• Home
  • About Us
  • ಕರ್ನಾಟಕ
Thursday, November 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಟೀಕೆ ಮಾಡುವವರಿಗೆ ನಾವು ಜಗ್ಗುವುದಿಲ್ಲ, ಬಗ್ಗುವುದಿಲ್ಲ; ನಮ್ಮ ಕೆಲಸಗಳೇ ಅವರಿಗೆ ಉತ್ತರ:ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
October 16, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ತೊರೆಕಾಡನಹಳ್ಳಿ (ಮಳವಳ್ಳಿ):”ಕೆಲಸ ಮಾಡಿರುವವರನ್ನು ಕಂಡರೆ ಟೀಕೆ ಮಾಡುವುದು, ಮರದಲ್ಲಿ ಹಣ್ಣು ಕಂಡರೆ ಕಲ್ಲು ಹೊಡೆಯುವುದು ಸಹಜ. ಟೀಕೆ ಮಾಡುವವರಿಗೆ ನಾವು ಜಗ್ಗಲ್ಲ, ಬಗ್ಗುವುದಿಲ್ಲ. ನಮ್ಮ ಕೆಲಸಗಳೇ ಅವರಿಗೆ ಉತ್ತರ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ADVERTISEMENT

ಬೆಂಗಳೂರಿನ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ ಐದನೇ ಹಂತದ ಯೋಜನೆಯನ್ನು ಬುಧವಾರ ಸಿಎಂ ಸಿದ್ದರಾಮಯ್ಯ ಅವರ ಜತೆಗೂಡಿ ಶಿವಕುಮಾರ್ ಲೋಕಾರ್ಪಣೆ ಮಾಡಿ, ಮಾತನಾಡಿದರು.

“ಕಾವೇರಿ ಐದನೇ ಹಂತದ ಯೋಜನೆ ಕೇವಲ 110 ಹಳ್ಳಿಗಳಿಗೆ ಮಾತ್ರ ಸೀಮಿತವಾದ ಯೋಜನೆಯಲ್ಲ, ಕರ್ನಾಟಕ ರಾಜ್ಯದ ಜನಸಂಖ್ಯೆಯ ನಾಲ್ಕನೇ ಒಂದು ಭಾಗ ಅಂದರೆ 1.50 ಕೋಟಿ ಜನರಿಗೆ ಸಂಬಂಧಿಸಿದ ಯೋಜನೆಯಾಗಿದೆ. ಸಿದ್ದರಾಮಯ್ಯ ಅವರೇ ಆರಂಭಿಸಿದ ಈ ಯೋಜನೆ ಅವರ ಕಾಲದಲ್ಲಿ ಉದ್ಘಾಟನೆ ಆಗುತ್ತಿರುವುದು ಅವರಿಗೆ ಸಿಕ್ಕಿರುವ ಭಾಗ್ಯ ಇದು ಎಂದರು.

ಎತ್ತಿನಹೊಳೆ ಯೋಜನೆ ಜಾರಿ ಆಗುವುದಿಲ್ಲ ಎಂದು ಈ ಭಾಗದ ಸಂಸದರು ಟೀಕೆ ಮಾಡಿದ್ದರು. ಇನ್ನು ತುಂಗಾಭದ್ರ ಅಣೆಕಟ್ಟಿನ 19ನೇ ಕ್ರೇಸ್ಟ್ ಗೇಟ್ ಹಾಳಾಗಿದಾಗಲೂ ನಮ್ಮ ಸರ್ಕಾರದ ವಿರುದ್ಧ ಸಾಕಷ್ಟು ಟೀಕೆ ಮಾಡಿದರು. ಆಗ ನಾನು ಒಂದು ಮಾತು ಹೇಳಿದೆ. ಅವರ ಟೀಕೆಗಳು ಸಾಯುತ್ತವೆ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ ಎಂದು. ಅದೇ ರೀತಿ ಅವರ ಟೀಕೆಗಳು ಸತ್ತಿವೆ, ನಮ್ಮ ಕೆಲಸಗಳು ಉಳಿದಿವೆ. ಇದಕ್ಕೆ 1.50 ಕೋಟಿ ಜನರ ಉಪಯೋಗಕ್ಕೆ ಕೊಟ್ಟಿರುವ ಕುಡಿಯುವ ನೀರಿನ ಯೋಜನೆಯೇ ಸಾಕ್ಷಿ ಎಂದರು.

ಸುಪ್ರೀಂ ಕೋರ್ಟ್ ಆದೇಶದಂತೆ ಈ ವರ್ಷ ತಮಿಳುನಾಡಿಗೆ 132 ಟಿಎಂಸಿ ನೀರು ಹರಿಸಬೇಕಾಗಿತ್ತು.ಆದರೆ ಈವರೆಗೂ 213 ಟಿಎಂಸಿ ನೀರನ್ನು ಹರಿಸಲಾಗಿದೆ.ನಮ್ಮ ನೀರು ನಮ್ಮ ಹಕ್ಕು ಎಂಬ ಉದ್ದೇಶದಿಂದ ಮೇಕೆದಾಟು ಪಾದಯಾತ್ರೆ ಮಾಡುದೆವು. ಬೆಂಗಳೂರಿನ ನೀರಿನ ಸಮಸ್ಯೆ ಬಗೆಹರಿಸಲು ನಮ್ಮ ಸರ್ಕಾರ ಜವಾಬ್ದಾರಿ ವಹಿಸಿಕೊಂಡಿದೆ ಎಂದು ತಿಳಿಸಿದರು.

ಸತ್ತರೆ ಇತಿಹಾಸ ನಿರ್ಮಾಣ.

ಬದಲಾವಣೆ ತರುವಾಗ ಪ್ರಾಣವನ್ನು ಒತ್ತೆ ಇಟ್ಟು ಹೋರಾಟ ಮಾಡಬೇಕು, ಬದುಕಿದರೆ ನಾಯಕ, ಸತ್ತರೆ ಇತಿಹಾಸ ಎಂದು ಅಂಬೇಡ್ಕರ್ ಅವರು ಹೇಳಿದ್ದಾರೆ.ನಾನು ನನ್ನ ಬದುಕಿನಲ್ಲಿ ಏನಾದರೂ ಸಾಧನೆ ಮಾಡಬೇಕು, ಬದಲಾವಣೆ ತರಬೇಕು ಎಂದು ರಾಜಕಾರಣಕ್ಕೆ ಬಂದಿದ್ದೇನೆ. ಜನ ಬದಲಾವಣೆಗೋಸ್ಕರ ನನ್ನನ್ನು ಹಾಗೂ ರಾಮಲಿಂಗಾರೆಡ್ಡಿ ಅವರನ್ನು ಸತತವಾಗಿ ಎಂಟು ಬಾರಿ ಆಯ್ಕೆ ಮಾಡಿದ್ದಾರೆ.

ಬೆಂಗಳೂರಿನ ಮನೆಗಳಲ್ಲಿ 365 ದಿನಗಳ ಕಾಲ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ನೇತೃತ್ವದಲ್ಲಿ ಗ್ಯಾಸ್ ಮೂಲಕ ವಿದ್ಯುತ್ ಉತ್ಪಾದನೆ ಯೋಜನೆಗೆ ಚಾಲನೆ ನೀಡಿದ್ದೇವೆ. ಆಮೂಲಕ ಬೆಂಗಳೂರಿನ ಜನರಿಗೆ ವಿದ್ಯುತ್, ನೀರಿನ ಪೂರೈಕೆ, ಒಳಚರಂಡಿ, ಕಸ ವಿಲೇವಾರಿಗೆ ಆದ್ಯತೆ ನೀಡುತ್ತಿದ್ದೇವೆ. ನಂತರ ಸಂಚಾರ ದಟ್ಟಣೆ ಬಗ್ಗೆ ಗಮನ ಹರಿಸಲಾಗುವುದು ಎಂದರು.

ಈ ಯೋಜನೆಗೆ ಜಪಾನ್ ನ ಜೈಕಾ ಸಂಸ್ಥೆಯವರು 4,500 ಕೋಟಿಯಷ್ಟು ಆರ್ಥಿಕ ನೆರವು ನೀಡಿದ್ದಾರೆ. ಆ ಸಂಸ್ಥೆಗೆ ರಾಜ್ಯದ ಜನತೆ ಪರವಾಗಿ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ನಾವು ಒಟ್ಟಾಗಿ ಕರ್ನಾಟಕ ರಾಜ್ಯವನ್ನು ಮತ್ತಷ್ಟು ಅಭಿವೃದ್ಧಿ ಮಾಡೋಣ.

ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಅರಣ್ಯ ಭೂಮಿ ಹಸ್ತಾಂತರ ಮಾಡಲಾಗುತ್ತಿದೆ. ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಮೇಕೆದಾಟು ಯೋಜನೆ ಭೂಮಿಪೂಜೆ ನಡೆಸುವ ಶಕ್ತಿಯನ್ನು ತಾಯಿ ಚಾಮುಂಡೇಶ್ವರಿ ನಮಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.

ನಮ್ಮಲ್ಲಿ ಕಾವೇರಿ ಆರತಿ ಮಾಡಬೇಕು ಎಂದು ಅದರ ರೂಪುರೇಷೆ ನಿರ್ಧರಿಸಲು ಸಚಿವ ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ತಂಡ ರಚಿಸಲಾಗಿದೆ.ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲವಿದೆ, ಎಲ್ಲಿ ಮನಸ್ಸಿದೆಯೋ ಅಲ್ಲಿ ಮಾರ್ಗವಿದೆ. ಹೀಗಾಗಿ ನಮ್ಮ ಸರ್ಕಾರ ಅನೇಕ ಕಾರ್ಯಕ್ರಮ ರೂಪಿಸಲಾಗುತ್ತಿದೆ. ನಾವು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ಯಾವ ಸರ್ಕಾರ ಕೂಡ ಇಂತಹ ಕಾರ್ಯಕ್ರಮ ರೂಪಿಸಿಲ್ಲ.

ಈ ಯೋಜನೆಗೆ ಪಕ್ಷಭೇದ ಮರೆತು ಎಲ್ಲಾ ನಾಯಕರು ಸಹಕಾರ ನೀಡಿದ್ದಾರೆ. ಅವರೆಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ.ಬೇಸಿಗೆ ಕಾಲದಲ್ಲಿ ಬೆಂಗಳೂರಿನ 7 ಸಾವಿರ ಕೊಳವೆಬಾವಿಗಳು ಬರಿದಾದವು. ಅಂತರ್ಜಲ ಕುಸಿಯಿತು. ಆದರೂ ಬೆಂಗಳೂರಿನ ಜನರಿಗೆ ಹೆಚ್ಚಿನ ಸಮಸ್ಯೆ ಆಗದಂತೆ ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದರು.

ಅಂಬೇಡ್ಕರ್ ಭವನ ನಿರ್ಮಾಣಕ್ಕೆ 5 ಕೋಟಿ.

ಮಂಡ್ಯ ಜಿಲ್ಲೆಯ ಕಟ್ಟಕಡೆಯ ಹಳ್ಳಿಗಳಿಗೂ ಕಾಲುವೆಗಳಲ್ಲಿ ನೀರು ಹರಿಸುವ ವ್ಯವಸ್ಥೆ ಕಲ್ಪಿಸಲು ನಾವು ಶ್ರಮಿಸುತ್ತೇವೆ. ಇನ್ನು ಸ್ಥಳೀಯ ಶಾಸಕರಾದ ನರೇಂದ್ರಸ್ವಾಮಿ ಅವರು ನೂತನವಾಗಿ ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. 5 ಕೋಟಿ ವೆಚ್ಚದಲ್ಲಿ ಈ ಭವನ ನಿರ್ಮಾಣ ಕಾರ್ಯ ಮಾಡಲಾಗುವುದು ಎಂದು ಹೇಳಿದರು.

ಈ ಯೋಜನೆಗೆ ಅನೇಕ ಅಧಿಕಾರಿಗಳು ಶ್ರಮಿಸಿದ್ದಾರೆ, ಇನ್ನು ಬೆಂಗಳೂರಿಗೆ ನೀರು ತೆಗೆದುಕೊಂಡು ಹೋಗಲು ಮಳವಳ್ಳಿ, ಕನಕಪುರ, ಬೆಂಗಳೂರು ದಕ್ಷಿಣ ಕ್ಷೇತ್ರಗಳ ಅನೇಕರು ತಮ್ಮ ಭೂಮಿ ತ್ಯಾಗ ಮಾಡಿದ್ದಾರೆ. ಆಮೂಲಕ ಹೃದಯ ಶ್ರೀಮಂತಿಕೆ ತೋರಿದ್ದಾರೆ.ನಾವು ಪರಿಶುದ್ಧವಾದ ಆಡಳಿತ ಮಾಡಿಕೊಂಡು ಬರುತ್ತಿದ್ದೇವೆ. ನಿಮ್ಮೆಲ್ಲರ ಪ್ರೀತಿ ವಿಶ್ವಾಸ ಅಗತ್ಯವಿದೆ ಎಂದರು.

ಮಾಧ್ಯಮ ಪ್ರತಿಕ್ರಿಯೆ: ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು;”ತಾಯಿ ಕಾವೇರಿಯನ್ನು ಬೆಂಗಳೂರು ನಗರಕ್ಕೆ ಹರಿಸಲು ಶುಭ ಗಳಿಗೆಯಲ್ಲಿ ಚಾಲನೆ ನೀಡಲಾಗಿದೆ. ಈ ಸಂದರ್ಭದಲ್ಲಿ ಶಾಸಕರುಗಳು, ಜಪಾನ್ ಸರ್ಕಾರದ ಪ್ರತಿನಿಧಿ, ಜೈಕಾ ಸಂಸ್ಥೆಯ ಪ್ರತಿನಿಧಿಗಳು ಬಂದಿದ್ದು, ಈ ಯೋಜನೆಗೆ ಸಹಕರಿಸಿದ ಸಂಸ್ಥೆಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ.

ಇಂದು ನಮ್ಮ ದೇಶದ ಸಪ್ತ ನದಿಗಳ ನೀರನ್ನು ಇಟ್ಟು ಪೂಜೆ ಮಾಡಿ, ದಕ್ಷಿಣ ಭಾರತದ ಗಂಗೆಯಾದ ಕಾವೇರಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಈ ಯೋಜನೆಯಿಂದ ಬೆಂಗಳೂರಿಗೆ ಹೆಚ್ಚುವರಿಯಾಗಿ 775 ಎಂಎಲ್ ಡಿ ನೀರನ್ನು ತೆಗೆದುಕೊಂಡು ಹೋಗಲಾಗುತ್ತಿದೆ. ಆಮೂಲಕ ಯಶವಂತಪುರ, ರಾಜರಾಜೇಶ್ವರಿ ನಗರ, ದಾಸರಹಳ್ಳಿ, ಮಹದೇವಪುರ, ಬ್ಯಾಟರಾಯನಪುರ, ಬೆಂಗಳೂರು ದಕ್ಷಿಣ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಗಳ ಸಿಎಂಸಿ ಪ್ರದೇಶಗಳಿಗೆ ಕುಡಿಯಲು ನೀರು ಒದಗಿಸಲಾಗುವುದು.

ಹಿಂದೆ 70 ಲಕ್ಷ ಇದ್ದ ಬೆಂಗಳೂರಿನ ಜನಸಂಖ್ಯೆ ಈಗ 1.50 ಕೋಟಿಗೆ ಏರಿಕೆಯಾಗಿದೆ. ಈ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಯೋಜನೆ ಜಾರಿ ಮಾಡಿದ್ದೇವೆ.ಮುಂದಿನ ದಿನಗಳಲ್ಲಿ ತಿಪ್ಪಗೊಂಡನಹಳ್ಳಿ ಜಲಾಶಯದ ನೀರನ್ನು ತೆಗೆದುಕೊಂಡು ಹೋಗಲು ಕಾರ್ಯಕ್ರಮ ರೂಪಿಸಲಾಗುತ್ತಿದೆ.

ಟೀಕೆ ಮಾಡುವವರು ಮಾಡಲಿ: ಬೆಂಗಳೂರಿನ ಮಳೆ ಬಗ್ಗೆ ಕೇಳಿದಾಗ, “ಇನ್ನು ಹೆಚ್ಚಿನ ಮಳೆ ಬೀಳಲಿ. ಯಾವುದೇ ಅವಾಂತರ ಇಲ್ಲ.ಎಲ್ಲೇ ನೀರು ನಿಂತರು ಕೇವಲ ಅರ್ಧ ಗಂಟೆಯಲ್ಲಿ ಹರಿದು ಹೋಗುವಂತೆ ನಾವು ರಿಪೇರಿ ಮಾಡುತ್ತೇವೆ.ಎಷ್ಟೇ ಮಳೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸುವ ಪೂರ್ವಸಿದ್ಧತೆ ಮಾಡಿಕೊಂಡಿದ್ದೇವೆ. ಯಾವುದೇ ಹಂತದಲ್ಲಿ ಜನರಿಗೆ ನೆರವು ನೀಡಲು ನಾವು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ.ಟೀಕೆ ಮಾಡುವವರು ಮಾಡಲಿ. ಕೊನೆಗೆ ಟೀಕೆಗಳು ಸಾಯುತ್ತವೆ, ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ” ಎಂದು ತಿಳಿಸಿದರು.

Tags: Cauvery 5th phase projectDCM D.K. Shivakumar.DCM DK ShivakumarMandyaquench the thirst of drinking waterWe do not bow down to critics; Our work is their answer:
Previous Post

ತೈಲ ಟ್ಯಾಂಕರ್ ಸ್ಫೋಟ:100 ಜನರು ದುರ್ಮರಣ;50ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ

Next Post

Instagram friends: ಇನ್‌‌ಸ್ಟಾ ಫ್ರೆಂಡ್‌ ಜೊತೆ ಸೇರಿ ಗಂಡನಿಗೆ ಡೆತ್‌‌ಪಾಸ್‌‌…

Related Posts

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
0

"ಜೆಡಿಎಸ್ ಅವರ ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ. ತುಂಗಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ ಒಂದೇ ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗಿದೆ. ಜೆಡಿಎಸ್ ಅವರಿಗೆ ಏನೂ ಮಾಡಲು...

Read moreDetails

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

November 19, 2025
ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

November 19, 2025
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
Next Post
Instagram friends: ಇನ್‌‌ಸ್ಟಾ ಫ್ರೆಂಡ್‌ ಜೊತೆ ಸೇರಿ ಗಂಡನಿಗೆ ಡೆತ್‌‌ಪಾಸ್‌‌…

Instagram friends: ಇನ್‌‌ಸ್ಟಾ ಫ್ರೆಂಡ್‌ ಜೊತೆ ಸೇರಿ ಗಂಡನಿಗೆ ಡೆತ್‌‌ಪಾಸ್‌‌...

Recent News

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
Top Story

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

by ಪ್ರತಿಧ್ವನಿ
November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ
Top Story

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

by ಪ್ರತಿಧ್ವನಿ
November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

November 19, 2025

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada