• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ಕ್ಷೇತ್ರ ಮರುವಿಂಗಡನೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ : ಸಿಎಂ ಸಿದ್ದರಾಮಯ್ಯ..

ಪ್ರತಿಧ್ವನಿ by ಪ್ರತಿಧ್ವನಿ
April 19, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!
Share on WhatsAppShare on FacebookShare on Telegram

ಹಾವೇರಿ : ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ADVERTISEMENT
ಎಐ ಕೇವಲ ಟೂಲ್ ಅಷ್ಟೇ ಅನ್ನೋದನ್ನು ನಾವು ಮರೆಯಬಾರದು.. #pratidhvani

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿ, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ , ಸಂವಿಧಾನದ 73,74 ನೇ ತಿದ್ದುಪಡಿಗಳನ್ನು ರಾಜೀವ್ ಗಾಂಧಿ ಪ್ರಧಾನ ಮಂತ್ರಿಯಾಗಿದ್ದಾಗ ತಂದಿದ್ದರು. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ. ಈಗ ಮಾತ್ರ ಮಹಿಳಾ ಮೀಸಲಾತಿಗೆ ಒತ್ತಾಯಿಸಿ ರಾಜಕೀಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ಷೇತ್ರ ಮರುವಿಂಗಡನೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ. ದಕ್ಷಿಣದಲ್ಲಿ ಶೇ. 50 ರಷ್ಟು ಮಾಡಿದರೆ ಉತ್ತರ ಪ್ರದೇಶದಲ್ಲಿ 80 ಸ್ಥಾನಗಳಿವೆ. ಅಲ್ಲಿಗೆ 120 ಸ್ಥಾನಗಳಾಗುತ್ತವೆ. ಕರ್ನಾಟಕದಲ್ಲಿ 42 ಸ್ಥಾನಗಳಾಗುತ್ತವೆ. ಉತ್ತರ ಭಾರತದಲ್ಲಿ ಸ್ಥಾನಗಳು ಹೆಚ್ಚಾಗುವುದರ ಬಗ್ಗೆ ನಮ್ಮ ವಿರೋಧವೇ ಹೊರತು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ. ಅದರ ಪರವಾಗಿದ್ದೇವೆ. ಸಂವಿಧಾನ ತಿದ್ದುಪಡಿಗೆ ಮೂರನೇ ಎರಡರಷ್ಟು ಬಹುಮತ ಲೋಕಸಭೆಯಲ್ಲಿ ಇರಬೇಕು. ಶೇ. 50 ರಷ್ಟು ರಾಜ್ಯಗಳು ಇದಕ್ಕೆ ಒಪ್ಪಿಗೆ ನೀಡಬೇಕು. ಕ್ಷೇತ್ರ ಮರು ವಿಂಗಡಣೆಗೆ ವಿರೋಧ ಮಾಡಿದ್ದೇವೆ ಹೊರತು ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ  ಎಂದು ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ : ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಪ್ರಧಾನಮಂತ್ರಿ ನರೇಂದ್ರ ಮೋದಿ ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಗಳು ಎಂದು ಭಾಷಣ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ತಮಿಳುನಾಡು , ಪಶ್ಚಿಮ ಬಂಗಾಳದ ಚುನಾವಣೆ ಇರುವುದರಿಂದ ಪ್ರಧಾನಿ ಮೋದಿ ರಾಜಕೀಯ ಮಾಡುತ್ತಿದ್ದಾರ. 450 ಮತಗಳನ್ನು ಪಡೆದು ಅಂಗೀಕಾರವಾಗಿರುವ ಮಸೂದೆಯನ್ನು ಮೋದಿಯವರು ಏಕೆ ಜಾರಿಮಾಡಲಿಲ್ಲ? ಕ್ಷೇತ್ರ ಮರುವಿಂಗಡನೆಯನ್ನು ಬೇರ್ಪಡಿಸಿ ಮಸೂದೆ ತಂದಿದ್ದರೆ, ಯಾರೂ ವಿರೋಧಿಸುತ್ತಿರಲಿಲ್ಲ. ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಪಕ್ಷ ಎಂದಿಗೂ ವಿರೋಧ ಮಾಡಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಣೆಬೆನ್ನೂರು ಸುತ್ತ ಮುತ್ತ ಮಟ್ಕಾ ದಂಧೆ ವ್ಯಾಪಕವಾಗಿರುವ ಬಗ್ಗೆ ಸ್ಥಳೀಯ ಶಾಸಕರು ಕ್ರಮ ಕೈಗೊಂಡಿದ್ದಾರೆ. ಪ್ರಸ್ತುತ ಮಟ್ಕಾ ದಂಧೆ ನಿಯಂತ್ರಣದಲ್ಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Tags: Amit ShahBJPCM Siddaramaiahcongresscongress karnatakaDelimitation BillDK ShivakumarMallikarjun KhargeNarendra ModiPratidhvaniRahul GandhiSonia GandhiWomen Reservatinon Bill
Previous Post

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

Next Post

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

Related Posts

ವಿಜಯ್‌ಗೆ ಬೆಂಬಲ ಘೋಷಿಸಿದ ಮುಸ್ಲಿಂ ಲೀಗ್‌ : ನಿರೀಕ್ಷೆಗೂ ಮೀರಿ ಏರಿಕೆಯಾದ ದಳಪತಿ ಸಂಖ್ಯಾಬಲ..
Top Story

ವಿಜಯ್‌ಗೆ ಬೆಂಬಲ ಘೋಷಿಸಿದ ಮುಸ್ಲಿಂ ಲೀಗ್‌ : ನಿರೀಕ್ಷೆಗೂ ಮೀರಿ ಏರಿಕೆಯಾದ ದಳಪತಿ ಸಂಖ್ಯಾಬಲ..

by ಪ್ರತಿಧ್ವನಿ
May 9, 2026
0

ಚೆನೈ : ತಮಿಳುನಾಡಿನಲ್ಲಿ ನೂತನವಾಗಿ ಸರ್ಕಾರ ರಚಿಸುವ ಹಾದಿಯಲ್ಲಿ ಸಾಗುತ್ತಿರುವ ನಟ ವಿಜಯ್‌ ಅವರಿಗೆ ಎದುರಾಗಿದ್ದ ಸಂಕಟಗಳು ದೂರವಾಗಿವೆ. ಆರಂಭದಲ್ಲಿ ಕಾಂಗ್ರೆಸ್‌ ವಿಜಯ್‌ ಬೆಂಬಲಕ್ಕೆ ನಿಂತಿತ್ತು, ಅದಾದ ಬಳಿಕ...

Read moreDetails
ವಿಜಯ್‌ ಸಿಎಂ ಆಗುವ ಹಾದಿ ಸುಗಮ : ಟಿವಿಕೆಗೆ ವಿಸಿಕೆ ಬೇಷರತ್‌ ಬೆಂಬಲ : ಘೋಷಣೆಯಷ್ಟೇ ಬಾಕಿ..

ವಿಜಯ್‌ ಸಿಎಂ ಆಗುವ ಹಾದಿ ಸುಗಮ : ಟಿವಿಕೆಗೆ ವಿಸಿಕೆ ಬೇಷರತ್‌ ಬೆಂಬಲ : ಘೋಷಣೆಯಷ್ಟೇ ಬಾಕಿ..

May 9, 2026
ತಮಿಳುನಾಡು “ಕೈ” ಶಾಸಕರು ಬೆಂಗಳೂರಿಗೆ ಬಂದಿದ್ದಾರಾ..? : ಡಿ.ಕೆ. ಶಿವಕುಮಾರ್ ಏನಂದ್ರು..?

ತಮಿಳುನಾಡು “ಕೈ” ಶಾಸಕರು ಬೆಂಗಳೂರಿಗೆ ಬಂದಿದ್ದಾರಾ..? : ಡಿ.ಕೆ. ಶಿವಕುಮಾರ್ ಏನಂದ್ರು..?

May 9, 2026
ಬಂಗಾಳದಲ್ಲಿ ಬಿಜೆಪಿ ಹೊಸ ಅಧ್ಯಾಯ : ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

ಬಂಗಾಳದಲ್ಲಿ ಬಿಜೆಪಿ ಹೊಸ ಅಧ್ಯಾಯ : ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

May 9, 2026
ತಮಿಳುನಾಡು ರಾಜಕೀಯದಲ್ಲಿ ‘ರಿಸಾರ್ಟ್ ಪಾಲಿಟಿಕ್ಸ್’: ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಶಿಫ್ಟ್?

ತಮಿಳುನಾಡು ರಾಜಕೀಯದಲ್ಲಿ ‘ರಿಸಾರ್ಟ್ ಪಾಲಿಟಿಕ್ಸ್’: ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಶಿಫ್ಟ್?

May 9, 2026
Next Post
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!