್ರಾಯೋಜಿತ ಯೋಜನೆಗಳ ಅನುದಾನದಲ್ಲಿ ಕಡಿತ ಮಾಡಿ ರಾಜ್ಯವನ್ನು ಆರ್ಥಿಕ ಮುಗ್ಗಟ್ಟಿಗೆ ಸಿಕ್ಕಿಸಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವಂತೆ ಮಾಡಬೇಕೆನ್ನುವುದು ಬಿಜೆಪಿಯ ಹುನ್ನಾರವಾಗಿದೆ.

Tags: BJPCongress Partyguarantee schemesMedia Release by Chief Minister Siddaramaiah.Prime Minister Narendra Moditax distribution and grants.
Previous Post

ಚಿತ್ರ ನಿರ್ದೇಶಕ ಗುರು ಪ್ರಸಾದ್ ನಿಧನಕ್ಕೆ HD ಕುಮಾರಸ್ವಾಮಿ ಕಂಬನಿ

Next Post

ರಾಜ್ಯಾದ್ಯಂತ ಬರೋಬ್ಬರಿ 47,362 ವಕ್ಫ್ ಆಸ್ತಿ!

Related Posts

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ
ಇತರೆ / Others

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ

by ಪ್ರತಿಧ್ವನಿ
December 7, 2025
0

ಗೋವಾ: ನೈಟ್ ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡ ಪ್ರಕರಣ ಸಂಬಂಧ ಬಿರ್ಚ್ ಬೈ ರೊಮಿಯೊ ಲೇನ್ ನೈಟ್ ಕ್ಲಬ್ ಮಾಲೀಕ ಹಾಗೂ ಪ್ರಧಾನ ವ್ಯವಸ್ಥಾಪಕನ ವಿರುದ್ಧ FIR...

Read moreDetails
ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

December 7, 2025
ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್‌ಗೆ ಸಂಕಷ್ಟ

ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್‌ಗೆ ಸಂಕಷ್ಟ

December 7, 2025
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

December 7, 2025
Next Post

ರಾಜ್ಯಾದ್ಯಂತ ಬರೋಬ್ಬರಿ 47,362 ವಕ್ಫ್ ಆಸ್ತಿ!

Recent News

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ
Top Story

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

by ಪ್ರತಿಧ್ವನಿ
December 7, 2025
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK
Top Story

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

by ಪ್ರತಿಧ್ವನಿ
December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌
Top Story

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

by ಪ್ರತಿಧ್ವನಿ
December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?
Top Story

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

by ಪ್ರತಿಧ್ವನಿ
December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!
Top Story

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

by ಪ್ರತಿಧ್ವನಿ
December 7, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ

December 7, 2025
ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

December 7, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!