• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನುಡಿದಂತೆ ನಡೆದಿದ್ದೇವೆ, ಗ್ಯಾರಂಟಿಗಳ ಜಾರಿಗೆ ಬದ್ಧರಾಗಿದ್ದೇವೆ- ಸಚಿವ ಪ್ರಿಯಾಂಕ್ ಖರ್ಗೆ

Any Mind by Any Mind
June 11, 2023
in ಕರ್ನಾಟಕ
0
ನುಡಿದಂತೆ ನಡೆದಿದ್ದೇವೆ, ಗ್ಯಾರಂಟಿಗಳ ಜಾರಿಗೆ ಬದ್ಧರಾಗಿದ್ದೇವೆ- ಸಚಿವ ಪ್ರಿಯಾಂಕ್ ಖರ್ಗೆ
Share on WhatsAppShare on FacebookShare on Telegram

ಕಲಬುರಗಿ : ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದಂತೆ ಅಧಿಕಾರಕ್ಕೆ ಬಂದ ನಂತರ ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಸರ್ಕಾರಿ ಸಾರಿಗೆಯಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಯೋಜನೆಗೆ ಚಾಲನೆ ನೀಡುವ ಮೂಲಕ ನುಡಿದಂತೆ ನಡೆದಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.ಕಲಬುರಗಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಶಕ್ತಿ ಯೋಜನೆಗೆ ಚಾಲನೆ ನೀಡಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ADVERTISEMENT

ರಾಜ್ಯ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ಹಾಕಿಕೊಳ್ಳುತ್ತಿದೆ. ಮೊದಲ ಪ್ರಯತ್ನ ವಾಗಿ ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ರಾಜ್ಯದ 14.50 ಕೋಟಿ ಹಾಗೂ ಜಿಲ್ಲೆಯ 1.50 ಕೋಟಿ ಮಹಿಳೆಯರು ಈ ಯೋಜನೆಯ ಲಾಭ ಪಡೆಯಲಿದ್ದಾರೆ ಎಂದರು.

ಪಕ್ಷ ಅಧಿಕಾರಕ್ಕೆ ಬಂದ ಒಂದು ತಿಂಗಳ ಒಳಗಾಗಿ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲು ಮಾರ್ಗ ಸೂಚಿ ತಯಾರಿಸಲಾಗಿದ್ದು ಕನಿಷ್ಠ 50,000 ಕೋಟಿ ಹಣ ಬೇಕಾಗುತ್ತದೆ. ಇದರಿಂದ ಆರ್ಥಿಕ ಹೊರೆಯಾದರೂ ಕೂಡಾ ಅದನ್ನು ನಿಭಾಯಿಸುವ ಶಕ್ತಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ಅವರಿಗಿದ್ದು ಈಗಾಗಲೇ ಈ ಯೋಜನೆಗಳ ಜಾರಿಗೆ ಬೇಕಾಗುವ ಹಣಕಾಸು ಹೊಂದಾಣಿಕೆಗೆ ಪರ್ಯಾಯ ಮಾರ್ಗ ಕೂಡಾ ಕಂಡುಹಿಡಿಯಲಾಗಿದೆ ಎಂದರು.

ಐದು ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ರಾಜ್ಯದ ಜನರ ಆರ್ಥಿಕ ಸ್ಥಿರತೆ ನಿರ್ಮಾಣ ಮಾಡಲಾಗುವುದು ಎಂದು ಪ್ರತಿಪಾದಿಸಿದ ಸಚಿವರು ಪಕ್ಷದ ಪ್ರಣಾಳಿಕೆಗಳನ್ನು ಹಾಗೂ ವಿಶೇಷವಾಗಿ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ 10 ಅಂಶಗಳ ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು ಅವುಗಳನ್ನೂ ಕೂಡಾ ಜಾರಿಗೊಳಿಸಲಾಗುವುದು ಎಂದರು.

ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಪ್ರಜಾಧ್ವನಿ ಯಾತ್ರೆಯ ಸಂದರ್ಭದಲ್ಲಿ ನಾಡಿನ ಜನರ ಸಂಕಷ್ಟಗಳನ್ನು ಅರಿತು ಅವರ ಆರ್ಥಿಕ ಸಬಲತೆಗೆ ಬೇಕಾಗುವ ಕಾರ್ಯಕ್ರಮಗಳನ್ನು ರೂಪಿಸಲು ನಿರ್ಧಾರ ಕೈಗೊಳ್ಳಲಾಯಿತು. ಅದರ ಪರಿಣಾಮವಾಗಿ ಪಕ್ಷ ಐದು ಪ್ರಮುಖ ಗ್ಯಾರಂಟಿಗಳನ್ನು ಘೋಷಿಸಲಾಯಿತು. ಈಗ ಅವುಗಳನ್ನು ಜಾರಿಗೆ ತರುವ ಬದ್ಧತೆ ಸರ್ಕಾರಕ್ಕಿದ್ದು ವಿರೋಧ ಪಕ್ಷ ಬಿಜೆಪಿ ಈ ಕುರಿತು ಅನಗತ್ಯ ಗೊಂದಲ ಸೃಷ್ಠಿಸುವ ಅಗತ್ಯವಿಲ್ಲ ಎಂದರು.

ಈ ಸಂದರ್ಭದಲ್ಲಿ ಶಾಸಕರಾದ ಅಲ್ಲಮಪ್ರಭು ಪಾಟೀಲ, ಕನೀಜ್ ಫಾತೀಮಾ, ಜಿಲ್ಲಾಧಿಕಾರಿ ಯಶವಂತ ಗುರುಕರ್, ಜಿಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ ಗಿರೀಶ್ ಬದೋಲೆ, ಕೆಕೆಆರ್ ಡಿಬಿ ಕಾರ್ಯದರ್ಶಿ ಅನಿವೃದ್ಧಿ ಶ್ರವಣ್, ನಗರ ಪೊಲೀಸ್ ಆಯುಕ್ತ ಚೇತನ್ ಆರ್, ಮಹಾನಗರ ಪಾಲಿಕೆ ಕಮೀಷನರ್ ಭುವನೇಶ ಪಾಟೀಲ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಂತರ ಸಚಿವರು ಐದು ಸರ್ಕಾರಿ ಸಾರಿಗೆ ಬಸ್ ಗಳಲ್ಲಿದ್ದ ಮಹಿಳಾ ಪ್ರಯಾಣಿಕರಿಗೆ ಟಿಕೇಟ್ ನೀಡುವ ಮೂಲಕ ಯೋಜನೆಗೆ ಚಾಲನೆ ನೀಡಿದರು.

Tags: BJPguarantee cardKalaburagiPriyank KhargeShakti Yojana
Previous Post

ಸಾಮಾಜಿಕ ತಳಹದಿಯೂ ಭ್ರಷ್ಟಾಚಾರದ ಬೇರುಗಳೂ

Next Post

ಶಕ್ತಿ ಯೋಜನೆ ಕಾರ್ಯಾರಂಭ ಕಾರ್ಯಕ್ರಮದಲ್ಲಿ ಸಚಿವ ಕೆ.ಜೆ ಜಾರ್ಜ್ ಭಾಗಿ

Related Posts

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
0

ಅಂದು ಮೈಸೂರಿನ ಮೂಡಾ ( MUDA ) ಭೂ ಹಗರಣಕ್ಕೆ ಸಿದ್ದರಾಮಯ್ಯ ಗೆ ಸಂಕಷ್ಟ ತಂದಿದ್ದ ಸ್ನೇಹಮಹಿ ಕೃಷ್ಣ ಇದೀಗ ಧರ್ಮಸ್ಥಳ ಗ್ರಾಮದ ಪ್ರಕರಣಕ್ಕೆ ಮತ್ತೆ ಎಂಟ್ರಿ...

Read moreDetails

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

August 21, 2025
Next Post
ಶಕ್ತಿ ಯೋಜನೆ ಕಾರ್ಯಾರಂಭ ಕಾರ್ಯಕ್ರಮದಲ್ಲಿ ಸಚಿವ ಕೆ.ಜೆ ಜಾರ್ಜ್ ಭಾಗಿ

ಶಕ್ತಿ ಯೋಜನೆ ಕಾರ್ಯಾರಂಭ ಕಾರ್ಯಕ್ರಮದಲ್ಲಿ ಸಚಿವ ಕೆ.ಜೆ ಜಾರ್ಜ್ ಭಾಗಿ

Please login to join discussion

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!