ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಕುಡಿಯುವ ನೀರಿನ ಅಭಾವದ(water problem) ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ( CM siddaramaih) ಇಂದು ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಮುಖ್ಯಮಂತ್ರಿಗಳು, ರಾಜ್ಯದ ಯಾವ ಭಾಗದಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಆಗಬಾರದು. ಕಳೆದ ವಾರವೇ ನೀಡಿರುವ ಸೂಚನೆ ಪ್ರಕಾರ ಅಗತ್ಯ ಮುನ್ನೆಚ್ಚರಿಕೆ ಮತ್ತು ಸಿದ್ಧತೆಗಳನ್ನು ಪರಿಣಾಮಕಾರಿಯಾಗಿ ಮಾಡಿಕೊಳ್ಳಬೇಕು ಎನ್ನುವ ಸೂಚನೆಯನ್ನೂ ನೀಡಿದ್ದಾರೆ.
ಈ ಸಂಬಂಧ ಸೋಮವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಲುಷಿತ ನೀರು: ಮಾಹಿತಿ ಕೇಳಿದ ಸಿಎಂ
ಕೊಪ್ಪಳದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿರುವ ಪ್ರಕರಣಗಳು ವರದಿ ಆಗಿರುವ ಹಿನ್ನೆಲೆಯಲ್ಲಿ ಆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.