ಸದ್ಯಕ್ಕೆ ನೂತನ ಸಂಸತ್ ಭವನ ಉದ್ಘಾಟನೆ ವಿಚಾರದ ವಿವಾದ ಮುಗಿಯುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಈ ವಿವಾದವನ್ನು ಬಗೆಹರಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರ ಮುಜುಗರಕ್ಕೆ ಒಳಗಾಗುತ್ತಿದೆ. ಈಗ ಈ ವಿಚಾರವನ್ನ ಮುಂದಿಟ್ಟು ಕೊಂಡಿರುವ ವಿರೋಧ ಪಕ್ಷಗಳು ಕೇಂದ್ರ ಸರ್ಕಾರವನ್ನ ಕಟ್ಟಿ ಹಾಕಲು ಪ್ರಯತ್ನಿಸುತ್ತವೆ
ಸದ್ಯಕ್ಕೆ 19 ವಿರೋಧಪಕ್ಷಗಳು ನೂತನ ಸಂಸದ ಭವನ ಉದ್ಘಾಟನೆ ಕಾರ್ಯಕ್ರಮದಿಂದ ದೂರ ಉಳಿದಿದ್ದು ರಾಷ್ಟ್ರಪತಿಗಳನ್ನು ಆಹ್ವಾನಿಸದಿರುವುದಕ್ಕೆ ವ್ಯಾಪಕವಾದ ಟೀಕೆ ಮತ್ತು ಆಕ್ರೋಶವನ್ನು ವ್ಯಕ್ತಪಡಿಸುತ್ತಿವೆ.
ಆದರೆ ಇನ್ನೂ ಕೆಲವೊಂದು ವಿರೋಧ ಪಕ್ಷಗಳು ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮಕ್ಕೆ ಬೆಂಬಲವನ್ನ ಸೂಚಿಸಿದೆ ಅದರಲ್ಲೂ ಜಾತ್ಯಾತೀತ ಜನತಾದಳ ರಾಷ್ಟ್ರ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮಕ್ಕೆ ಭಾಗಿಯಾಗುವುದಾಗಿ ತಿಳಿಸಿದ್ದಾರೆ. ಇದು ಕಾಂಗ್ರೆಸ್ ಸೇರಿದಂತೆ ಇತರೆ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ನಾವು ಕಾಂಗ್ರೆಸ್ಸಿಗರ ಗುಲಾಮರಲ್ಲ ಸ್ವಂತ ನಿರ್ಧಾರಗಳನ್ನ ತೆಗೆದುಕೊಳ್ಳಲು ನಾವು ಸಮರ್ಥರಾಗಿದ್ದೇವೆ. ನಾವ್ಯಾಕೆ ಕಾಂಗ್ರೆಸ್ಸಿಗರನ್ನ ಅನುಸರಿಸಬೇಕು ಎಂಬ ಪ್ರಶ್ನೆಯನ್ನು ಕೇಳಿದ್ದಾರೆ.
ಇನ್ನು ಇದಕ್ಕೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ “ನೂತನ ಸಂಸತ್ ಭವನವನ್ನು ರಾಷ್ಟ್ರಪತಿಗಳೇ ಉದ್ಘಾಟಿಸಬೇಕು… ರಾಷ್ಟ್ರಪತಿ ಚುನಾವಣೆ ನಡೆದಾಗ ತಮ್ಮ ಪಕ್ಷ ದೇಶದ ರಾಷ್ಟ್ರಪತಿ ಆಯ್ಕೆಗೆ ಮತದಾನ ಬಹಿಷ್ಕರಿಸಿದ್ದನ್ನು ಹೆಚ್.ಡಿ.ಕುಮಾರಸ್ವಾಮಿ ಮರೆಯಬಾರದು” ಅಂತ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಕಿಡಿ ಕಾರಿದ್ದಾರೆ.