• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾವು ನಿಮ್ಮೊಂದಿಗೆ ಇದ್ದೇವೆ, ಟನಲ್ ರಸ್ತೆ ಯೋಜನೆ ಮುಂದುವರೆಸಿ; ಡಿಸಿಎಂಗೆ ನಾಗರಿಕರ ಬೆಂಬಲ

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ

ಪ್ರತಿಧ್ವನಿ by ಪ್ರತಿಧ್ವನಿ
October 26, 2025
in Top Story, ಕರ್ನಾಟಕ, ರಾಜಕೀಯ
0
ನಾವು ನಿಮ್ಮೊಂದಿಗೆ ಇದ್ದೇವೆ, ಟನಲ್ ರಸ್ತೆ ಯೋಜನೆ ಮುಂದುವರೆಸಿ; ಡಿಸಿಎಂಗೆ ನಾಗರಿಕರ ಬೆಂಬಲ
Share on WhatsAppShare on FacebookShare on Telegram

ADVERTISEMENT

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ: ನಾಗರಿಕರ ಪ್ರಶಂಸೆ

ಬೆಂಗಳೂರು, ಅ. 26:

“ಟನಲ್ ರಸ್ತೆ ಯೋಜನೆ ಅತ್ಯುತ್ತಮ ಆಲೋಚನೆ, ನಾವು ನಿಮ್ಮ ಬೆಂಬಲಿಕ್ಕಿದ್ದೇವೆ, ನೀವು ಮುಂದುವರೆಯಿರಿ”, “ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ…”

ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಕಾರ್ಯವೈಖರಿ, ದೂರದೃಷ್ಟಿ ಯೋಜನೆಗಳಿಗೆ ಸಾರ್ವಜನಿಕರು ಮುಕ್ತ ಕಂಠದಿಂದ ಹೊಗಳಿದ ಪರಿ ಇದು.

Anantkumar Hegde  ಜಾಡಿಸಿ ಒದ್ದರೆ ಬುದ್ಧಿ ಬರುತ್ತೆ #pratidhvani

ಬೆಂಗಳೂರು ನಡಿಗೆ ಅಂಗವಾಗಿ ಕಬ್ಬನ್ ಪಾರ್ಕ್ ನಲ್ಲಿ ಭಾನುವಾರ ನಡೆದ ನಾಗರಿಕರ ಜತೆ ಸಂವಾದದ ವೇಳೆ ಹಲವಾರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕಾರ್ಯವೈಖರಿಯನ್ನು ಕೊಂಡಾಡಿದರು.

ನಾಗರಿಕರೊಬ್ಬರು, “ಸಾರ್, ನೀವು ಕೈಗೆತ್ತಿಕೊಂಡಿರುವ ಟನಲ್ ರಸ್ತೆ ಯೋಜನೆ ಚೆನ್ನಾಗಿದೆ. ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಹೊಸ ರಸ್ತೆಗಳು ಬೇಕು. ಟನಲ್ ಯೋಜನೆ ಸಾಕಾರಗೊಳಿಸಿ. ಇದೊಂದು ಅತ್ಯುತ್ತಮ ಯೋಜನೆ” ಎಂದು ಬೆಂಬಲ ವ್ಯಕ್ತಪಡಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ಡಿಸಿಎಂ ಶಿವಕುಮಾರ್ ‌ಅವರು, “ನಾನು ಸಹ ಸಾಕಷ್ಟು ‌ಆಲೋಚನೆ ಮಾಡಿದೆ. ರಸ್ತೆ ಅಗಲೀಕರಣಕ್ಕಾಗಿ ಮನೆಗಳನ್ನು ಒಡೆಯಲು ಆಗುವುದಿಲ್ಲ. ಇದಕ್ಕೆ ದುಪ್ಪಟ್ಟು ಪರಿಹಾರ ನೀಡಬೇಕು. ಅದರ‌ ಬದಲು ಸುರಂಗ ಮಾರ್ಗ ರಸ್ತೆಯೇ ಸರಿ ಎಂದು ಯೋಜನೆಗೆ ಮುಂದಾಗಿದ್ದೇನೆ” ಎಂದರು.

“ನಿಮ್ಮ ಆಲೋಚನೆ ಚೆನ್ನಾಗಿದೆ. ಕಳೆದ 30 ವರ್ಷಗಳಿಂದ ನಗರದಲ್ಲಿ ಹೊಸ ರಸ್ತೆಗಳು ಆಗಿಲ್ಲ. ಮುಂಬೈನಲ್ಲಿ ಟನಲ್‌ ರಸ್ತೆ ಮಾಡುತ್ತಿದ್ದಾರೆ. ಅದಕ್ಕೆ ಯಾರೂ ಸಹ ವಿರೋಧ ಮಾಡುವುದಿಲ್ಲ. ‌ಆದರೆ ಇಲ್ಲಿ ಮಾಡುತ್ತಿದ್ದಾರೆ” ಎಂದು ಮತ್ತೊಬ್ಬರು ಮೆಚ್ಚುಗೆ ವ್ಯಕ್ತಪಡಿಸಿದರು.

ಹಿರಿಯ ನಾಗರಿಕರೊಬ್ಬರು, “ಶಿವಕುಮಾರ್ ಅವರು ಬೆಂಗಳೂರು ಅಭಿವೃದ್ಧಿ ಸಚಿವರಾಗಿರುವುದು ಪುಣ್ಯ ಎಂದು ಹೇಳಬಹುದು. ಏಕೆಂದರೆ ಈ ನಗರದ ಬಗ್ಗೆ ಇವರು ಅಪಾರ ಕಾಳಜಿ ಹೊಂದಿದ್ದಾರೆ. ವಿದೇಶಿಯರು ಬೆಂಗಳೂರಿಗೆ ಬಂದರೆ ಇಲ್ಲಿನ ಸ್ವಚ್ಛತೆ ನೋಡಿ ಮೆಚ್ಚುಗೆ ವ್ಯಕ್ತಪಡಿಸಬೇಕು ಎಂದು ಕೆಲಸ ಮಾಡುತ್ತಿದ್ದಾರೆ. ಶಿವಕುಮಾರ್ ಆವರು ಗ್ರಾಮೀಣ ಭಾಗದಿಂದ ಬಂದವರಾದರೂ ಬೆಂಗಳೂರಿನ ಬಗ್ಗೆ ಪ್ರೀತಿ ಹೊಂದಿದ್ದಾರೆ” ಎಂದು ಪ್ರೀತಿಪೂರ್ವಕ ಮಾತುಗಳನ್ನಾಡಿದರು.

ರಸ್ತೆ ವಿನ್ಯಾಸ ಸ್ಪರ್ಧೆ ಏರ್ಪಡಿಸಲು ಸಲಹೆ

ಬೆಂಗಳೂರಿನ ರಸ್ತೆಗಳು ಹೇಗಿರಬೇಕು ಎಂದು ‘ವಿನ್ಯಾಸ ಸ್ಪರ್ಧೆ’ ಏರ್ಪಡಿಸಿದರೆ ಜನರಿಗೆ ಬೇಕಾದಂತಹ ರಸ್ತೆ ಜನರಿಂದಲೇ ದೊರೆಯಲಿದೆ.‌ ಈ ಕಲ್ಪನೆಯಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ನೆಹೇಶ್ ಎಂಬುವರು ತಮ್ಮ ಆಲೋಚನೆ ಹಂಚಿಕೊಂಡರು.‌ ಇದನ್ನು ಶ್ಲಾಘಿಸಿದ ಡಿಸಿಎಂ ಅವರು “ಆಲೋಚನೆ ತುಂಬಾ ಚೆನ್ನಾಗಿದೆ. ಇವರ ದೂರವಾಣಿ ಸಂಖ್ಯೆಯನ್ನು ‌ಪಡೆಯಿರಿ.‌ ಇವರ ಬಳಿ ಚರ್ಚೆ ಮಾಡೋಣ” ಎಂದು ಅಧಿಕಾರಿಗಳಿಗೆ ಸೂಚಿಸಿದರು.

Tags: DCM DK Shivakumardcm dk shivakumar bookDK Shivakumardk shivakumar cm newsdk shivakumar controversydk shivakumar familydk shivakumar hassan visitdk shivakumar in jp parkdk shivakumar interviewdk shivakumar latestdk shivakumar latest newsdk shivakumar newsdk shivakumar on rssdk shivakumar rss anthemdk shivakumar rss songdk shivakumar speechdk shivakumar statementdk shivakumar today newsdk shivakumar todays newsdk shivakumar wifedk shivakumar wife templeusha dk shivakumar
Previous Post

ವಿರಾಟ್ ಈಗ (Hercules) ಹರ್ಕ್ಯುಲಸ್.

Next Post

ಕಬ್ಬನ್ ಪಾರ್ಕ್ ಅಭಿವೃದ್ಧಿಗೆ 5 ಕೋಟಿ ಅನುದಾನ: ಡಿಸಿಎಂ‌ ಡಿ.ಕೆ.ಶಿವಕುಮಾರ್ ಘೋಷಣೆ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ಕಬ್ಬನ್ ಪಾರ್ಕ್ ಅಭಿವೃದ್ಧಿಗೆ 5 ಕೋಟಿ ಅನುದಾನ: ಡಿಸಿಎಂ‌ ಡಿ.ಕೆ.ಶಿವಕುಮಾರ್ ಘೋಷಣೆ

ಕಬ್ಬನ್ ಪಾರ್ಕ್ ಅಭಿವೃದ್ಧಿಗೆ 5 ಕೋಟಿ ಅನುದಾನ: ಡಿಸಿಎಂ‌ ಡಿ.ಕೆ.ಶಿವಕುಮಾರ್ ಘೋಷಣೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada