• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ಮೂರು ವರ್ಷಗಳ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ‌ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಣೆ : ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
May 27, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯಲ್ಲಿ ಸೂಚಿಸಿರುವಂತೆ ರಾಜೀನಾಮೆಗೆ ನಿರ್ಧರಿಸಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ADVERTISEMENT
Karnataka Power Tussle : ಸಿದ್ದು ಮುಂದಿನ ಹೆಜ್ಜೆ ಏನ್‌ ಗೊತ್ತಾ.? #siddaramaiah #dkshivakumar #pratidhvani

ಈ ನಡುವೆಯೇ ಸಿದ್ದರಾಮಯ್ಯ ಬೆಂಗಲಿಗರು ರಾಜೀನಾಮೆ ನೀಡದಂತೆ ಒತ್ತಡ ಹೇರುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಇದೀಗ ಖುದ್ದು ಸಿಎಂ ಸಿದ್ದರಾಮಯ್ಯ ಅವರ ಸಾಮಾಜಿಕ ಜಾಲತಾಣದ ಪೋಸ್ಟ್‌ ರಾಜೀನಾಮೆಯ ಸುಳಿವು ನೀಡುತ್ತಿದೆಯಾ ಎನ್ನುವ ಅನುಮಾನ ಮೂಡುತ್ತಿದೆ.

ಇದನ್ನೂ ಓದಿ : ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ದೆಹಲಿ ಸಭೆ ಬಳಿಕ ಕಾಂಗ್ರೆಸ್‌ನಲ್ಲಿ ಕುತೂಹಲ

ಸಿದ್ದರಾಮಯ್ಯ ಅವರ ಅಧಿಕೃತ ಖಾತೆಯಿಂದ, ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ‌ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ ಎಂದು ಹೇಳುವ ಮೂಲಕ ತಮ್ಮ ಸಾಧನೆಯನ್ನು ಕನ್ನಡಿಗರ ಮುಡಿಗೇರಿಸಿದ್ದಾರೆ.

ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಪ್ರತಿ ಮನೆಗೂ ತಲುಪಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಸಿದ್ದರಾಮಯ್ಯ ಸರ್ಕಾರದ ಕಾರ್ಯವೈಖರಿ ತಿಳಿಸಿದ್ದಾರೆ.

ವಿದ್ಯುತ್ ಬಿಲ್ ಹೊರೆಯಿಂದ ಕಂಗೆಟ್ಟಿದ್ದ ಜನರಿಗೆ ಉಚಿತ ವಿದ್ಯುತ್ ಸೌಲಭ್ಯ ನೀಡಿ, ನೆಮ್ಮದಿಯ ಬದುಕು ಕಲ್ಪಿಸುವ ಬದ್ಧತೆಯೊಂದಿಗೆ ನಾವು ಜಾರಿಗೆ ತಂದ ಗೃಹಜ್ಯೋತಿ ಯೋಜನೆ ಇಂದು ನಾಡಿನ ಪ್ರತಿ ಮನೆಯನ್ನು ಬೆಳಗುತ್ತಿದೆ. ಈ ಯೋಜನೆಯಡಿ ರಾಜ್ಯದ ಒಟ್ಟು 1.64 ಕೋಟಿ ಕುಟುಂಬಗಳಿಗೆ ಮಾಸಿಕ ಗರಿಷ್ಠ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಈವರೆಗೆ ಯೋಜನೆಗಾಗಿ ₹26,115 ಕೋಟಿ ಅನುದಾನವನ್ನು ವ್ಯಯಿಸಲಾಗಿದೆ ಎಂದು ಸಿದ್ದರಾಮಯ್ಯ ಗೃಹ ಜ್ಯೋತಿ ಯೋಜನೆಯ ಯಶೋಗಾಥೆಯನ್ನು ಬಿಚ್ಚಿಟ್ಟಿದ್ದಾರೆ.

ಹೀಗಾಗಿ ರಾಜಕೀಯ ಕ್ಷಿಪ್ರ ಬೆಳವಣಿಗೆಗಳ ನಡುವೆಯೇ ಸಿದ್ದರಾಮಯ್ಯ ಈ ಪೋಸ್ಟ್‌ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

Tags: CM SiddaramaiahCM siddaramaiah ResignCongress 5 guaranteescongress karnatakacongress vp rahul gandhiDK ShivakumarGruha JyotiKarnataka Governmentkarnataka political crisisSiddaramaiah Twitter Post
Previous Post

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
ಕರ್ನಾಟಕ

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

by ಪ್ರತಿಧ್ವನಿ
May 27, 2026
0

ಐದು ರಾಜ್ಯಗಳ ಚುನಾವಣೆ ಬಳಿಕ ಇದೀಗ ದೇಶದ ರಾಜಕೀಯ ಗಮನ ಸಂಪೂರ್ಣವಾಗಿ ಕರ್ನಾಟಕದತ್ತ ತಿರುಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ರಾಜಕೀಯ ವಲಯದಲ್ಲಿ ಭಾರೀ...

Read moreDetails
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada