ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಗದ್ದಲ ಎಬ್ಬಿಸಿದ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಸುಖಾಂತ್ಯ ಕಂಡಿದ್ದು ನೂತನ ಮುಖ್ಯಮಂತ್ರಿಯಾಗಿ ಬಂಡಾಯ ನಾಯಕ ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಿ ಗುರುವಾರ ಸಂಜೆ 7:30ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಈ ಮಹತ್ವದ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಏಕನಾಥ್ ಶಿಂಧೆ ನಾವು ಬಾಳಾ ಠಾಕ್ರೆಯವರ ಹಿಂದುತ್ವದ ಉಳಿವಿಗಾಗಿ ಇದನ್ನೆಲ್ಲಾ ಮಾಡಿದ್ವಿ ಎಂದು ಹೇಳಿದ್ದಾರೆ.
ನಾವು ತೆಗೆದುಕೊಂಡಿರುವ ಈ ನಿರ್ಧಾರವು ಬಾಳಾ ಸಾಹೇಬರ ಹಿಂದುತ್ವ ಹಾಗು ನಮ್ಮ ಶಾಸಕರ ಕ್ಷೇತ್ರಗಳ ಅಭಿವೃದ್ದಿಗಾಗಿ ಎಂದಿದ್ದಾರೆ.

ದೇವೇಂದ್ರ ಫಡ್ವವೀಸ್ ಜೀ ಬಳಿ 120 ಶಾಸಕರ ಬಲವಿದೆ ಆದರೆ, ಅವರು ನಮ್ಮಗೆ ಮುಖ್ಯಮಂತ್ರಿ ಸ್ಥಾನವನ್ನ ಬಿಟ್ಟುಕೊಟ್ಟಿದ್ದಾರೆ ಇದು ರಾಷ್ಟ್ರ ರಾಜಕೀಯಕ್ಕೆ ಒಂದು ಉತ್ತಮ ಉದಾಹರಣೆ ಎಂದು ಹೇಳಿದ್ದಾರೆ.
ನನ್ನಗೆ ಮುಖ್ಯಮಂತ್ರಿಯಾಗಲು ಅವಕಾಶ ಮಾಡಿಕೊಟ್ಟ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾಗೆ ತುಂಬು ಹೃದಯದ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ಸರ್ಕಾರ ಸರಿಯಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳುವುದು ನನ್ನ ಕರ್ತವ್ಯ ಇದು ಅಧಿಕಾರಕ್ಕಾಗಿ ನಡೆದ ಹೋರಾಟವಲ್ಲ ಹಿಂದುತ್ವಕ್ಕಾಗಿ ನಡೆದ ಹೋರಾಟ ಎಂದು ಮಹಾ ನೂತನ ಸಿಎಂ ಏಕನಾಥ್ ಶಿಂಧೆ ಪ್ರತಿಕ್ರಿಯಿಸಿದ್ದಾರೆ.