ಎಸಿಬಿ ರದ್ದುಗೊಳಿಸಿರುವ ಹೈಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಎಸಿಬಿ ರದ್ದುಗೊಳಿಸುವ ಆದೇಶ ಪ್ರಶ್ನಿಸಿ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಮೇಲ್ಮನವಿ ಕುರಿತ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದರು.
‘ಈ ಮೇಲ್ಮನವಿಗೂ, ಸರ್ಕಾರಕ್ಕೂ ಸಂಬಂಧ ಇಲ್ಲ. ಎಸಿಬಿ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟ. ಲೋಕಾಯುಕ್ತ ಬಲಪಡಿಸುವ ಅಂಶ ಬಿಜೆಪಿ ಪ್ರಣಾಳಿಕೆಯಲ್ಲಿಯೂ ಇದೆ. ನಾವು ಅದೇ ನಿಲುವಿಗೆ ಬದ್ಧರಾಗಿದ್ದೇವೆ’ ಎಂದು ಹೇಳಿದರು.
ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದು ಯಾರು?
ಭ್ರಷ್ಟಾಚಾರ ನಿಗ್ರಹ ದಳವನ್ನು ಕರ್ನಾಟಕ ಹೈಕೋರ್ಟ್ ರದ್ದು ಮಾಡಿರುವುದನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಕನಕರಾಜು ಎಂಬುವರು ಮೇಲ್ಮನವಿ ಸಲ್ಲಿಸಿದ್ದು, ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ, ಸಿ.ಟಿ.ರವಿಕುಮಾರ್ ಅವರನ್ನೊಳಗೊಂಡ ಪೀಠವು ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದೆ.