• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರು ಜಾಗತಿಕ ನಗರಗಳ ಜತೆ ಸ್ಪರ್ಧಿಸುವಂತೆ ಮಾಡಲಾಗುವುದು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರನ್ನು ವಿಶ್ವದರ್ಜೆ ಪ್ರಗತಿಯ ಹಬ್ ಆಗಿ ಪರಿವರ್ತಿಸಲು ಆರ್ಥಿಕ ಮಾಸ್ಟರ್ ಪ್ಲಾನ್ ರೂಪಿಸಲು ಐಎಸ್ಇಜಿ ಸಂಸ್ಥೆಯೊಂದಿಗೆ ಸರ್ಕಾರದ ಒಡಂಬಡಿಕೆ..

ಪ್ರತಿಧ್ವನಿ by ಪ್ರತಿಧ್ವನಿ
May 5, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಬೆಂಗಳೂರು ಜಾಗತಿಕ ನಗರಗಳ ಜತೆ ಸ್ಪರ್ಧಿಸುವಂತೆ ಮಾಡಲಾಗುವುದು: ಡಿಸಿಎಂ ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

ಬೆಂಗಳೂರು : ಬೆಂಗಳೂರನ್ನು ವಿಶ್ವದರ್ಜೆಯ ಪ್ರಗತಿಯ ಹಬ್ ಆಗಿ ಪರಿವರ್ತಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕೆ ಅಗತ್ಯವಿರುವ ಆರ್ಥಿಕ ಮಾಸ್ಟರ್ ಪ್ಲಾನ್ ರೂಪಿಸಲು ಸುಸ್ಥಿರ ಉದ್ಯೋಗ ಮತ್ತು ಅಭಿವೃದ್ಧಿ ದತ್ತಿ (ISEG) ಸಂಸ್ಥೆಯೊಂದಿಗೆ ಉದ್ದೇಶ ಪತ್ರಕ್ಕೆ (Joint Statement of Intent) ಸಹಿ ಹಾಕಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ADVERTISEMENT
R.B. Timmapur : ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ನಾವು ಒಳ್ಳೆಯ ಕೆಲಸ ಮಾಡಿದ್ದೇವೆ.. #pratidhvani

ವಿಧಾನಸೌಧದಲ್ಲಿಂದು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿ ನಾಥ್ ಹಾಗೂ ISEG ಯ ನಿರ್ದೇಶಕ ಡಾ. ಶಿರೀಶ್ ಸಂಖೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಪರಸ್ಪರ ಸಹಿ ಹಾಕಿ ಪತ್ರ ವಿನಿಮಯ ಮಾಡಿಕೊಂಡರು. ಈ ಸಂದರ್ಭದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಒಡಂಬಡಿಕೆ ಉದ್ದೇಶದ ಬಗ್ಗೆ ವಿವರಿಸಿ, ಸಲಹೆ ಸೂಚನೆ ನೀಡಿದರು.

ಬೆಂಗಳೂರಿನಲ್ಲಿ ವಿಶ್ವದರ್ಜೆ ಪ್ರಗತಿ ಹಬ್ ಮಾಡಲು ಕಳೆದ ಮೂರು ವರ್ಷಗಳಿಂದ ಪ್ರಯತ್ನ ಮಾಡುತ್ತಲೇ ಇದ್ದೇವೆ. ಕಳೆದ ಮೂರು ವರ್ಷಗಳಲ್ಲಿ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ದಾಖಲೆ ಪ್ರಮಾಣದಲ್ಲಿ ಆರ್ಥಿಕ ಶಕ್ತಿ ನೀಡಿದ್ದೇವೆ. ಬೆಂಗಳೂರು ಮೆಟ್ರೋಪಾಲಿಟಿನ್ ಪ್ರದೇಶದಲ್ಲಿ ತಲಾದಾಯ 8.850 ಡಾಲರ್ ನಷ್ಟಿದೆ ಇದೆ. ರಾಜ್ಯದ ಸರಾಸರಿಗಿಂತ ದುಪ್ಪಟ್ಟಿದೆ. 8 ಸಾವಿರ ಚದರ ಕಿ.ಮೀಗಿಂತ ಹೆಚ್ಚು ಪ್ರದೇಶದಲ್ಲಿ ಬೆಂಗಳೂರು ನಗರ, ಗ್ರಾಮಾಂತರ ಹಾಗೂ ದಕ್ಷಿಣ ಜಿಲ್ಲೆಗಳು ಹರಡಿದ್ದು, 1.6 ಕೋಟಿ ಜನ ಇಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಭಾರತದ ಸಾಫ್ಟ್ವೇರ್ ರಫ್ತಿನಲ್ಲಿ 42% ಕೊಡುಗೆ ಬೆಂಗಳೂರು ನೀಡುತ್ತಿದೆ. ಬೆಂಗಳೂರು ನಗರಕ್ಕೆ 500 ವರ್ಷಗಳು ಪೂರ್ಣಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ 2032ರಿಂದ 2037ರ ಅವಧಿಯಲ್ಲಿ ಕೈಗೊಳ್ಳಬೇಕಾದ ಆರ್ಥಿಕ ಮಾಸ್ಟರ್ ಪ್ಲಾನ್ ಅನ್ನು ರೂಪಿಸಲು ಚಿಂತನೆ ನಡೆಸಿದ್ದೇವೆ. ಹೀಗಾಗಿ ಬೆಂಗಳೂರಿಗೆ ಹೊಸ ರೂಪ, ಶಕ್ತಿ ನೀಡಬೇಕು ಎಂದು ತೀರ್ಮಾನಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ನಾನು ಚುನಾವಣೆಯಲ್ಲಿ ಸೋತಿಲ್ಲ, ರಾಜೀನಾಮೆ ನೀಡಲ್ಲ: ಕಿಡಿಕಾರಿದ ಮಮತಾ ಬ್ಯಾನರ್ಜಿ

ಎಲ್ಲಿ ಉದ್ಯೋಗ ಸೃಷ್ಟಿಸಬೇಕು, ಎಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಬೇಕು, ಎಲ್ಲಿ ವಸತಿ ಯೋಜನೆಗಳನ್ನು ತರಬೇಕು, ಸಂಚಾರ ದಟ್ಟಣೆ ನಿವಾರಣೆಗೆ ಸಂಬಂಧಿಸಿದಂತೆ ನಕ್ಷ ರೂಪಿಸಲಾಗುವುದು. ದಶದ ಇತರೆ ನಗರಗಳಾದ ಮುಂಬೈ, ದೆಹಲಿ, ಕೋಲ್ಕತ್ತಾಗಳಲ್ಲಿ ಇಲ್ಲಿಗಿಂತ ಹೆಚ್ಚು ಸಂಚಾರ ದಟ್ಟಣೆ ನೋಡಿದ್ದೇನೆ. ನಾನು ಅವರನ್ನು ದೂರುತ್ತಿಲ್ಲ. ಈ ಸಮಸ್ಯೆಗೆ ಪರಿಹಾರ ಯಾವ ರೀತಿ ನೀಡಬೇಕು ಯೋಜನೆ ರೂಪಿಸಿದ್ದೇವೆ. ಸುಮಾರು 2 ಲಕ್ಷ ಕೋಟಿ ಮೌಲ್ಯದ ಯೋಜನೆ ರೂಪಿಸಿದ್ದು ಹಂತ ಹಂತವಾಗಿ ಇದನ್ನು ಕಾರ್ಯಗತಗೊಳಿಸಲಾಗುತ್ತಿದೆ” ಎಂದು ವಿವರಿಸಿದ್ದಾರೆ.

ದತ್ತಾಂಶ ಆಧಾರಿತ ಆರ್ಥಿಕ ಮಾಸ್ಟರ್ ಪ್ಲಾನ್ ರೂಪಿಸಲು ಸೂಚಿಸಲಾಗುತ್ತಿದೆ. ಇದಕ್ಕೆ ನಮ್ಮ ಆರ್ಥಿಕ ಹೊರೆ ಇರುವುದಿಲ್ಲ. ಇಂಧನ, ಪಾಲಿಕೆ, ಜಲ, ನಗರಾಭಿವೃದ್ಧಿ, ಮಾಹಿತಿ ತಂತ್ರಜ್ಞಾನ, ಕೈಗಾರಿಕೆ ಕ್ಷೇತ್ರಗಳು ಸೇರಿದಂತೆ ಪ್ರಮುಖ ನಾಗರೀಕರ ಅಭಿಪ್ರಾಯ, ಸಲಹೆ ಪಡೆಯಲಾಗುವುದು. ಬೆಂಗಳೂರನ್ನು ವಿಶ್ವದರ್ಜೆ ಪ್ರಗತಿ ಹಬ್ ಮಾಡಲು ಕೈಗೊಳ್ಳಲಾಗಿರುವ ತೀರ್ಮಾನಕ್ಕೆ ಹೊಸರೂಪ ನೀಡುತ್ತಿದ್ದೇವೆ. ಜಾಗತಿಕ ನಗರಗಳ ಜೊತೆ ಸ್ಪರ್ಧೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ನಮ್ಮ ಜತೆ ಒಡಂಬಡಿಕೆ ಮಾಡಿಕೊಳ್ಳಲು ಮುಂದೆ ಬಂದಿರುವ ಐಎಸ್ಇಜಿ ಫೌಂಡೇಷನ್ ಸಂಸ್ಥೆ ಮುಂಬೈ, ವಿಶಾಖಪಟ್ಟಣ, ಪುಣೆ, ವಾರಣಾಸಿಗಳಲ್ಲಿ ಈ ಯೋಜನೆ ರೂಪಿಸಿದ್ದಾರೆ. ಇವರಿಗೆ 4 ತಿಂಗಳ ಕಾಲಾವಕಾಶ ನೀಡಿದ್ದು, ಈ ಅವಧಿಯಲ್ಲಿ ಅವರು ನಕ್ಷೆ ರೂಪಿಸಲಿದ್ದಾರೆ. ಇವರಿಗೆ ಅಗತ್ಯವಿರುವ ಸಹಕಾರವನ್ನು ನೀಡಬೇಕು ಎಂದು ನಮ್ಮ ಅಧಿಕಾರಿಗಳಿಗೆ ಸೂಚಿಸುತ್ತಿದ್ದೇನೆ. ಬೆಂಗಳೂರಿನ ನಾಗರೀಕರು, ಡೆವಲಪರ್ ಗಳು, ಉದ್ದಿಮೆದಾರರು, ಶೈಕ್ಷಣಿಕ ಸಂಸ್ಥೆಗಳನ್ನು ವಿಶ್ವಾಸಕ್ಕೆ ಪಡೆದು ದೊಡ್ಡ ಮಾಸ್ಟರ್ ಪ್ಲಾನ್ ಸೃಷ್ಟಿಸಬೇಕು ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

Tags: Benglore Global CityCM Siddaramaiahcongress karnatakaDCM DK ShivakuamarISG FoundationJoint Statement intentKarnataka GovermentMetro Politian CityPratidhvaniPuneTourists PlansTushar Girinath
Previous Post

ನಾನು ಚುನಾವಣೆಯಲ್ಲಿ ಸೋತಿಲ್ಲ, ರಾಜೀನಾಮೆ ನೀಡಲ್ಲ: ಕಿಡಿಕಾರಿದ ಮಮತಾ ಬ್ಯಾನರ್ಜಿ

Next Post

ಸ್ಟಾರ್ ನಾಯಕರ ಮಾತೇ ಮುಳುವಾಯಿತಾ? ಬಾಗಲಕೋಟೆಯಲ್ಲಿ ಬಿಜೆಪಿ ಸೋಲಿನ ಹಿಂದೆ ‘ನಾಲಿಗೆಯ ದೋಷ’ ಚರ್ಚೆ

Related Posts

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..
Top Story

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..

by ಪ್ರತಿಧ್ವನಿ
May 17, 2026
0

ಬೆಂಗಳೂರು : ಪಂಜಾಬ್​ ಕಿಂಗ್ಸ್​ ವಿರುದ್ಧ ನಡೆದ ಐಪಿಎಲ್​ 2026ರ 61ನೇ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಭರ್ಜರಿ ಪ್ರದರ್ಶನ ನೀಡಿದ್ದು ಗೆಲುವಿನ ರಣಕೇಕೆ ಹಾಕಿದೆ...

Read moreDetails
ಚಂಡ ಮಾರುತ ಬರುವ ಮುನ್ನ ಶಾಂತವಾಗಿರುತ್ತೆ : ಇರಾನ್‌ ಮೇಲೆ ಟ್ರಂಪ್ ಮತ್ತೆ ದಾಳಿಯ ಮುನ್ಸೂಚನೆ..!

ಚಂಡ ಮಾರುತ ಬರುವ ಮುನ್ನ ಶಾಂತವಾಗಿರುತ್ತೆ : ಇರಾನ್‌ ಮೇಲೆ ಟ್ರಂಪ್ ಮತ್ತೆ ದಾಳಿಯ ಮುನ್ಸೂಚನೆ..!

May 17, 2026
ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

May 17, 2026
ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

May 17, 2026
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
Next Post
ಸ್ಟಾರ್ ನಾಯಕರ ಮಾತೇ ಮುಳುವಾಯಿತಾ? ಬಾಗಲಕೋಟೆಯಲ್ಲಿ ಬಿಜೆಪಿ ಸೋಲಿನ ಹಿಂದೆ ‘ನಾಲಿಗೆಯ ದೋಷ’ ಚರ್ಚೆ

ಸ್ಟಾರ್ ನಾಯಕರ ಮಾತೇ ಮುಳುವಾಯಿತಾ? ಬಾಗಲಕೋಟೆಯಲ್ಲಿ ಬಿಜೆಪಿ ಸೋಲಿನ ಹಿಂದೆ ‘ನಾಲಿಗೆಯ ದೋಷ’ ಚರ್ಚೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada