ಡೆಹ್ರಾಡೂನ್: ಹವಾಮಾನ ವೈಪರೀತ್ಯದಿಂದಾಗಿ ಉತ್ತರಾಖಂಡದಲ್ಲಿ (Uttarakhand) ಕರ್ನಾಟಕ (Karnataka) ಮೂಲದ ನಾಲ್ವರು ಸೇರಿದಂತೆ 9 ಜನ ಚಾರಣಿಗರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರು ಮೂಲದ ಸುಜಾತ (52), ಪದ್ಮಿನಿ ಹೆಗಡೆ (35), ಚಿತ್ರಾ (48), ಸಿಂಧು (45), ವೆಂಕಟೇಶ್ ಪ್ರಸಾದ್ (52), ಅನಿತಾ (61), ಆಶಾ ಸುಧಾಕರ (72), ಪದ್ಮನಾಭನ್ ಕೆಪಿಎಸ್ (50) ವಿನಾಯಕ್ ಸಾವನ್ನಪ್ಪಿದ ದುರ್ದೈವಿಗಳು.
ಅಲ್ಲದೇ, ಹಲವರನ್ನು ಈಗಾಗಲೇ ರಕ್ಷಿಸಲಾಗಿದೆ. ಉತ್ತರಾಖಂಡದ ಸಹಸ್ತ್ರ ತಾಲ್ನಲ್ಲಿ (Sahastra Tal) ಸಿಲುಕಿದ್ದ ಚಾರಣಿಗರ ಪೈಕಿ ಸೌಮ್ಯಾ, ವಿನಯ, ಶಿವಜ್ಯೋತಿ, ಸುಧಾಕರ್, ಸ್ಮೃತಿ, ಸೀನಾ ಎಂಬುವವರನ್ನು ರಕ್ಷಿಸಲಾಗಿದೆ.
13 ಜನರ ಸ್ಥಿತಿ ಗಂಭೀರವಾಗಿದ್ದು ವಾಯು ಪಡೆಯಿಂದ ಹೆಲಿಕಾಪ್ಟರ್ (Helicopter) ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಮೇ 29ರಿಂದ ಜೂನ್ 7ರವರೆಗೆ ಭಟವಾಡಿ ಮಲ್ಲಾ – ಸಿಲ್ಲಾ – ಕುಶಕಲ್ಯಾಣ – ಸಹಸ್ತ್ರತಾಲ್ ಟ್ರೆಕ್ಕಿಂಗ್ಗೆ (Trekking) ಅನುಮತಿ ಪಡೆದಿದ್ದರು. ಮೌಂಟೇನಿಯರಿಂಗ್ ಫೌಂಡೇಶನ್ ಇದನ್ನು ಆಯೋಜಿಸಿತ್ತು.