• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜನಾರ್ದನ ರೆಡ್ಡಿ ಡ್ರಾಮಾ ಮಾಸ್ಟರ್, ನಾವು ಭರತ್ ರೆಡ್ಡಿ ಬೆನ್ನಿಗೆ ನಿಲ್ಲುತ್ತೇವೆ-ಡಿ.ಕೆ ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
January 3, 2026
in Top Story, ಕರ್ನಾಟಕ, ರಾಜಕೀಯ
0
ಜನಾರ್ದನ ರೆಡ್ಡಿ ಡ್ರಾಮಾ ಮಾಸ್ಟರ್, ನಾವು ಭರತ್ ರೆಡ್ಡಿ ಬೆನ್ನಿಗೆ ನಿಲ್ಲುತ್ತೇವೆ-ಡಿ.ಕೆ ಶಿವಕುಮಾರ್
Share on WhatsAppShare on FacebookShare on Telegram

ಬೆಂಗಳೂರು: ಜನಾರ್ದನ ರೆಡ್ಡಿ ಬಳ್ಳಾರಿಗೆ ಕಾಲಿಡೋವರೆಗೂ ಒಂದೇ ಒಂದು ಗಲಾಟೆ ಇರಲಿಲ್ಲ. ಸಣ್ಣ ಅಹಿತಕರ ಘಟನೆ ಆಗಿರಲಿಲ್ಲ. ಸಣ್ಣ ಎಫ್ಐಆರ್ ಇರಲಿಲ್ಲ. ಅವರು ಬಂದಮೇಲೆ ಗಲಭೆ ಆಗಿದೆ. ಹೀಗಾಗಿ ಅವರಿಗೆ ಮಾತನಾಡುವ ಹಕ್ಕಿಲ್ಲ. ಪಕ್ಷ ನಮ್ಮ ಶಾಸಕ ಭರತ್ ರೆಡ್ಡಿ ಬೆನ್ನಿಗೆ ನಿಲ್ಲಲಿದೆ. ನಾವು ನಮ್ಮ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ಇದಕ್ಕೆ ಕಾರಣ ಯಾರು ಎಂಬುದು ತನಿಖೆಯಿಂದ ಹೊರಬರಲಿದ್ದು, ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ADVERTISEMENT
DkShivakumar on Central Govt: ಕೇಂದ್ರ ಸರ್ಕಾರಕ್ಕೆ ಓಪನ್ ಚಾಲೆಂಜ್ ಹಾಕಿದ DCM ಡಿಕೆ #pratidhvani

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಬಾರಿಗೆ ಬಳ್ಳಾರಿಯಲ್ಲಿ ನಮ್ಮ ಸರ್ಕಾರ ವಾಲ್ಮೀಕಿ ಮಹರ್ಷಿಯವರ ಪುತ್ಥಳಿ ನಿರ್ಮಿಸುತ್ತಿದೆ. ನಮ್ಮ ಶಾಸಕರು ಅದರ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ನಗರದ ಎಲ್ಲೆಡೆ ಅದರ ಪೋಸ್ಟರ್ ಗಳನ್ನು ಹಾಕಿದ್ದಾರೆ. ಅದರಲ್ಲಿ ತಪ್ಪೇನಿದೆ? ನಮ್ಮ ಮನೆ ಮುಂದೆಯೂ ಬಿಜೆಪಿಯವರು ಪೋಸ್ಟರ್ ಹಾಕುತ್ತಿರುತ್ತಾರೆ. ಅದನ್ನು ನಾನು ಬೇಡ ಎನ್ನಲು ಸಾಧ್ಯವೇ? ಈ ಪೋಸ್ಟರ್ ಹಾಕುವುದರಿಂದ ಬಿಜೆಪಿಯವರಿಗೆ ಆಗಿರುವ ತೊಂದರೆ ಆದರೂ ಏನು? ಅವರು ಸರ್ಕಾರಿ ಜಾಗದಲ್ಲಿ ಹಾಕಿದ್ದಾರೆ? ಇದರಲ್ಲಿ ರೆಡ್ಡಿ ಜಗಳಕ್ಕೆ ಬರುವ ಅಗತ್ಯವೇನಿತ್ತು. ನಾವು ನಮ್ಮ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ಇದಕ್ಕೆ ಕಾರಣ ಬಿಜೆಪಿಯವರು. ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಈ ಬಗ್ಗೆ ಸಿಎಂ, ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳು ಮಾತನಾಡಿದ್ದಾರೆ. ಪೊಲೀಸರ ತನಿಖೆಯಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Siddaramaiah on RSS: ನರೇಗಾ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಸಿಎಂ ಸಿದ್ದರಾಮಯ್ಯ ವಾಗ್ದಾಳಿ #pratidhvani

ಪಕ್ಷದ ವತಿಯಿಂದ ಈ ಘಟನೆ ಬಗ್ಗೆ ಅಧ್ಯಯನ ನಡೆಸಲು ಹೆಚ್.ಎಂ. ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ನಿಯೋಗ ಕಳುಹಿಸಿದ್ದೇವೆ. ಬಿಜೆಪಿಯವರಿಗೆ ಬಳ್ಳಾರಿಯಲ್ಲಿ ನಮ್ಮ ಪಕ್ಷದ ಗೆಲುವು ಅರಗಿಸಿಕೊಳ್ಳಲು ಆಗುತ್ತಿಲ್ಲ. ಸೋತ ನಂತರ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಅವರು ತಬ್ಬಾಡುತ್ತಿದ್ದಾರೆ. ಅವರ ನಡುವೆ ಏನೇನೂ, ಎಷ್ಟಿದೆ ಎಂಬುದು ಗೊತ್ತಿದೆ. ಮತ್ತೆ ಬಳ್ಳಾರಿಯಲ್ಲಿ ತಮ್ಮ ರಿಪಬ್ಲಿಕ್ ತರಲು ಪ್ರಯತ್ನಿಸುತ್ತಿದ್ದಾರೆ. ನಾವು ಅದಕ್ಕೆ ಅವಕಾಶ ನೀಡುವುದಿಲ್ಲ. ನಮ್ಮ ಕಾರ್ಯಕರ್ತರಿಗೆ ನಮ್ಮ ಸಿಎಂ ಈಗಾಗಲೇ ನಿರ್ದೇಶನ ನೀಡಿದ್ದಾರೆ. ಜನಾರ್ದನ ರೆಡ್ಡಿ ಅವರು ಅಲ್ಲಿಗೆ ಬರುವವರೆಗೂ ಅಲ್ಲಿ ಒಂದೇ ಒಂದು ಗಲಾಟೆ ನಡೆದಿರಲಿಲ್ಲ. ಇನ್ನು ಈ ಪ್ರಕರಣದ ಬೆನ್ನಲ್ಲೇ ಎಲ್ಲಾ ಖಾಸಗಿ ಗನ್ ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಗನ್ ವಿತರಣೆ ವಿಚಾರದಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳನ್ನು ಸಿದ್ಧಪಡಿಸಿ, ನಿಯಮಾವಳಿ ರೂಪಿಸುತ್ತೇವೆ. ಎಂದು ಹೇಳಿದರು.

HD Devegowda On Stone Pelting At Janardhan Reddy House | ಗೊಂದಲ ಇದೆ, ತನಿಖೆಯಾಗಲಿ  #pratidhvani

ಬಳ್ಳಾರಿಯಲ್ಲಿ ಶಾಂತಿ, ನೆಮ್ಮದಿ ನೆಲೆಸುವುದು ಮುಖ್ಯ

ಎಸ್ಪಿ ಸೇರಿದಂತೆ ಅಧಿಕಾರಿಗಳ ವರ್ಗಾವಣೆ ಬಗ್ಗೆ ಮಾತನಾಡಿದ ಅವರು, ನನಗೆ ಈ ಘಟನೆ ತಿಳಿದ ತಕ್ಷಣೆ ಎಸ್ಪಿ ಜೊತೆ ಮಾತನಾಡಿದ್ದೇನೆ. ಎಸ್ಪಿ ಯಾವ ಪರಿಸ್ಥಿತಿಯಲ್ಲಿ ಮಾತನಾಡಿದರು ಎಂಬುದು ನನ್ನ ಅನುಭವಕ್ಕೆ ಬಂದಿದೆ. ಅವರು ಏನು ಉತ್ತರ ನೀಡಿದ್ದಾರೆ ಎಂಬುದು ಗೊತ್ತಿದೆ. ಈ ಹಿಂದೆ ಇದ್ದ ಎಸ್ಪಿ, ಐಜಿ ಮತ್ತು ಶಾಸಕರ ಜೊತೆಗೂ ಮಾತನಾಡಿದ್ದೇನೆ. ಬೇರೆ ನಾಯಕರ ಜತೆಗೂ ಮಾತನಾಡಿದ್ದೇನೆ. ಶ್ರೀರಾಮುಲು ಕೂಡ ನನಗೆ ಕರೆ ಮಾಡಿ ಈ ಘಟನೆ ಬಗ್ಗೆ ಮಾಹಿತಿ ನೀಡಿದ್ದರು. ನಾನು ತಕ್ಷಣವೇ ಪೊಲೀಸರಿಗೆ ಎಚ್ಚರಿಸಿದ್ದೇನೆ. ಇಲ್ಲಿ ರಾಜಕೀಯ ಮುಖ್ಯವಲ್ಲ. ಶಾಂತಿ ನೆಲೆಸುವುದು ಬಹಳ ಮುಖ್ಯ. ಬಳ್ಳಾರಿಯ ಜನ ನೆಮ್ಮದಿಯ ವಾತಾವರಣ ನಿರ್ಮಾಣವಾಗುತ್ತಿದೆ ಎಂದುಕೊಂಡಿದ್ದರು. ನಮಗೆ ಅದು ಮುಖ್ಯ. ಪಕ್ಷದ ಅಧ್ಯಕ್ಷನಾಗಿ ನನಗೆ ನನ್ನದೇ ಆದ ಜವಾಬ್ದಾರಿ ಇದೆ ಎಂದು ತಿಳಿಸಿದರು.

Ballari Violence Case: ಕಾರ್ಯಕರ್ತನಿಗಾಗಿ ಮಿಡಿದ CM, ನಾರಾ ವಿರುದ್ಧ ಸಿಡಿದ BJP.. | Ballari | Siddaramaiah

ನನ್ನ ಹತ್ಯೆಗೆ ಸಂಚು ರೂಪಿಸಿದ್ದರು ಎನ್ನುವ ಜನಾರ್ದನ ರೆಡ್ಡಿ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಅವರು ಡ್ರಾಮಾ ಮಾಸ್ಟರ್. ಅವರು ಮೊದಲೇ ಸಿನಿಮಾ ನಿರ್ಮಾಪಕರಲ್ಲವೇ? ಡ್ರಾಮಾ ಮಾಡುತ್ತಾರೆ. ಕೋಟೆ ನಿರ್ಮಿಸಿಕೊಂಡು ನೂರು ಜನ ಭದ್ರತಾ ಸಿಬ್ಬಂದಿ ಹೊಂದಿರುವವರನ್ನು ಯಾರು ಹತ್ಯೆ ಮಾಡುತ್ತಾರೆ? ಬದಲಿಗೆ ಜನರಿಗೆ ಬೇರೆಯದೇ ರೀತಿಯ ಭಯವಿದೆ. ಜನಾರ್ಧನ ರೆಡ್ಡಿ ಅವರ ಕುಟುಂಬದವರಿಗೆ ಸೋಲು ಅರಗಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕೆ ಈ ರೀತಿ ಆರೋಪ ಮಾಡುತ್ತಿದ್ದಾರೆ. ಯಾರ ಇತಿಹಾಸ ಏನಿದೆ ಎಂಬುದನ್ನು ನೀವೇ ಅರ್ಥ ಮಾಡಿಕೊಳ್ಳಬೇಕು ಎಂದು ತಿರುಗೇಟು ನೀಡಿದರು.

Tags: ballariBallari ConfilctBJPcongressDK ShivakumarNara Bharath ReddyPolitics
Previous Post

GRAAM ಸಮೀಕ್ಷಾ ವರದಿ: ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಲಹರ್ ಸಿಂಗ್ ಸಿರೋಯಾ ಸಾಲು ಸಾಲು ಪ್ರಶ್ನೆ

Next Post

ಬೈಯ್ಯಪ್ಪನಹಳ್ಳಿ ಎನ್.ಜಿ.ಇ.ಎಫ್. ಜಾಗದಲ್ಲಿ 65 ಎಕರೆ ವೃಕ್ಷೋದ್ಯಾನ: ಎಂ ಬಿ ಪಾಟೀಲ

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
Next Post
ಬೈಯ್ಯಪ್ಪನಹಳ್ಳಿ ಎನ್.ಜಿ.ಇ.ಎಫ್. ಜಾಗದಲ್ಲಿ 65 ಎಕರೆ ವೃಕ್ಷೋದ್ಯಾನ: ಎಂ ಬಿ ಪಾಟೀಲ

ಬೈಯ್ಯಪ್ಪನಹಳ್ಳಿ ಎನ್.ಜಿ.ಇ.ಎಫ್. ಜಾಗದಲ್ಲಿ 65 ಎಕರೆ ವೃಕ್ಷೋದ್ಯಾನ: ಎಂ ಬಿ ಪಾಟೀಲ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada