• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಮ್ಮ ಉಸಿರಿಗಾಗಿ ಪರಿಸರ ಸಂರಕ್ಷಿಸಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
June 6, 2025
in Top Story, ಕರ್ನಾಟಕ, ರಾಜಕೀಯ
0
ನಮ್ಮ ಉಸಿರಿಗಾಗಿ ಪರಿಸರ ಸಂರಕ್ಷಿಸಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

“ನಾವು ಪರಿಸರವನ್ನು ಕೇವಲ ಹಸಿರಿಗಾಗಿ ಮಾತ್ರವಲ್ಲ, ನಮ್ಮ ಉಸಿರಿಗಾಗಿ ಸಂರಕ್ಷಣೆ ಮಾಡಿಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕರೆ ನೀಡಿದರು.

ADVERTISEMENT

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಜವಹರಲಾಲ್ ನೆಹರು ತಾರಾಲಯದಲ್ಲಿ ಶುಕ್ರವಾರ ಏರ್ಪಡಿಸಿದ್ದ “ವಿಶ್ವ ಪರಿಸರ ದಿನಾಚರಣೆ” ಕಾರ್ಯಕ್ರಮವನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಉದ್ಘಾಟಿಸಿ ಮಾತನಾಡಿದರು.

“ಪ್ರಕೃತಿ ಯಾರ ಆಸ್ತಿಯಲ್ಲ. ಮಾನವ ಸೇರಿದಂತೆ ಎಲ್ಲಾ ಪ್ರಾಣಿಗಳು ಬದುಕುತ್ತಿರುವುದು ಪ್ರಕೃತಿಯಿಂದ. ನೀರು, ಗಾಳಿ, ಮರ, ಪರಿಸರಕ್ಕೆ ಜಾತಿ, ಧರ್ಮವಿಲ್ಲ. ಹಿಂದೆ ಹಳ್ಳಿಗಳಲ್ಲಿ ಮನೆಯಪಕ್ಕ ಸಣ್ಣ ತೋಟವಾದರೂ ಮಾಡಿಕೊಳ್ಳುತ್ತಿದ್ದೆವು. ನಂತರ ಮನೆ ಕಾಂಪೌಂಡ್ ಒಳಗೆ ತೆಂಗು, ಮಾವು, ಹಲಸಿನ ಮರ ಹಾಕುತ್ತಿದ್ದೆವು. ನಗರ ಪ್ರದೇಶಗಳಲ್ಲಿ ಜಾಗದ ಕೊರತೆಯಿಂದ ವಿವಿಧ ಸಣ್ಣಪುಟ್ಟ ಗಿಡಗಳನ್ನು ಬೆಳೆಸುತ್ತಿದ್ದೇವೆ” ಎಂದರು.

Labour Minister Santhosh Lad: 35 ಲಕ್ಷಕ್ಕೂ ಅಧಿಕ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಿಗೆ ಸಿಹಿ ಸುದ್ದಿ..!

“ನಮ್ಮ ಮಕ್ಕಳು ನಮ್ಮ ನಿಜವಾದ ಆಸ್ತಿ. ಅವರಿಗಾಗಿ ಭವಿಷ್ಯ ರೂಪಿಸಬೇಕು ಎಂದು ಮಕ್ಕಳಿಂದಲೇ ಒಂದೊಂದು ಗಿಡ ನೆಡಿಸಿ ಅವರೇ ಅವುಗಳನ್ನು ಬೆಳೆಸುವಂತೆ ಮಾಡಬೇಕು ಎಂಬುದು ನಮ್ಮೆಲ್ಲರ ಆಸೆ. ಹೀಗಾಗಿ ನಾನು ಬೆಂಗಳೂರು ನಗರದ ಸಚಿವನಾದ ಬಳಿಕ ಈ ಕಾರ್ಯಕ್ರಮವನ್ನು ನಡೆಸಲು ಆದೇಶ ನೀಡಲಾಯಿತು. ಶಾಲೆಗಳೊಂದಿಗೆ ಒಪ್ಪಂದ ಮಾಡಿಕೊಂಡು ಪ್ರತಿ ಶಾಲೆ ಒಂದೊಂದು ಪ್ರದೇಶ ಆಯ್ಕೆ ಮಾಡಿಕೊಂಡು ಅಲ್ಲಿ ತಮ್ಮ ಶಾಲೆ ವಿದ್ಯಾರ್ಥಿಗಳಿಂದ ಗಿಡ ನೆಡಿಸಿ ಅದನ್ನು ಬೆಳೆಸಬೇಕು. ಆ ಗಿಡದ ಮೇಲೆ ಆ ಮಗುವಿನ ಹೆಸರು ಹಾಕಿಕೊಳ್ಳುವ ಅವಕಾಶ ನೀಡುವ ಕಾರ್ಯ ಆರಂಭಿಸಿದೆವು. ಈ ಕಾರ್ಯಕ್ರಮದ ಮೂಲಕ ಇಲ್ಲಿಯವರೆಗೂ 53 ಸಾವಿರ ಮಕ್ಕಳು ಗಿಡ ನೆಟ್ಟು ಅವುಗಳನ್ನು ಬೆಳೆಸುತ್ತಿದ್ದಾರೆ. ಈ ಪ್ರಕ್ರಿಯೆ ಹೀಗೆ ಮುಂದುವರಿಯಬೇಕು” ಎಂದು ಹೇಳಿದರು.

“ಇಂದು ಬೆಂಗಳೂರು ಹವಾಮಾನ ಕ್ರಿಯಾ ಕೋಶ (ಬೆಂಗಳೂರು ಕಾರ್ಯಯೋಜನೆ ಕ್ಲಬ್) ಆರಂಭಿಸಿದ್ದೇವೆ. ಈ ಕ್ಲಬ್ ನಲ್ಲಿ ಕನಿಷ್ಠ 10 ಜನ ಸದಸ್ಯರು ಇರಬೇಕು ಎಂದು ಪ್ರಸ್ತಾವನೆ ಬಂದಿತ್ತು. ಆದರೆ ನಾನು ಕನಿಷ್ಠ 25 ಸದಸ್ಯರು ಇರಬೇಕು ಎಂದು ತೀರ್ಮಾನ ಮಾಡಿದೆ. ಬೆಂಗಳೂರಿನಲ್ಲಿ ಸುಮಾರು 7 ಸಾವಿರ ಶಾಲೆಗಳಿವೆ. ಇಲ್ಲಿ ಆರಂಭಿಸಿದ ನಂತರ ಬೇರೆ ಪ್ರದೇಶಗಳಲ್ಲಿ ವಿಸ್ತರಿಸಬಹುದು. ಬೆಂಗಳೂರು ಗಾರ್ಡನ್ ಸಿಟಿ ಎಂಬ ಹೆಸರು ಪಡೆದಿದ್ದು, ಇದನ್ನು ಉಳಿಸಿ, ಬೆಳೆಸಿಕೊಂಡು ಹೋಗಬೇಕು. ಈ ಜವಾಬ್ದಾರಿಯನ್ನು ಮುಂದಿನ ಪೀಳಿಗೆಗೆ ನೀಡಬೇಕು ಎಂದು ಈ ಕಾರ್ಯಕ್ರಮ ರೂಪಿಸಲಾಗಿದೆ” ಎಂದರು..

“ನಾನು ಸರ್ಕಾರಿ ಶಾಲೆ ಕಾರ್ಯಕ್ರಮಕ್ಕೆ ಹೋಗಿದ್ದಾಗ ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು ಕಾರ್ಯಕ್ರಮ ನಡೆಸುತ್ತಿದ್ದರು. ಇದನ್ನು ನೋಡಿ ನನಗೆ ಅಸಮಾಧಾನವಾಯಿತು. ಹೀಗಾಗಿ ಅವರಿಗೆ ನಾನು ಒಂದು ಸೂಚನೆ ನೀಡಿದೆ. ಮುಂದೆ ಬೆಂಗಳೂರಿನಲ್ಲಿ ಶಾಲೆಯಲ್ಲಿ ಕಾರ್ಯಕ್ರಮ ಮಾಡಿದರೆ ಅವುಗಳನ್ನು ಶಾಲಾ ಮಕ್ಕಳೇ ನಡೆಸಬೇಕು ಎಂದು ಮಾರ್ಗದರ್ಶನ ನೀಡಿದೆ. ಈ ಕಾರ್ಯಕ್ರಮವನ್ನು ಮಕ್ಕಳೇ ನಡೆಸುತ್ತಿದ್ದಾರೆ. ಆಮೂಲಕ ಅವರಲ್ಲಿ ನಾಯಕತ್ವ ಗುಣಬೆಳೆಸಬೇಕು” ಎಂದು ಹೇಳಿದರು.

“ಇಂದು ನಾವು ಬ್ಲೂ, ಗ್ರೀನ್ ಪ್ರಶಸ್ತಿ ನೀಡಿದ್ದೇವೆ. ಮುಂದೆ ಇದಕ್ಕೆ ಹೆಚ್ಚು ಪ್ರೋತ್ಸಾಹ ನೀಡಿ ಹೆಚ್ಚು ಸ್ಪರ್ಧೆ ಏರ್ಪಡಲಿದೆ. ವಿವಿಧ ನಾಗರೀಕ ಸಂಘ ಸಂಸ್ಥೆಗಳು ಕೂಡ ಈ ವಿಚಾರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಇಂದು 175 ಅರ್ಜಿಗಳು ಬಂದಿವೆ. ಮುಂದೆ 500-1000 ಅರ್ಜಿ ಬರಬಹುದು. ಶಾಲೆಗಳಲ್ಲಿನ ಕ್ಲಬ್ ಗಳಿಗೆ ಅಗತ್ಯ ನೆರವು ನೀಡಲಾಗುವುದು. ಈ ಕ್ಲಬ್ ಗಳ ಕಾರ್ಯಾಚರಣೆ ಕುರಿತ ಮಾರ್ಗಸೂಚಿ ಪುಸ್ತಕವನ್ನು ಇಂದು ನಾವು ಬಿಡುಗಡೆ ಮಾಡಿದ್ದೇವೆ. ನಿಮ್ಮ ಜತೆ ಎಲ್ಲಾ ಸಂಸ್ಥೆಗಳು ಪರಿಸರ ಸಂರಕ್ಷಣೆಯಲ್ಲಿ ಕೆಲಸ ಮಾಡಲು ಇದನ್ನು ಮಾಡಿದ್ದೇವೆ” ಎಂದು ಮಾಹಿತಿ ನೀಡಿದರು.

“ಜೂ.5ರಂದು ಪರಿಸರ ದಿನವನ್ನು ಆಚರಿಸುತ್ತೇವೆ. ಯಾಕೋ ಏನೋ ಈ ಕಾರ್ಯಕ್ರಮವನ್ನು 6ರಂದು ನಡೆಸೋಣ ಎಂದು ಅಧಿಕಾರಿಗಳಿಗೆ ಹೇಳಿದ್ದೆ. ದುರ್ಘಟನೆ ಹಿನ್ನೆಲೆಯಲ್ಲಿ ಗುರುವಾರದಂದು ಸರ್ಕಾರದ ವತಿಯಿಂದ ಮಾಡಬೇಕಾಗಿದ್ದ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ. ನಮ್ಮ ಜನ ಸಂಭ್ರಮಾಚರಣೆ ಸಮಯದಲ್ಲಿ ಶೋಕ ಆಚರಿಸುವಂತಾಯಿತು. ಇದರಿಂದ ನಾವೆಲ್ಲರೂ ನೋವಿನಲ್ಲಿದ್ದು, ಈ ವಿಚಾರವಾಗಿ ಹೆಚ್ಚು ವ್ಯಾಖ್ಯಾನ ಮಾಡುವುದಿಲ್ಲ” ಎಂದು ತಿಳಿಸಿದರು.

#watch Ramesh Babu on hdk ಕುಮಾರಸ್ವಾಮಿ ನಿನ್ನ ಮಗ ಹೋಟೆಲ್ ನಲ್ಲಿ ಗಲಾಟೆ ಮಾಡಿದ್ದು ಯಾರು ಮರೆತಿಲ್ಲ#pratidhvani

ಕಾರ್ಯಕ್ರಮದ ನಂತರ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಬೆಂಗಳೂರು ಸ್ವಚ್ಛತೆಗೆ ರೂಪಿಸಿರುವ ಕಾರ್ಯಕ್ರಮದ ಬಗ್ಗೆ ಕೇಳಿದಾಗ, “ಬೆಂಗಳೂರನ್ನು ಸ್ವಚ್ಛ ಮಾಡಲು ಜಿಬಿಎ ವತಿಯಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಇದರಲ್ಲಿ ಸಾರ್ವಜನಿಕರು ಕಸ ಇರುವ ಸ್ಥಳಗಳನ್ನು ಫೋಟೋ, ವಿಡಿಯೋ ಮಾಡಿ ಆ ಸ್ಥಳದ ಲೊಕೇಶನ್ ಕಳುಹಿಸಿದರೆ ಪಾಲಿಕೆ ಅಧಿಕಾರಿಗಳು ಅವುಗಳನ್ನು ಸ್ವಚ್ಛ ಮಾಡಲಿದ್ದಾರೆ. ಪಾಲಿಕೆ ಪೌರಕಾರ್ಮಿಕರನ್ನು ಖಾಯಂಗೊಳಿಸಿದ್ದು, ಅವರು ಕೂಡ ಈ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಈ ವಿಚಾರವಾಗಿ ಪಾಲಿಕೆ ಆಯುಕ್ತರಿಗೆ ಮಾರ್ಗದರ್ಶನ ನೀಡಿದ್ದೇನೆ” ಎಂದು ತಿಳಿಸಿದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಕಲಿ ಮತ್ತು ಅನರ್ಹ ಕಾರ್ಮಿಕರಿಗೆ ಕಾರ್ಡ್‌ಗಳ ರದ್ದತಿ: ಸಚಿವ ಸಂತೋಷ್‌ ಲಾಡ್‌

Next Post

ಬೇಕಾದದ್ದು‌ ಪೋಸ್ಟ್ ಮಾ… ಅಲ್ಲ ಪ್ರಾಗ್ನೋಸಿಸ್..!!

Related Posts

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ
Top Story

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

by ಪ್ರತಿಧ್ವನಿ
April 30, 2026
0

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ ದುರಂತದ ಹಿನ್ನೆಲೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ ಅವರು ಗುರುವಾರ ಆಸ್ಪತ್ರೆಗೆ ಭೇಟಿ...

Read moreDetails
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
Next Post

ಬೇಕಾದದ್ದು‌ ಪೋಸ್ಟ್ ಮಾ... ಅಲ್ಲ ಪ್ರಾಗ್ನೋಸಿಸ್..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada