• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ವಯನಾಡ್‌ಗೆ ರಾಹುಲ್‌ ಗಾಂಧಿ ರಾಜೀನಾಮೆ.. ಮುಂದಿನ ರಾಜಕೀಯ ಲೆಕ್ಕಾಚಾರ..!

ಪ್ರತಿಧ್ವನಿ by ಪ್ರತಿಧ್ವನಿ
June 18, 2024
in ರಾಜಕೀಯ
0
ವಯನಾಡ್‌ಗೆ ರಾಹುಲ್‌ ಗಾಂಧಿ ರಾಜೀನಾಮೆ.. ಮುಂದಿನ ರಾಜಕೀಯ ಲೆಕ್ಕಾಚಾರ..!
Share on WhatsAppShare on FacebookShare on Telegram

ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಬಂಪರ್‌ ಗೇಮ್‌ ಮಾಡಿದ್ದ ಕಾಂಗ್ರೆಸ್‌ 99 ಸ್ಥಾನಗಳಲ್ಲಿ ಗೆದ್ದು ಪುನರ್‌ ಜನ್ಮ ಪಡೆದಿತ್ತು. ಇದರಲ್ಲಿ ರಾಹುಲ್‌ ಗಾಂಧಿ ಕೇರಳದ ವಯನಾಡು ಹಾಗು ಉತ್ತರ ಪ್ರದೇಶದ ರಾಯ್‌ ಬರೇಲಿ ಕ್ಷೇತ್ರ ಎರಡೂ ಕಡೆ ಗೆಲ್ಲುವ ಮೂಲಕ ಚುನಾವಣೆಗಳಲ್ಲಿ ಸೊರಗಿದ್ದ ಕಾಂಗ್ರೆಸ್‌ ಪಾಲಿಗೆ ಟಾನಿಕ್‌ ಆಗಿದ್ದರು. ಇದೀಗ ಎರಡಲ್ಲಿ ಒಂದು ಕ್ಷೇತ್ರವನ್ನು ಉಳಿಸಿಕೊಂಡು ಮತ್ತೊಂದು ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಲೇಬೇಕಿದೆ. ನಿನ್ನೆ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಉತ್ತರ ಪ್ರದೇಶದ ರಾಯ್‌ ಬರೇಲಿ ಉಳಿಸಿಕೊಂಡು ಕೇರಳದ ವಯನಾಡು ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸುವ ನಿರ್ಧಾರ ಮಾಡಲಾಗಿದೆ. ಈ ನಿರ್ಧಾರದ ಹಿಂದೆ ಎರಡು ಪ್ರಮುಖ ಕಾರಣಗಳು ಕಾಣುತ್ತಿವೆ..

ADVERTISEMENT

ಗಾಂಧಿ ಕುಟುಂಬದ ಭದ್ರಕೋಟೆ ಆಗಿರುವ ರಾಯ್​ಬರೇಲಿ ಕ್ಷೇತ್ರವನ್ನ ರಾಹುಲ್ ಗಾಂಧಿ ಉಳಿಸಿಕೊಳ್ಳುವ ಮೂಲಕ ಗಾಂಧಿ ಕುಟುಂಬದ ಮುಂದಿನ ವಾರಸುದಾರನಾಗಿ ರಾಹುಲ್‌ ಮೇಲ್ಪಂಕ್ತಿ ಹಾಕುವುದಕ್ಕೆ ನಿರ್ಧಾರ ಮಾಡಿದ್ದಾರೆ. ಪಂಡಿತ್‌ ಜವಾಹರ ಲಾಲ್‌ ನೆಹರು ಅವರಿಂದ ಶುರುವಾದ ರಾಜಕಾರಣ ಆ ನಂತರ ಫಿರೋಜ್‌ ಗಾಂಧಿ, ಇಂದಿರಾ ಗಾಂಧಿ, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹೀಗೇ ನಾಲ್ಕನೇ ತಲೆಮಾರುಗಳಿಂದಲೂ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಲೇ ಬಂದಿದ್ದಾರೆ. ಇನ್ನು ಈ ಕ್ಷೇತ್ರದಲ್ಲೇ ಗೆಲುವು ಸಾಧಿಸಿ ಇಂದಿರಾ ಗಾಂಧಿ ಭಾರತದ ಪ್ರಧಾನ ಮಂತ್ರಿ ಸ್ಥಾನವನ್ನು ಅಲಂಕರಿಸಿದ್ದರು. ಇದೀಗ ರಾಹುಲ್‌ ಗಾಂಧಿ ಕೂಡ ಅದೇ ಅದೃಷ್ಟದ ಲೆಕ್ಕಾಚಾರದಲ್ಲಿ ರಾಯ್‌ ಬರೇಲಿ ಉಳಿಸಿಕೊಂಡಿದ್ದಾರೆ. ಇದು ಮೊದಲ ಕಾರಣ.

2019ರಲ್ಲಿ ಉತ್ತರ ಪ್ರದೇಶದ ಅಮೇಥಿಯಲ್ಲಿ ಸೋಲುಂಡಿದ್ದ ರಾಹುಲ್‌ ಗಾಂಧಿ ಕೇರಳದ ವಯನಾಡಿಗೆ ಬಂದಿದ್ದರು. ಕಷ್ಟ ಕಾಲದಲ್ಲಿ ಕೈ ಹಿಡಿದಿದ್ದ ವಯನಾಡು ಲೋಕಸಭಾ ಕ್ಷೇತ್ರದ ಜನರನ್ನು ಕೈಬಿಟ್ಟು ರಾಯ್‌ ಬರೇಲಿ ಆರಿಸಿಕೊಳ್ತಿದ್ದಾರೆ. ಇಂದು ರಾಜೀನಾಮೆ ನೀಡಲಿದ್ದು ವಯನಾಡಿನ ಜನರಿಗೆ ಬೇಸರದ ಸಂಗತಿ ಹೌದು. ಆದರೆ ತನ್ನ ಸಹೋದರಿ ಪ್ರಿಯಾಂಕಾ ವಾದ್ರಾ ಅವರನ್ನು ವಯನಾಡು ಲೋಕಸಭಾ ಕ್ಷೇತ್ರದಿಂದ ಅಖಾಡಕ್ಕೆ ಇಳಿಸುತ್ತಾರೆ ಅನ್ನುವುದು ಖಚಿತವಾಗಿದೆ. ಕೇರಳದಲ್ಲಿ ಪ್ರಿಯಾಂಕಾ ಗಾಂಧಿ ಗೆಲುವು ಸಾಧಿಸಿದ್ರೆ ಗಾಂಧಿ ಕುಟುಂಬದ ಮೂವರು ಒಟ್ಟಿಗೆ ಸಂಸತ್‌ನಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತದೆ. ಇನ್ನು ರಾಹುಲ್‌ ಗಾಂಧಿ ವಯನಾಡು ಕ್ಷೇತ್ರವನ್ನು ತೊರೆಯಲು 2ನೇ ಕಾರಣ ಎಂದರೆ..

ಕೇರಳದಲ್ಲಿ ಭಾರತೀಯ ಜನತಾ ಪಾರ್ಟಿ ಪ್ರಭಾವ ಅಷ್ಟೊಂದು ಉತ್ತಮವಾಗಿಲ್ಲ. ಎಂದೂ ಖಾತೆಯನ್ನೇ ತೆರೆಯದ ಕೇಸರಿ ಪಕ್ಷ ಈ ಬಾರಿ ಮೊದಲ ಬಾರಿಗೆ ಒಂದು ಕ್ಷೇತ್ರದಲ್ಲಿ ಜಯಗಳಿದೆ. ಸಂಸದ ಸುರೇಶ್‌‌ ಗೋಪಿ ನರೇಂದ್ರ ಮೋದಿ ಸರ್ಕಾರದಲ್ಲಿ ಸಚಿವರಾಗಿಯೂ ಅಧಿಕಾರ ಹಿಡಿದಿದ್ದಾರೆ. ಆದರೂ ವಯನಾಡು ಕ್ಷೇತ್ರ ಕಾಂಗ್ರೆಸ್‌‌ ಪಾಲಿಗೆ ಪ್ರಭಾವ ಬೀರುವಂತಹ ಕ್ಷೇತ್ರ ಎಂದೇ ಹೇಳಬಹುದು. ಇನ್ನು 2019ರಲ್ಲಿ ರಾಹುಲ್‌ ಗಾಂಧಿ ಸ್ಪರ್ಧೆ ಮಾಡಿದಾಗ 4,31,770ಮ ಮತಗಳ ಅಂತರದಿಂದ ಜಯ ದಾಖಲಿಸಿದ್ರು. ಇದೀಗ 2024ರಲ್ಲಿ ರಾಹುಲ್‌ ಗಾಂಧಿ ಬರೋಬ್ಬರಿ 3,64,422 ಮತಗಳ ಅಂತರದಿಂದ ಗೆಲುವು ದಕ್ಕಿಸಿಕೊಂಡಿದ್ದರು. ಇದೀಗ ಪ್ರಿಯಾಂಕಾ ಗಾಂಧಿ ವಯನಾಡುವಿನಿಂದ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಿದರೆ ಗೆಲುವು ಖಚಿತ ಎನ್ನುವುದು ಗಾಂಧಿ ಕುಟುಂಬ ಹಾಗು ಕಾಂಗ್ರೆಸ್‌ ಪಕ್ಷದ ಲೆಕ್ಕಾಚಾರ. ಚೊಚ್ಚಲ ಸ್ಪರ್ಧೆಯಲ್ಲಿ ಯಾವುದೇ ಮುಖಭಂಗ ಆಗದಂತೆ ತಡೆಯಲು ವಯನಾಡು ಉತ್ತಮ ಕ್ಷೇತ್ರ ಎನ್ನುವ ಆಶಯದೊಂದಿಗೆ ರಾಯ್‌ ಬರೇಲಿ ಆಯ್ಕೆ ಮಾಡಿಕೊಂಡಿದ್ದಾರೆ ಎನ್ನಬಹುದು.

ಕೃಷ್ಣಮಣಿ

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪಟ್ಟಣಗೆರೆ ಶೆಡ್ ರಹಸ್ಯ ಭೇದಿಸುತ್ತಾ ಹಲವು ರಕ್ತದ ಕಲೆಗಳು ?! ವಿಚಾರಣೆಯಲ್ಲಿ ಬಯಲಾದ ಶಾಕಿಂಗ್ ಸಂಗತಿ !

Next Post

ಬಾರ್ ಹೆಡ್ಡೆಡ್ ಬಾತುಕೋಳಿ ಸಾಕಿದ್ದ ಪ್ರಕರಣ | ದರ್ಶನ್ ವಿರುದ್ದ ಅರಣ್ಯ ಇಲಾಖೆ ಚಾರ್ಜ್‌ಶೀಟ್ ?!

Related Posts

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
0

ಬೆಂಗಳೂರು: ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಗೆ ಸಂಸದ ತೇಜಸ್ವಿ ಸೂರ್ಯ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಗೃಹ ಸಚಿವ ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಪರಮೇಶ್ವರ್, ಅನೇಕ ವಿಚಾರಗಳು ಸಂಸದ...

Read moreDetails
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
ಶ್ವಾಸಕೋಶದಲ್ಲಿ ಸೋಂಕು: ಸಿಎಂ ಪತ್ನಿ ಆಸ್ಪತ್ರೆಗೆ ದಾಖಲು

ಶ್ವಾಸಕೋಶದಲ್ಲಿ ಸೋಂಕು: ಸಿಎಂ ಪತ್ನಿ ಆಸ್ಪತ್ರೆಗೆ ದಾಖಲು

November 18, 2025
ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

November 17, 2025
ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆಗೆ ತೇಜಸ್ವಿ ಸೂರ್ಯ ವಿರೋಧ ಯಾಕೆ..?

ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆಗೆ ತೇಜಸ್ವಿ ಸೂರ್ಯ ವಿರೋಧ ಯಾಕೆ..?

November 17, 2025
Next Post
ಬಾರ್ ಹೆಡ್ಡೆಡ್ ಬಾತುಕೋಳಿ ಸಾಕಿದ್ದ ಪ್ರಕರಣ | ದರ್ಶನ್ ವಿರುದ್ದ ಅರಣ್ಯ ಇಲಾಖೆ ಚಾರ್ಜ್‌ಶೀಟ್ ?!

ಬಾರ್ ಹೆಡ್ಡೆಡ್ ಬಾತುಕೋಳಿ ಸಾಕಿದ್ದ ಪ್ರಕರಣ | ದರ್ಶನ್ ವಿರುದ್ದ ಅರಣ್ಯ ಇಲಾಖೆ ಚಾರ್ಜ್‌ಶೀಟ್ ?!

Recent News

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?
Top Story

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

by ಪ್ರತಿಧ್ವನಿ
November 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!