ರಾಜ್ಯದಲ್ಲಿ ಜಾತಿ ಜನಗಣತಿ ವರದಿ (Caste census report) ಜಾರಿಗೆ ತರುವ ವಿಚಾರವಾಗಿ ಪ್ರಬಲ ಸಮುದಾಯಗಳು ವಿರೋಧ ವ್ಯಕ್ತಪಡಿಸುತ್ತಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಪರಿಷತ್ ಸದಸ್ಯ, ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ (BK Hariprasad) ಪ್ರತಿಕ್ರಿಯಿಸಿದ್ದಾರೆ.

ಜಾತಿ ಜನಗಣತಿ ವರದಿ ಜಾರಿಗೆ ತರುವ ವಿಚಾರ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿತ್ತು.ಅದೇ ಕಾರಣಕ್ಕೆ ಜನರು ನಮಗೆ ಆಶೀರ್ವಾದ ಮಾಡಿದ್ದಾರೆ.ನಮ್ಮ ಪಕ್ಷಕ್ಕೆ ೧೩೭ ಶಾಸಕರನ್ನ ಜನರು ಆರಿಸಿದ್ದಾರೆ ಎಂದು ಹರಿಪ್ರಸಾದ್ ಹೇಳಿದ್ದಾರೆ.
ಹೀಗಾಗಿ ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯನವರು (Cm siddaramaiah) ಮೊದಲ ಹೆಜ್ಜೆ ಇಟ್ಟಿದ್ದಾರೆ.ಇದಕ್ಕೆ ಅವರನ್ನ ನಾನು ಅಭಿನಂದಿಸಿತ್ತೇನೆ.ಈ ಮೊದಲೇ ಜಾತಿ ಜನಗಣತಿ ಮಂಡನೆಯಾಗಬೇಕಿತ್ತು. ಆದರೂ ಈಗ ಸಂಪುಟ ಸಭೆಯಲ್ಲಿ ಮಂಡನೆಯಾಗಿರುವುದು ಸ್ವಾಗತಾರ್ಹ ಅಂತ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.