• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದ ಜನರ ಹಿತ ಕಾಯಲು ಸುಪ್ರೀಂ ಕೋರ್ಟಿಗೆ ಹೋಗುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
September 18, 2023
in Top Story, ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
I Don’t Believe in Exit Polls : ನನಗೆ ಎಕ್ಸಿಟ್ ಪೋಲ್ ಬಗ್ಗೆ ನಂಬಿಕೆ ಇಲ್ಲ; ನನ್ನ ಪ್ರಕಾರ  141 ಸ್ಥಾನ ಗೆಲ್ಲುತ್ತೇವೆ! : ಡಿ.ಕೆ.ಶಿವಕುಮಾರ್
Share on WhatsAppShare on FacebookShare on Telegram

“ನಾವು ನಮ್ಮ ಜನರನ್ನು ಕಾಪಾಡಲೇ ಬೇಕು. ಹೀಗಾಗಿ ಕಾವೇರಿ ನೀರಿನ ವಿಚಾರವಾಗಿ ಸುಪ್ರೀಂ ಕೋರ್ಟಿಗೆ ಹೋಗುತ್ತೇವೆ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ADVERTISEMENT

ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು “ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಇಂದು (ಸೋಮವಾರ) ನಡೆಯಲಿದ್ದು, ಅಲ್ಲಿ ನಮ್ಮ ವಾದ ಮಂಡಿಸುತ್ತೇವೆ. ಮಳೆಯಿಲ್ಲದೆ ತುಂಬಾ ಸಂಕಷ್ಟದಲ್ಲಿ ಇದ್ದೇವೆ ಎಂದು ಮನವರಿಕೆ ಮಾಡುತ್ತೇವೆ. ರಾಜ್ಯಕ್ಕೆ ಭೇಟಿ ನೀಡಿ ಪರಿಸ್ಥಿತಿ ವೀಕ್ಷಣೆ ಮಾಡಬೇಕು ಎಂದು ಸುಪ್ರೀಂ ಕೋರ್ಟಿನಲ್ಲೂ ಮನವಿ ಮಾಡುತ್ತೇವೆ” ಎಂದು ತಿಳಿಸಿದರು. ಉಳಿದಂತೆ ಅವರು ಹೇಳಿದ್ದಿಷ್ಟು.

“ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಭೇಟಿಯಾಗಿ ಈಗಾಗಲೇ ವಾಸ್ತವ ಸ್ಥಿತಿಯನ್ನು ವಿವರಿಸಿದ್ದೇವೆ. ಮುಖ್ಯಮಂತ್ರಿಗಳು ಸರ್ಕಾರದ ಪರವಾಗಿ ಬರೆದ ಪತ್ರವನ್ನು ತಲುಪಿಸಿದ್ದೇವೆ. ನೀವು ಶೀಘ್ರ ಮಧ್ಯಸ್ಥಿಕೆ ವಹಿಸಲೇಬೇಕು ಎಂದು ಮನವಿ ಮಾಡಿದ್ದೇನೆ.”

ಸಂಸತ್ ಅಧಿವೇಶನ ನಡೆಯುತ್ತಿದ್ದು, ರಾಜ್ಯದ ಸಂಸದರನ್ನು ಭೇಟಿ ಮಾಡುವ ಆಲೋಚನೆ ಇದೆ. ಸರ್ವಪಕ್ಷ ಸಭೆಗೆ ಪ್ರಧಾನಿಗಳು ಸಮಯ ಕೊಟ್ಟಿಲ್ಲ. ತಮಿಳುನಾಡಿನವರು ಅವರದ್ದೇ ಆದ ವಾದಗಳನ್ನು ಮಂಡಿಸುತ್ತಿದ್ದಾರೆ‌.”

ಮುಖ್ಯಮಂತ್ರಿಗಳು ಉತ್ತರಿಸುತ್ತಾರೆ

ಕೆ.ಎನ್.ರಾಜಣ್ಣ ಅವರು ಮೂರು ಡಿಸಿಎಂಗಳು ಅವಶ್ಯಕತೆ ಇದೆ ಎನ್ನುವ ಮಾತಿಗೆ “ನನ್ನನ್ನು ಈ ಹುದ್ದೆಗೆ ನೇಮಕ‌ ಮಾಡಿದ್ದು ಮುಖ್ಯಮಂತ್ರಿಗಳು. ಅವರೇ ಇದಕ್ಕೆ ಉತ್ತರ ನೀಡುತ್ತಾರೆ, ರಾಜಣ್ಣ ಅವರು ಏಕೆ ಈ ರೀತಿ ಹೇಳಿಕೆ ಕೊಟ್ಟರೊ ಗೊತ್ತಿಲ್ಲ. ನಾವೆಲ್ಲಾ ಮುಖ್ಯಮಂತ್ರಿಗಳ ಕೆಳಗೆ ಕೆಲಸ ಮಾಡುವವರು ಅವರನ್ನೇ ಕೇಳಬೇಕು.

ಕೆ.ಎನ್.ರಾಜಣ್ಣ ಅವರ ಬಳಿ ಮುಖ್ಯಮಂತ್ರಿಗಳು, ಹೈಕಮಾಂಡ್ ಉತ್ತರ ಕೇಳುತ್ತದೆ. ಹರಿಪ್ರಸಾದ್ ಅವರಿಗೆ ಹೈಕಮಾಂಡ್ ಪತ್ರ ಬರೆದಿದೆ. ನಾನು ಯಾರಿಗೆ ಉತ್ತರ ಕೊಡಬೇಕೋ ಅವರಿಗೆ ಮಾತ್ರ ಕೊಡುತ್ತೇನೆ. ನಾನು ಯಾರಿಗೆ ಉತ್ತರ ಕೇಳಬೇಕೋ ಅವರ ಬಳಿ ಕೇಳುತ್ತೇನೆ, ಯಾವುದೇ ಮುಲಾಜಿಲ್ಲ ನನಗೆ” ಎಂದು ಉತ್ತರಿಸಿದರು.

ಹೈಕಮಾಂಡ್ ಒಂದೇ ಡಿಸಿಎಂ ಎಂದು ಹೇಳಿದ ನಂತರವೂ ಈ ಬೆಳವಣಿಗೆ ಏಕೆ ಎನ್ನುವ ಪ್ರಶ್ನೆಗೆ “ನಾನು ಎರಡು ದಿನಗಳಿಂದ ಹೈದರಾಬಾದ್‌ನಲ್ಲಿ ಎಐಸಿಸಿ ಸಭೆಯಲ್ಲಿ ಇದ್ದೆ, ಮುಖ್ಯಮಂತ್ರಿಗಳು ಸೇರಿದಂತೆ ಅನೇಕ ನಾಯಕರು ಭಾಗವಹಿಸಿದ್ದರು, ಈಗ ತಿಳಿದುಕೊಂಡು ಹೇಳುವೆ” ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕಾರಣವಿಲ್ಲ

ಬಿ.ಕೆ.ಹರಿಪ್ರಸಾದ್ ಅವರ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಅವರ ಬಣ ಮೌನ ತಾಳಿದ ಕಾರಣ ಡಿಸಿಎಂ ವಿವಾದ ಎದ್ದಿದೆ ಎನ್ನುವ ಪ್ರಶ್ನೆಗೆ “ನಮ್ಮ ಪಕ್ಷದಲ್ಲಿ ಯಾವುದೇ ಬಣವಿಲ್ಲ, ನಿಮ್ಮ ಬಳಿ ಇರಬೇಕು”. ನಿಮಗೆ ತಲೆ ಕೆಟ್ಟಿರಬೇಕು, ನೀವೆ ಬಣ ಸೃಷ್ಟಿ ಮಾಡುತ್ತಿದ್ದೀರಿ. ನನ್ನ ರಾಜಕೀಯ ಜೀವನದಲ್ಲಿ ಇದುವರೆಗೂ ಯಾವುದೇ ಬಣಕ್ಕೆ ನಾನು ಬೆಂಬಲ ಕೊಟ್ಟಿಲ್ಲ. ನನಗೆ ಬಣದ ಅವಶ್ಯಕತೆ ಇಲ್ಲ. ಎಸ್.ಎಂ.ಕೃಷ್ಣ ಅವರು, ಬಂಗಾರಪ್ಪ ಅವರ ಕಾಲದಲ್ಲಿ ಬಣ ಮಾಡಬಹುದಿತ್ತು, ನನ್ನದು ಕಾಂಗ್ರೆಸ್ ಬಣ. ಬಣದ ಬಗ್ಗೆ ನನ್ನ ಬಳಿ ಪ್ರಶ್ನೆ ಕೇಳಬೇಡಿ” ಎಂದು ಸಿಡಿಮಿಡಿಗೊಂಡರು.

ಬೆಂಗಳೂರಿನ ಕಸಕ್ಕೆ ಪರ್ಯಾಯ ವ್ಯವಸ್ಥೆ

“ಬೆಂಗಳೂರಿನಲ್ಲಿ ಉತ್ಪಾದನೆಯಾಗುತ್ತಿರುವ ಕಸಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಕಾರಣಕ್ಕೆ, ಗ್ರೇಟರ್ ಹೈದರಾಬಾದ್ ಮಹಾನಗರ‌ಪಾಲಿಕೆ ನಿರ್ವಹಣೆ ಮಾಡುವ ಬೃಹತ್ ತ್ಯಾಜ್ಯ ನಿರ್ವಹಣಾ ಘಟಕ ವೀಕ್ಷಣೆಗೆ ಶನಿವಾರ (ಸೆ.16) ಭೇಟಿ ನೀಡಲಾಗಿತ್ತು.

ಬೆಂಗಳೂರಿನ ಹೊರ ವಲಯದಲ್ಲಿ ಕಸ ವಿಲೇವಾರಿ ಮಾಡಲಾಗುತ್ತಿತ್ತು, ಈಗ ಸುತ್ತಲಿನ ಜನವಸತಿ ಪ್ರದೇಶಗಳು ಬೆಳೆದು ಜನರು ಕಷ್ಟ ಪಡುತ್ತಿದ್ದಾರೆ. ಅಂತರ್ಜಲ, ಪರಿಸರ ಹಾಳಾಗುತ್ತಿದೆ, ಇದಕ್ಕೆ ಪರ್ಯಾಯ ವ್ಯವಸ್ಥೆ ಹೇಗೆ ಮಾಡಬಹುದು ಎಂದು ಅಧ್ಯಯನ ನಡೆಸಲು ಭೇಟಿ ನೀಡಲಾಯಿತು. ಕಸವನ್ನು ರಸ ಮಾಡುವ, ವಿದ್ಯುತ್ ತಯಾರಿಸುವ ತಂತ್ರಜ್ಞಾನ ಇದ್ದು ಅದನ್ನು ರಾಜ್ಯದಲ್ಲಿ ಹೇಗೆ ಅಭಿವೃದ್ಧಿ ಮಾಡಬಹುದು ಎಂದು ಯೋಜನೆ ರೂಪಿಸಲಾಗುವುದು.”

ಕರ್ನಾಟಕ ಮಾಡೆಲ್ ದೇಶಕ್ಕೆ ಮಾದರಿ

ಕರ್ನಾಟಕದಲ್ಲಿ ನಾವು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿ ಯಶಸ್ವಿಯಾಗಿದ್ದೇವೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಈಗ ದೇಶಕ್ಕೆ ಮಾದರಿಯಾಗಿದೆ‌, ತೆಲಂಗಾಣ ಸೇರಿದಂತೆ ಮುಂದಿನ ಚುನಾವಣೆಗಳಲ್ಲಿ ಕರ್ನಾಟಕ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ಮಾದರಿಯಾಗಲಿವೆ.

ಇದೇ ವೇಳೆ ರಾಜ್ಯದ ಜನರಿಗೆ ಹಬ್ಬದ ಶುಭಾಶಯ ತಿಳಿಸಿದ ಉಪಮುಖ್ಯಮಂತ್ರಿಗಳು “ರಾಜ್ಯಕ್ಕೆ ಒದಗಿ ಬಂದಿರುವ ಎಲ್ಲಾ ವಿಘ್ನ, ಸಂಕಷ್ಟಗಳು ನಿವಾರಣೆಯಾಗಲಿ” ಎಂದು ಪ್ರಾರ್ಥಿಸಿದರು.

Tags: CMSiddaramaiahCongress GuaranteeDKShivakumarKarnataka Politics
Previous Post

‘ನಿನ್ನ ಮಗಳಿಗೂ ಸೌಜನ್ಯಳಿಗಾದ ಗತಿಯೇ’ ಎಂದು ಬೆದರಿಕೆ ; ಮಹೇಶ್ ವಿಕ್ರಮ್ ಹೆಗಡೆ ವಿರುದ್ಧ ಎಫ್‌ಐಆರ್

Next Post

ಹಿಂದಿ ಹೇರಿಕೆ: ಫ್ಯಾಸಿಷ್ಟರ ಕುಟಿಲ ಹುನ್ನಾರ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post
ಹಿಂದಿ ಹೇರಿಕೆ: ಫ್ಯಾಸಿಷ್ಟರ ಕುಟಿಲ ಹುನ್ನಾರ

ಹಿಂದಿ ಹೇರಿಕೆ: ಫ್ಯಾಸಿಷ್ಟರ ಕುಟಿಲ ಹುನ್ನಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada