• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

CM Siddaramaiah: ಯಾವುದೇ ಜಾತಿ, ಧರ್ಮಕ್ಕೆ ಸೇರಿದ್ದರೂ ನಾವು ಮನುಷ್ಯರು..!!

ಪ್ರತಿಧ್ವನಿ by ಪ್ರತಿಧ್ವನಿ
October 14, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah)

ADVERTISEMENT

ನಮ್ಮ ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು ಎಲ್ಲರ ಉದ್ಯಾನವಾಗಬೇಕು. ಜನರಲ್ಲಿ ಪರಸ್ಪರ ಪ್ರೀತಿಯಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಅವರು ಇಂದು ದಾಸೋಹ ರತ್ನ ಚಕ್ರವರ್ತಿ ದಾನೇಶ್ವರರರು ಶ್ರೀ ಬಸವ ಗೋಪಾಲ ನೀಲಮಾಣಿಕ ಮಠ ,ಇವರ ನೇತೃತ್ವದಲ್ಲಿ ರಬಕವಿ ಬನಹಟ್ಟಿಯ ಸುಕ್ಷೇತ್ರ ಬಂಡಿಗಾಣಿ ಮಠದಲ್ಲಿ (Rabakavi Banahatti Bandigani Math) ಆಯೋಜಿಸಲಾಗಿದ್ದ ವಿಶ್ವಶಾಂತಿಗಾಗಿ ಸರ್ವಧರ್ಮ ಮಹಾಸಂಗಮ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾಡಿದರು.

ಸರ್ವ ಧರ್ಮ ಮಹಾಸಂಗಮ ನಡೆಯುತ್ತಿರುವುದು ಇಂದಿನ ಪರಿಸ್ಥಿತಿಯಲ್ಲಿ ಸಮಂಜಸವಾಗಿದೆ. ದೇಶದಲ್ಲಿ ಹಾಗೂ ಜಗತ್ತಿನಲ್ಲಿ ಅನೇಕ ಧರ್ಮ, ಜಾತಿಗಳಿವೆ. ಜಾತಿ ಧರ್ಮಗಳನ್ನು ನಾವು ಮಾಡಿಲ್ಲ, ಮೊದಲಿನಿಂದ ನಮ್ಮಲ್ಲಿ ಬೆಳೆದುಕೊಂಡು ಬಂದಿದೆ. ನಾವು ಯಾವುದೇ ಧರ್ಮ, ಜಾತಿಗೆ ಸೇರಿದ್ದರೂ ಬೇರೆ ಜಾತಿಯವರನ್ನು ಪ್ರೀತಿಸಬೇಕೇ ಹೊರತು ದ್ವೇಷಿಸಬಾರದು. ಯಾವುದೇ ಜಾತಿ, ಧರ್ಮಕ್ಕೆ ಸೇರಿದ್ದರೂ ನಾವು ಮನುಷ್ಯರು ಎನ್ನುವುದನ್ನು ಅರ್ಥಮಾಡಿಕೊಳ್ಳಬೇಕು ಎಂದರು.

ಕಂದಾಚಾರ, ಮೌಢ್ಯ ಪಾಲಿಸಿದರೆ ವಿದ್ಯಾವಂತರಾಗಿಯೂ ಪ್ರಯೋಜನವಿಲ್ಲ

ಖಾಯಿಲೆ ಬಂದರೆ ಶರೀರಕ್ಕೆ ಯಾರ ರಕ್ತವಾದರೂ ಕೊಡಿ. ಪ್ರಾಣ ಉಳಿದರೆ ಸಾಕು ಎನ್ನುತ್ತೇವೆ. ಇಂಥವರದ್ದೇ ರಕ್ತ ಕೊಡಿ ಎಂದು ಕೇಳುವುದಿಲ್ಲ. ಗುಣಮುಖರಾದ ನಂತರ ಯಾವ ಜಾತಿ ಎಂದು ಕೇಳುವುದು ನ್ಯಾಯವೇ ಎಂದು ಸಿಎಂ ಪ್ರಶ್ನಿಸಿದರು. ಬಸವಣ್ಣನವರು ದಯೆ ಇಲ್ಲದ ಧರ್ಮ ಯಾವುದಯ್ಯ? ದಯೆಯೇ ಧರ್ಮದ ಮೂಲ ಎಂದು ಹೇಳಿದ್ದಾರೆ. ಇದನ್ನು ತಿಳಿದುಕೊಳ್ಳಬೇಕು. ಯಾರೂ ಹುಟ್ಟುವಾಗ ಇಂಥ ಜಾತಿಯಲ್ಲೇ ಹುಟ್ಟಬೇಕೆಂದು ಅರ್ಜಿ ಹಾಕಿಕೊಳ್ಳುವುದಿಲ್ಲ. ಮೂಲಭೂತವಾಗಿ ನಾವೆಲ್ಲರೂ ಮನುಷ್ಯರು. ಪ್ರಾಣಿಗಳನ್ನು ಪ್ರೀತಿಸುವ ನಾವು ಮನುಷ್ಯರನ್ನು ದ್ವೇಷಿಸುತ್ತೇವೆ. ಜಾತಿ ವ್ಯವಸ್ಥೆಯಿಂದ ಗುಲಾಮಗಿರಿ ಮನೆ ಮಾಡಿಕೊಂಡಿದೆ ಎಂದರು. ವಿದ್ಯಾವಂತರಾದ ಮೇಲೂ ಕಂದಾಚಾರ, ಮೌಢ್ಯ ಪಾಲಿಸಿದರೆ ವಿದ್ಯಾವಂತರಾಗಿಯೂ ಪ್ರಯೋಜನವಿಲ್ಲ ಎಂದರು.

ವಿದ್ಯೆ ಯಾರ ಸ್ವತ್ತೂ ಅಲ್ಲ

ನಮ್ಮ ಸಮಾಜದ ಬಹುತೇಕ ಜನ ಅವಿದ್ಯಾವಂತರಾಗಿದ್ದಾರೆ. ಶೂದ್ರರಿಗೆ ಹಾಗೂ ಮಹಿಳೆಯರಿಗೆ ವಿದ್ಯೆ ಕಲಿಯುವ ಅವಕಾಶವಿರಲಿಲ್ಲ. ವಿದ್ಯೆ ಯಾರ ಸ್ವತ್ತೂ ಅಲ್ಲ. ಈ ದೇಶಕ್ಕೆ ಶ್ರೇಷ್ಠ ಸಂವಿಧಾನ ನೀಡಿದ್ದು ಬಾಬಾ ಸಾಹೇಬ್ ಅಂಬೇಡ್ಕರ್ (Baba Saheb Ambedkar)ಅವರು. ಮೂಢನಂಬಿಕೆ, ಕಂದಾಚಾರಗಳ ವಿರುದ್ಧ ಬಸವಣ್ಣನವರು ವಚನಗಳನ್ನು ರಚಿಸಿದ್ದಾರೆ. ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಜಡತ್ವವಿರುವ ವ್ಯವಸ್ಥೆಯಾಗಿರುವುದರಿಂದ ಇಷ್ಟು ವರ್ಷಗಳಾದರೂ ಬದಲಾವಣೆಯಾಗಿಲ್ಲ. ಜಾತ್ಯತೀತ ಸಮಾಜ ನಿರ್ಮಾಣವಾಗಲು ಸಾಧ್ಯವಾಗಿಲ್ಲ ಎಂದರು. ಸಮಾಜದ ಅಸಮಾನತೆಯನ್ನು ತೊಡೆದುಹಾಕುವವರೆಗೆ ಸ್ವಾತಂತ್ರ್ಯ ಯಶಸ್ವಿಯಾಗುವುದಿಲ್ಲ ಎಂದು ಅಂಬೇಡ್ಕರ್ ಹೇಳಿದ್ದಾರೆ ಎಂದರು. ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಅಸಮಾನತೆಗಳನ್ನು ತೊಡೆದುಹಾಕದಿದ್ದರೆ ಅಸಮಾನತೆಯಿಂದ ನರಳುವವರು ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸ ಮಾಡುತ್ತಾರೆ ಎಂಬ ಎಚ್ಚರಿಕೆಯನ್ನೂ ಅವರು ಕೊಟ್ಟಿದ್ದಾರೆ ಎಂದು ತಿಳಿಸಿದರು.

ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ: ಖಂಡಿಸಬೇಕು

ಇತ್ತೀಚೆಗೆ ಸನಾತನ ಧರ್ಮಕ್ಕೆ ಸೇರಿದ ವ್ಯಕ್ತಿಯೊಬ್ಬ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದಿದ್ದಾರೆ. ಯಾವ ಧರ್ಮವೂ ದ್ವೇಷಿಸಬೇಕು ಎಂದು ಹೇಳುವುದಿಲ್ಲ. ಕಾನೂನು ಓದಿರುವ ವಕೀಲನೊಬ್ಬ ರೀತಿ ಮಾಡುವುದನ್ನು ನಾವು ಖಂಡಿಸಬೇಕು. ಸಹಿಸಿಕೊಳ್ಳಬಾರದು. ಇಂಥವೆಲ್ಲಾ ನಡೆದರೆ ಸಮಾಜದಲ್ಲಿ ಶಾಂತಿ ಎಲ್ಲಿ ನೆಲೆಸುತ್ತದೆ ಎಂದರು.

ಚಕ್ರವರ್ತಿ ದಾನೇಶ್ವರ ಸ್ವಾಮೀಜಿ(Chakravarthi Daneshwara Swamiji), ಅಬಕಾರಿ ಸಚಿವ ಬಿ. ಬಿ ತಿಮ್ಮಾಪುರ(Excise Minister B. B. Thimmapur), ಮಾಜಿ ಸಚಿವರು ಹಾಗೂ ಮೇಲ್ಮನೆ ಸದಸ್ಯೆ ಉಮಾಶ್ರೀ(Umashree), ವಿಜಯಾನಂಧ ಕಾಶಪ್ಪನವರ್(Vijayananda Kashappanavar), ಕೈಗಾರಿಕೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ನಂಜಯ್ಯ್ ಮಠ್(Nanjay Math), ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲ(Sadhu Kokila), ಮಾಜಿ ಶಾಸಕ ನಂದ ನ್ಯಾಮದಾಳ(EX MLA Nanda Nyamadala), ಮೊದಲಾದವರು ಉಪಸ್ಥಿತರಿದ್ದರು.

Tags: AmbedkarBagalkoteChakravarthi Daneshwara Swamijichief ministerCM SiddaramaiahEX MLA Nanda NyamadalaExcise Minister B. B. ThimmapurKarnatakaMinisterNanjay MathRabakaviSadhu KokilasiddaramaiahStudiesUmashreeVijayananda Kashappanavar
Previous Post

Priyank Kharge: ಬೆದರಿಕೆ ಕರೆಗಳಿಗೆಲ್ಲಾ ನಾನು ಹೆದರಲ್ಲ: ಪ್ರಿಯಾಂಕ್ ಖರ್ಗೆ

Next Post

CN Ashwath Narayan: ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಆತ್ಮಹತ್ಯೆ ಗ್ಯಾರೆಂಟಿ..!!

Related Posts

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?
ಕರ್ನಾಟಕ

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ವರ್ಷದ ಆಡಳಿತದ ಬಳಿಕ ಅಧಿಕೃತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಉಪಮುಖ್ಯಮಂತ್ರಿ...

Read moreDetails
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
Next Post

CN Ashwath Narayan: ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಆತ್ಮಹತ್ಯೆ ಗ್ಯಾರೆಂಟಿ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada