• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, October 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಕ್ಕಳನ್ನು, ರೈತರನ್ನು ಹೊಡೆಯುವ ಸರಕಾರವನ್ನು ಮತದಾನದ ಮೂಲಕವೇ ಕೆಳಗಿಳಿಸುತ್ತೇವೆ : ನಟ ಪ್ರಕಾಶ್ ರಾಜ್

ಪ್ರತಿಧ್ವನಿ by ಪ್ರತಿಧ್ವನಿ
October 19, 2026
in Top Story, ಕರ್ನಾಟಕ
0
We will topple the government that beats children and farmers—through the ballot box: Actor Prakash Raj
Share on WhatsAppShare on FacebookShare on Telegram

ಬೆಂಗಳೂರು: ರೈತರು ಹಾಗೂ ಮುಗ್ಧ ಮಕ್ಕಳ ಮೇಲೆ ದೌರ್ಜನ್ಯ ಎಸಗುವ ಜನವಿರೋಧಿ ಸರ್ಕಾರವನ್ನು ಸಂವಿಧಾನ ನೀಡಿರುವ ಮತದಾನದ ಹಕ್ಕಿನ (Vote) ಮೂಲಕವೇ ಕೆಳಗಿಳಿಸುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯ ಎಂದು  ನಟ ಪ್ರಕಾಶ್ ರಾಜ್ (Prakash Raj) ಎಚ್ಚರಿಸಿದ್ದಾರೆ.

ADVERTISEMENT

ನಗರದ ಪ್ರೆಸ್‌ಕ್ಲಬ್‌ನಲ್ಲಿ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಎಸ್‌ಐಆರ್ ವಿರುದ್ಧ ನಡೆಯುತ್ತಿರುವ ಹೋರಾಟಕ್ಕೆ ರೈತ ಮತ್ತು ದಲಿತ ಸಂಘಟನೆಗಳ ಒಕ್ಕೂಟ ಸಂಪೂರ್ಣ ಬೆಂಬಲ ಘೋಷಿಸಿದೆ ಎಂದು ತಿಳಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಹಕ್ಕುಗಳನ್ನು ದಮನ ಮಾಡುವ ಸರ್ಕಾರವನ್ನು ಕಿತ್ತೊಗೆಯುವ ಶಕ್ತಿ ಮತದಾರನ ಕೈಯಲ್ಲಿದೆ. ಶಾಂತಿಯುತವಾಗಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನ ಮತ್ತು ಮಹಾತ್ಮಾ ಗಾಂಧೀಜಿಯವರ ಸತ್ಯಾಗ್ರಹದ ಮಾರ್ಗದಲ್ಲೇ ಈ ಬದಲಾವಣೆ ತರಲಾಗುವುದು. ಎಷ್ಟೇ ಪೊಲೀಸ್ ಪಡೆ ಅಥವಾ ಸೇನೆಯನ್ನು ನಿಯೋಜಿಸಿದರೂ ಜನರ ನ್ಯಾಯಯುತ ಆಕ್ರೋಶವನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದರು.

ಎಸ್‌ಐಆರ್ ಪ್ರಕ್ರಿಯೆ, ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಪ್ರತಿಭಟನಾಕಾರರ ಮೇಲಿನ ಪೊಲೀಸ್ ಕ್ರಮಗಳನ್ನು ಖಂಡಿಸಿ, ದಿಲ್ಲಿಯಲ್ಲಿ ಶಾಂತಿಯುತ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗ ನಡೆಸಲಾಗಿದೆ. ಪತ್ರಕರ್ತರ ಮೇಲೆ ಹಲ್ಲೆ ಮಾಡಿ ಕ್ಯಾಮೆರಾಗಳನ್ನು ಕಿತ್ತುಕೊಳ್ಳಲಾಗಿದೆ. ಇದು ಪ್ರಜಾಪ್ರಭುತ್ವ ಮತ್ತು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಕಾರ್ಯವೈಖರಿ ಹಾಗೂ ಎಸ್‌ಐಆರ್ ಪ್ರಕ್ರಿಯೆಯನ್ನು ಜನರು ಪ್ರಶ್ನಿಸುವ ಹಕ್ಕನ್ನು ಹೊಂದಿದ್ದಾರೆ. ಚುನಾವಣಾ ಆಯೋಗವು ಜನರಿಗೆ ಉತ್ತರದಾಯಿಯಾಗಿರಬೇಕು ಎಂದು ಅವರು ತಿಳಿಸಿದರು.

ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸಿದ ಹೋರಾಟವನ್ನು ಉಲ್ಲೇಖಿಸಿದ ಅವರು, ರೈತರು ಮತ್ತು ದಲಿತ ಸಂಘಟನೆಗಳ ಒಗ್ಗಟ್ಟು ಜನಶಕ್ತಿಯನ್ನು ಹೆಚ್ಚಿಸಲಿದೆ. ಅಂಬೇಡ್ಕರ್‌ರ ಸಂವಿಧಾನ ಮತ್ತು ಗಾಂಧೀಜಿಯವರ ಸತ್ಯಾಗ್ರಹ ನಮ್ಮ ಶಕ್ತಿ. ಜನರ ಹಕ್ಕುಗಳನ್ನು ಹತ್ತಿಕ್ಕುವ ಸರಕಾರವನ್ನು ಬದಲಿಸುವ ಜವಾಬ್ದಾರಿ ಪ್ರಜೆಗಳ ಮೇಲಿದೆ. ನಾವು ಹೆದರುವುದಿಲ್ಲ; ಮತದಾನದ ಮೂಲಕವೇ ರಾಜಕೀಯ ಬದಲಾವಣೆ ತರುತ್ತೇವೆ ಎಂದು ಪ್ರಕಾಶ್ ರಾಜ್ ಹೇಳಿದರು.

ರಾಜ್ಯ ರೈತ ಸಂಘಟನೆಯ ರಾಜ್ಯಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅ.23ರಂದು ನಡೆಯುತ್ತಿರುವ ಹೋರಾಟಕ್ಕೆ ರೈತ ಮತ್ತು ದಲಿತ ಸಂಘಟನೆಗಳು ಬೆಂಬಲ ಘೋಷಿಸಿವೆ. ರಾಜ್ಯಾದ್ಯಂತ ಪ್ರಜಾಪ್ರಭುತ್ವದ ಉಳಿವಿಗಾಗಿ ಜನತಾ ಮೆರವಣಿಗೆಗಳನ್ನು ಆಯೋಜಿಸುವುದರ ಜೊತೆಗೆ, ದೇಶದಾದ್ಯಂತ ಎಲ್ಲ ಬೀದಿ-ಬೀದಿಗಳು ಎಲ್ಲ ಜಂತರ್ ಮಂತರ್ ಆಗಲಿವೆ ಎಂದರು.

ಕೇಂದ್ರ ಸರಕಾರವು ಚುನಾವಣಾ ಆಯೋಗದ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿದೆ. ಯುವಜನರ ಶಾಂತಿಯುತ ಪ್ರತಿಭಟನೆಗಳನ್ನು ಹತ್ತಿಕ್ಕಲಾಗುತ್ತಿದೆ, ರಾಷ್ಟçಧ್ವಜ ಹಿಡಿದು ಹೋರಾಟ ನಡೆಸಿದವರನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ರೈತರ ಹಿತಾಸಕ್ತಿಯನ್ನು ಕಡೆಗಣಿಸಿರುವ ಕೇಂದ್ರ ಸರಕಾರ, ಕೃಷಿ ಕಾಯ್ದೆಗಳ ವಿರುದ್ಧದ ಐತಿಹಾಸಿಕ ಹೋರಾಟದ ಬಳಿಕ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ರಾಜ್ಯದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟದ ಬಿಕ್ಕಟ್ಟಿಗೂ ಕೇಂದ್ರ ಸರಕಾರದ ನಿರ್ಲಕ್ಷö್ಯವೇ ಪ್ರಮುಖ ಕಾರಣ ಎಂದು ಬಡಗಲಪುರ ನಾಗೇಂದ್ರ ಆರೋಪಿಸಿದರು.

ದಸಂಸ ಹೋರಾಟಗಾರ ಗುರುಪ್ರಸಾದ್ ಕೆರಗೋಡು ಮಾತನಾಡಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌ರನ್ನು ವಜಾಗೊಳಿಸಿ ನ್ಯಾಯಾಂಗ ವಿಚಾರಣೆಗೆ ಒಳಪಡಿಸಬೇಕು. ಚುನಾವಣಾ ಆಯುಕ್ತರ ನೇಮಕ ಪ್ರಕ್ರಿಯೆಯನ್ನು ಪ್ರಜಾಸತ್ತಾತ್ಮಕಗೊಳಿಸಬೇಕು. ಎಸ್‌ಐಆರ್ ಅನ್ನು ಸಂಪೂರ್ಣ ರದ್ದುಗೊಳಿಸಿ, ಹೊಸ ಚುನಾವಣಾ ಆಯೋಗದ ನೇತೃತ್ವದಲ್ಲಿ ಜನಸ್ನೇಹಿ ರೀತಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಬೇಕು. ಎಸ್‌ಐಆರ್ ಬಳಿಕ ನಡೆದಿರುವ ಎಲ್ಲ ಚುನಾವಣೆಗಳನ್ನು ರದ್ದುಗೊಳಿಸಿ ಮರುಚುನಾವಣೆ ನಡೆಸಬೇಕು. ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅವಕಾಶ ಕಲ್ಪಿಸಿ, ಯುವಜನರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ, ರೈತ ಮುಖಂಡರಾದ ಚುಕ್ಕಿ ನಂಜುಂಡಸ್ವಾಮಿ, ಟಿ.ಯಶವಂತ್, ಶಿವಪ್ರಕಾಶ್, ಕುಮಾರ್ ಸಮತಳ ಹಾಗೂ ದಲಿತ ಮುಖಂಡರಾದ ಇಂದುಧರ ಹೊನ್ನಾಪುರ, ಎನ್.ವೆಂಕಟೇಶ್, ವಿ.ನಾಗರಾಜ್, ಬಸವರಾಜ್ ಕೌತಾಳ್, ಕರಿಯಪ್ಪ ಗುಡಿಮನಿ ಉಪಸ್ಥಿತರಿದ್ದರು.

BREAKING : ಮಣಿಪುರದಲ್ಲಿ ಗುಂಡಿನ ದಾಳಿಗೆ  ಮೂವರು ಬ*ಲಿ : ಸಿಎಂ ನಿವಾಸದ ಮುಂದೆ ಮೃತದೇಹಗಳನ್ನಿಟ್ಟು ಸ್ಥಳೀಯರ ಆಕ್ರೋಶ

Tags: Farmersprakash rajVote
Previous Post

BREAKING : ಮಣಿಪುರದಲ್ಲಿ ಗುಂಡಿನ ದಾಳಿಗೆ  ಮೂವರು ಬ*ಲಿ : ಸಿಎಂ ನಿವಾಸದ ಮುಂದೆ ಮೃತದೇಹಗಳನ್ನಿಟ್ಟು ಸ್ಥಳೀಯರ ಆಕ್ರೋಶ

Next Post

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ: ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ ಪರ್ಯಾಯ ದಾಖಲೆಗಳ ಬಳಕೆಗೆ ಅವಕಾಶ

Related Posts

ದೇವರಗುಡ್ಡದ ಕಾರ್ಣಿಕ ನುಡಿ ಮೊಳಗಿತು: ‘ಕೆಂಪುಕೋಟೆಯ ಮೇಲೆ ಮುತ್ತು ಚಲ್ಲಿತ್ತಲೇ ಪರಾಕ್‌!’ ಇದರ ಅರ್ಥವೇನು?
ಕರ್ನಾಟಕ

ದೇವರಗುಡ್ಡದ ಕಾರ್ಣಿಕ ನುಡಿ ಮೊಳಗಿತು: ‘ಕೆಂಪುಕೋಟೆಯ ಮೇಲೆ ಮುತ್ತು ಚಲ್ಲಿತ್ತಲೇ ಪರಾಕ್‌!’ ಇದರ ಅರ್ಥವೇನು?

by ಪ್ರತಿಧ್ವನಿ
October 19, 2026
0

  ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಪ್ರಸಿದ್ಧ ಐತಿಹಾಸಿಕ ಧಾರ್ಮಿಕ ಕ್ಷೇತ್ರ ದೇವರಗುಡ್ಡದಲ್ಲಿ ನವರಾತ್ರಿ ಹಾಗೂ ವಿಜಯದಶಮಿ ಅಂಗವಾಗಿ ನಡೆಯುವ ಮಾಲತೇಶ (ಮೈಲಾರಲಿಂಗೇಶ್ವರ) ದೇವರ ಕಾರ್ಣೀಕೋತ್ಸವ ಭಕ್ತಿಭಾವದಿಂದ...

Read moreDetails
ಆಯುಧ ಪೂಜೆ, ದಸರಾ ಸಂಭ್ರಮಕ್ಕೆ ಬೆಲೆ ಏರಿಕೆಯ ಬಿಸಿ! ಕೆ.ಆರ್. ಮಾರುಕಟ್ಟೆಯಲ್ಲಿ ಹೂವು, ಹಣ್ಣುಗಳ ದರ ಎಷ್ಟಿದೆ?

ಆಯುಧ ಪೂಜೆ, ದಸರಾ ಸಂಭ್ರಮಕ್ಕೆ ಬೆಲೆ ಏರಿಕೆಯ ಬಿಸಿ! ಕೆ.ಆರ್. ಮಾರುಕಟ್ಟೆಯಲ್ಲಿ ಹೂವು, ಹಣ್ಣುಗಳ ದರ ಎಷ್ಟಿದೆ?

October 19, 2026
ಆಯುಧ ಪೂಜೆ ದಿನ ಕಾರು, ಬೈಕ್ ತೊಳೆದರೆ ದಂಡ! ಬೆಂಗಳೂರಿಗರಿಗೆ ಜಲಮಂಡಳಿಯಿಂದ ಎಚ್ಚರಿಕೆ

ಆಯುಧ ಪೂಜೆ ದಿನ ಕಾರು, ಬೈಕ್ ತೊಳೆದರೆ ದಂಡ! ಬೆಂಗಳೂರಿಗರಿಗೆ ಜಲಮಂಡಳಿಯಿಂದ ಎಚ್ಚರಿಕೆ

October 19, 2026
Northeast Teachers' Constituency Election: Alternative documents permitted if voter ID card is unavailable

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ: ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ ಪರ್ಯಾಯ ದಾಖಲೆಗಳ ಬಳಕೆಗೆ ಅವಕಾಶ

October 19, 2026
BREAKING: Three killed in a shooting in Manipur; locals express outrage by placing the bodies in front of the CM's residence

BREAKING : ಮಣಿಪುರದಲ್ಲಿ ಗುಂಡಿನ ದಾಳಿಗೆ  ಮೂವರು ಬ*ಲಿ : ಸಿಎಂ ನಿವಾಸದ ಮುಂದೆ ಮೃತದೇಹಗಳನ್ನಿಟ್ಟು ಸ್ಥಳೀಯರ ಆಕ್ರೋಶ

October 19, 2026
Next Post
Northeast Teachers' Constituency Election: Alternative documents permitted if voter ID card is unavailable

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ: ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ ಪರ್ಯಾಯ ದಾಖಲೆಗಳ ಬಳಕೆಗೆ ಅವಕಾಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada