ಕೋವಿಡ್‌ ಲಸಿಕೆ ಪಡೆಯಲು ಹಳ್ಳಿಯಿಂದ ನಗರದವರೆಗೆ ಆನ್ಲೈನ್ ನೋಂದಣಿ ಅಭಿಯಾನ ಆರಂಭ –ಡಿಕೆ ಶಿವಕುಮಾರ್

ಕೋವಿಡ್ ಪಿಡುಗಿನ ಸಂಕಷ್ಟದ ಸಮಯದಲ್ಲಿ ಜನರ ರಕ್ಷಣೆ ನಮ್ಮ ಕರ್ತವ್ಯ. ಹೀಗಾಗಿ ತಾಲೂಕು ಮಟ್ಟದಿಂದ ರಾಜ್ಯ ಮಟ್ಟದವರೆಗೂ, ಸಹಾಯವಾಣಿ, ಆಂಬ್ಯುಲೆನ್ಸ್ ಸೇವೆ, ಆಕ್ಸಿಜನ್ ಪೂರೈಕೆ, ಮೆಡಿಕಲ್ ಕಿಟ್, ಆಹಾರ ಕಿಟ್ ವಿತರಣೆಯಿಂದ ಉಚಿತ ಲಸಿಕೆ ನೀಡಲು 100 ಕೋಟಿ ರೂ. ಯೋಜನೆವರೆಗೂ ಕಾಂಗ್ರೆಸ್ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಯವ ಕಾಂಗ್ರೆಸ್ ಸದಸ್ಯರು ರಾಜ್ಯದ ಉದ್ದಗಲಕ್ಕೂ ಜನರ ಪ್ರಾಣ ಉಳಿಸಲು ಅಗತ್ಯ ಸೇವೆ ಒದಗಿಸುತ್ತಿದ್ದಾರೆ. ವಿದೇಶಗಳಿಗೆ ಲಸಿಕೆ ರಫ್ತು ಸ್ಥಗಿತಗೊಳಿಸಿ, ನಮ್ಮ ದೇಶದ ಜನರಿಗೆ ಮೊದಲು ನೀಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಲಸಿಕೆ ಪಡೆಯಲು ಸರ್ಕಾರ ಆನ್ ಲೈನ್ ನೋಂದಣಿ ಮಾಡಿಸಬೇಕೆಂದು ಹೇಳಿದೆ. ಹಳ್ಳಿ ಜನರಿಗೆ ಆನ್ಲೈನ್ ಬಗ್ಗೆ ಏನು ಗೊತ್ತಿರುತ್ತದೆ? ಹೀಗಾಗಿ ನಮ್ಮ ಯೂತ್ ಕಾಂಗ್ರೆಸ್ ಸದಸ್ಯರು ಪಕ್ಷ, ಜಾತಿ, ಧರ್ಮ ಬೇಧವಿಲ್ಲದೆ, ಹಳ್ಳಿಯಿಂದ ನಗರದವರೆಗೆ ಆನ್ಲೈನ್ ನೋಂದಣಿ ಅಭಿಯಾನ ಆರಂಭಿಸುತ್ತಿದ್ದಾರೆಂಬ ಮಾಹಿತಿಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಂಚಿಕೊಂಡಿದ್ದಾರೆ.

ನಮ್ಮ ವಿದ್ಯಾರ್ಥಿ ಘಟಕದವರು ಕಳೆದ ವರ್ಷ ರಕ್ತ ದಾನ ಮಾಡಿದ್ದರು. ಈ ವರ್ಷವೂ ರಕ್ತದಾನ ಶಿಬಿರ ಹಮ್ಮಿಕೊಂಡಿದ್ದಾರೆ. ಮಹಿಳಾ ಕಾಂಗ್ರೆಸ್ ಸದಸ್ಯೆಯರು ವಿಶೇಷ ಆರೋಗ್ಯ ಕಿಟ್ಗಳನ್ನು ಅಗತ್ಯವಿರುವವರಿಗೆ ನೀಡುತ್ತಿದ್ದಾರೆ. 160 ಕ್ಷೇತ್ರಗಳಲ್ಲಿ ಕೇರ್ ಸೆಂಟರ್, ಸಹಾಯವಾಣಿ ಆರಂಭಿಸಲಾಗಿದ್ದು ಉಳಿದ ಕಡೆಗಳಲ್ಲೂ ಮಾಡಲಾಗುವುದು. ರಾಜ್ಯದಲ್ಲಿ 150 ಆಂಬ್ಯುಲೆನ್ಸ್ಗಳು ಸೇವೆ ಸಲ್ಲಿಸುತ್ತಿವೆ ಎಂದಿದ್ದಾರೆ.

ಸರ್ಕಾರ ಘೋಷಿಸಿರುವ ಪ್ಯಾಕೇಜ್ ಬಡವರಿಗೆ ಸಾಲುವುದಿಲ್ಲ. ಹೀಗಾಗಿ ನಮ್ಮ ನಾಯಕರು ಸ್ಥಳೀಯವಾಗಿ ಆಹಾರ ಕಿಟ್ ಹಂಚುತ್ತಿದ್ದಾರೆ. ಉಚಿತ ಆಕ್ಸಿಜನ್ ಕಾನ್ಸಂಟ್ರೇಟರ್ ನೀಡಲಾಗುತ್ತಿದೆ. ಹೀಗೆ ಕಾಂಗ್ರೆಸ್ ಪಕ್ಷ ಈ ಕಷ್ಟದ ಸಮಯದಲ್ಲಿ ಜನರಿಗೆ ನೆರವಾಗಲು ಹತ್ತಾರು ಕಾರ್ಯಕ್ರಮ ಹಮ್ಮಿಕೊಂಡಿದೆ. ಸರ್ಕಾರದ ವೈಫಲ್ಯ ಪ್ರಶ್ನಿಸುವುದು  ನಮ್ಮ ಕರ್ತವ್ಯ, ಇನ್ನು ಪ್ರದೇಶಾಭಿವೃದ್ಧಿ ನಿಧಿಯಿಂದ 100 ಕೋಟಿ ರೂ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೆಲವರು ಸ್ವಂತ ಹಣವೇ ಎಂದು ಪ್ರಶ್ನಿಸುತ್ತಿದ್ದಾರೆ. ಹಾಗಾದ್ರೆ ಅವರು ತಮ್ಮ ಸ್ವಂತ ಹಣದಲ್ಲಿ ಕೆಲಸ ಮಾಡುತ್ತಿದ್ದಾರೆಯೇ..? ಎಂದು ಪ್ರಶ್ನಿಸಿದ್ದಾರೆ.

ನಮಗೆ ಅಭಿವೃದ್ಧಿಗಿಂತ ಜನರ ಪ್ರಾಣ ಉಳಿಸೋದು ಮುಖ್ಯ. ನಾವು ಕಾರ್ಯಕ್ರಮಕ್ಕೆ ಅನುಮತಿ ನೀಡುವಂತೆ ಮನವಿ ಮಾಡಿದ್ದೇವೆ. ರಾಜ್ಯದಲ್ಲಿ ಕರೋನಾ ಪರಿಸ್ಥಿತಿ ಕುರಿತು ಅಧಿಕಾರಿಗಳ ಜತೆ ಸಭೆ ನಡೆಸಲು ವಿರೋಧ ಪಕ್ಷದ ನಾಯಕರಿಗೆ ಸರ್ಕಾರ ಅವಕಾಶ ನಿರಾಕರಿಸಿದೆ. ಆದರೂ ನಾವು ನಮ್ಮ ಹೋರಾಟ ನಿಲ್ಲಿಸುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

ಸಿದ್ದರಾಮಯ್ಯನವರ ಸರ್ಕಾರದಲ್ಲಿ ಜಾರಿಗೆ ತರಲಾಗಿದ್ದ ಇಂದಿರಾ ಕ್ಯಾಂಟೀನ್ ಕುರಿತು ಬಿಜೆಪಿಯವರು ಮಾತನಾಡಿದ್ದರು. ಈಗ ಅಲ್ಲಿ ಉಚಿತವಾಗಿ ಊಟ ಕೊಡಲು ನಿರ್ಧರಿಸಿದ್ದಾರೆ. ಆದರೆ ಊಟ ಪಡೆಯುವವರು, ಫೋಟೋ, ಗುರುತಿನ ಚೀಟಿ ತನ್ನಿ ಎಂದು ಆದೇಶಿಸಿರುವುದು ನೀಚ ಕೆಲಸ. ನಾನು ಇದನ್ನು ಪ್ರಶ್ನಿಸಿದಾಗ ಈ ನಿರ್ಧಾರ ಹಿಂಪಡೆದರು. ಆದರೆ ಈ ಊಟ ನೀಡಲು ಆಪ್ ನಲ್ಲಿ ಫೋಟೋ ಹಾಕಲು ನಿನ್ನೆ ಆದೇಶ ಹೊರಡಿಸಿದೆ. ಕಾಂಗ್ರೆಸ್ ಇದನ್ನು ಖಂಡಿಸುತ್ತದೆ. ಇದರ ವಿರುದ್ಧ ನಾವು ಹೋರಾಡುತ್ತೇವೆ.

ಲಸಿಕೆಯನ್ನು ವಿರೋಧಿಸಿಲ್ಲ:

ಕಾಂಗ್ರೆಸ್ ಪಕ್ಷ ಲಸಿಕೆ ನೀಡುವುದನ್ನು ವಿರೋಧಿಸಿಲ್ಲ. ಪೂರ್ಣ ಪ್ರಮಾಣದಲ್ಲಿ ಪರೀಕ್ಷಿಸದೆ, ಅದನ್ನು ಬಡ ಆಶಾ ಕಾರ್ಯಕರ್ತೆಯರು ಸೇರಿದಂತೆ ಕರೋನಾ ವಾರಿಯರ್ಸ್ಗಳಿಗೆ ನೀಡುವುದನ್ನು ಮಾತ್ರ ಪ್ರಶ್ನಿಸಿದ್ದೇವೆ.

ಆರಂಭದಲ್ಲಿ ಲಸಿಕೆ ಬಗ್ಗೆ ಬಿಜೆಪಿಯವರಿಗೆ ನಂಬಿಕೆ ಇರಲಿಲ್ಲ. ಹೀಗಾಗಿ ಮೊದಲು ಪ್ರಧಾನ ಮಂತ್ರಿಗಳು ತೆಗೆದುಕೊಳ್ಳದೇ, ಅದನ್ನು ಬಡವರ ಮೇಲೆ ಪ್ರಯೋಗಿಸಿದ್ದು ಎಂದು  ಸರ್ಕಾರದ ವಿರುದ್ಧ ಆರೋಪ ಮಾಡಲಾಗಿದೆ.

ನಾವು ಲಸಿಕೆ ವಿರೋಧಿಸಿದ್ದರೆ ಸಿದ್ದರಾಮಯ್ಯನವರು, ನಾನು, ನಮ್ಮ ನಾಯಕರು ಲಸಿಕೆ ತೆಗೆದುಕೊಳ್ಳುತ್ತಿದ್ದೆವಾ..? ಎಂದು ಡಿಕೆ ಶಿವಕುಮಾರ್‌ ಪ್ರಶ್ನಿಸಿದ್ದಾರೆ.

ನಾವು ಕೊಟ್ಟ ಸಹಕಾರವನ್ನು ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ. ಸುಖಾಸುಮ್ಮನೆ ಆರೋಪ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

Related posts

Latest posts

ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

ಹರಿದ್ವಾರದ ಕುಂಭ ಮೇಳ ಸಂದರ್ಭದಲ್ಲಿ ಮಾಡಲಾಗಿದ ನಾಲ್ಕು ಲಕ್ಷ ಕೋವಿಡ್ ಟೆಸ್ಟ್ ಫಲಿತಾಂಶಗಳಲ್ಲಿ ಹಲವು ನಕಲಿ ಎಂದು ಉತ್ತರಾಖಂಡ ಆರೋಗ್ಯ ಇಲಾಖೆ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ವಿವರವಾದ ತನಿಖೆಯ 1,600 ಪುಟಗಳಲ್ಲಿ...

ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ

ಬ್ರಾಹ್ಮಣ್ಯ ವಿರೋಧಿ ಹೇಳಿಕೆ ಎಂಬ ಆರೋಪದ ಅಡಿ ಇಂದು ಬಸವನಗುಡಿ ಪೊಲೀಸರ ಮುಂದೆ ಹಾಜರಾದ ನಟ ಚೇತನ್ ತನ್ನ ಹೇಳಿಕೆಯ ಬಗ್ಗೆ ಪೊಲೀಸರ ಮುಂದೆ ಸ್ಪಷ್ಟನೆ ದಾಖಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಚಿಕ್ಕಬಳ್ಳಾಪುರ: ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ವಿಫಲ: ರೈತರಿಗೆ ಸಿಗುತ್ತಿಲ್ಲ ಪರಿಹಾರ ಧನ

ಕೊರೋನಾ ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರ ಪರಿಹಾರದ ಅಭಯ ಕೊಟ್ಟಿತು. ಆದರೆ ಅರ್ಹ ಫಲಾನುಭವಿಗಳನ್ನ ಗುರುತಿಸುವಲ್ಲಿ ವಿಫಲವಾದ ಪರಿಣಾಮ ನಿಜವಾದ ರೈತರಿಗೆ ಪರಿಹಾರ ಸಿಗದಂತಾಗಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ರೈತರು ತಮ್ಮ...