ಮಹಾರಾಷ್ಟ್ರದಲ್ಲಿ ಕರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರು ಮಾರ್ಗಸೂಚಿಗಳನ್ನು ಅನುಸರಿಸದಿದ್ದರೆ ಕಠಿಣ ನಿರ್ಬಂಧಗಳನ್ನು ವಿಧಿಸಬೇಕಾಗಬಹುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಎಚ್ಚರಿಸಿದ್ದಾರೆ.
ಕೋವಿಡ್ ಎಕ್ಸ್ಪರ್ಟ್ ಟೀಮ್ ಜೊತೆಗಿನ ಸಭೆಯಲ್ಲಿ ಮಹಾರಾಷ್ಟ್ರದ ಪರಿಸ್ಥಿತಿಯನ್ನು ಪರಿಶೀಲಿಸಿ ಮಾತನಾಡಿದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜನರು ಮಾಸ್ಕ್ಗಳನ್ನು ಬಳಸಬೇಕು. ಲಸಿಕೆ ಹಾಕಿಸಿಕೊಳ್ಳಬೇಕು. ಸಾಮಾಜಿಕ ಅಂತರವನ್ನು ಕಾಪಾಡುವ ಮೂಲಕ ಶಿಸ್ತನ್ನು ಅನುಸರಿಸಬೇಕು ಎಂದು ಹೇಳಿದರು.
ಜನರು ಮತ್ತೆ ಲಾಕ್ಡೌನ್ ನಂತಹ ಪರಿಸ್ಥಿತಿಯನ್ನು ಎದುರಿಸಲು ಇಷ್ಟವಿಲ್ಲದಿದ್ದರೆ ಮಾರ್ಗಸೂಚಿಯನ್ನು ಪಾಲಿಸಿ ಎಂದು ಹೇಳಿದ್ದಾರೆ.
ಈ ಹಿಂದೆ ಒಂದೇ ದಿನದಲ್ಲಿ 3,712 ಹೊಸ ಕರೋನಾ ಪ್ರಕರಣಗಳು ವರದಿಯಾಗಿದ್ದವು. ಇದರೊಂದಿಗೆ, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 19,509 ಕ್ಕೆ ಏರಿದೆ. ಒಟ್ಟು ಸೋಂಕುಗಳಲ್ಲಿ ಶೇಕಡಾ 0.05 ರಷ್ಟು ಸಕ್ರಿಯ ಪ್ರಕರಣಗಳು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಗುಣಮುಖ ಸರಾಸರಿ ಸಂಖ್ಯೆ ಸೇ 98.74 ಪ್ರತಿಶತದಷ್ಟಿದೆ. ದೈನಂದಿನ ಸೋಂಕಿನ ಪ್ರಮಾಣ 0.84 ಇದೆ. ಸಾಪ್ತಾಹಿಕ ಸೋಂಕಿನ ಪ್ರಮಾಣ 0.67 , ಮರಣ ಪ್ರಮಾಣವು ಶೇಕಡಾ 1.22 ರಷ್ಟಿದೆ. ಇಲ್ಲಿಯವರೆಗೆ, ರಾಷ್ಟ್ರವ್ಯಾಪಿ ಕರೋನಾ ಲಸಿಕೆ ಅಭಿಯಾನದ ಅಡಿಯಲ್ಲಿ ದೇಶದಲ್ಲಿ 193.70 ಕೋಟಿಗೂ ಹೆಚ್ಚು ಲಸಿಕೆ ಡೋಸ್ಗಳನ್ನು ನೀಡಲಾಗಿದೆ.