• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್:ಡಿ.22ರಂದು ಕಲಬುರ್ಗಿಯ ‘ಜಯದೇವ ಆಸ್ಪತ್ರೆ’ ಲೋಕಾರ್ಪಣೆ

ಪ್ರತಿಧ್ವನಿ by ಪ್ರತಿಧ್ವನಿ
December 20, 2024
in Top Story, ಇತರೆ / Others, ಕರ್ನಾಟಕ
0
ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್:ಡಿ.22ರಂದು ಕಲಬುರ್ಗಿಯ ‘ಜಯದೇವ ಆಸ್ಪತ್ರೆ’ ಲೋಕಾರ್ಪಣೆ
Share on WhatsAppShare on FacebookShare on Telegram

ಕಲಬುರಗಿ,:ತೊಗರಿ ಕಣಜ, ಶರಣರ ನಾಡು ಎಂದೇ ಖ್ಯಾತಿ ಹೊಂದಿರುವ ಕಲಬುರಗಿ ಜಿಲ್ಲೆ ಈಗ “ಕಲ್ಯಾಣ”ಮಯವಾಗುತ್ತಿದೆ.ಅಂದರೆ ಎಲ್ಲ ಕ್ಷೇತ್ರಗಳ ಅದರಲ್ಲೂ ಆರೋಗ್ಯ ಕ್ಷೇತ್ರಪ್ರ ಕಾಶಮಾನವಾಗುತ್ತಿದೆ.

ADVERTISEMENT

ಕಾಂಗ್ರೆಸ್‌ ಸರ್ಕಾರದ ಅಧಿಕಾರಾವಧಿಯಲ್ಲಿ ಹಲವಾರುಯೋಜನೆಗಳು ಇಲ್ಲಿ ಅನುಷ್ಠಾನಕ್ಕೆ ಬಂದಿರುವುದು. ಇದರ ಹಿಂದಿರುವ ರೂವಾರಿ ಎಂದರೆ ವೈದ್ಯಕೀಯ ಶಿಕ್ಷಣ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್.

ಕಲಬುರಗಿಯ ಶರಣ ಪ್ರಕಾಶ್‌ ಪಾಟೀಲ್‌ ಅವರ ಇಚ್ಛಾಶಕ್ತಿ ಹಾಗೂ ಕಲ್ಯಾಣ ಕರ್ನಾಟಕದ ಜಿಲ್ಲೆಯ ಜನರಿಗೆ ಆರೋಗ್ಯ ಸಿರಿ ದೊರಕಿಸಿಕೊಡಲು ನಿರಂತರ ಶ್ರಮಿಸುತ್ತಿದ್ದಾರೆ. ಹಾಲಿ ವೈದ್ಯಕೀಯ ಶಿಕ್ಷಣಸಚಿವರಾಗಿ ಕಲಬುರಗಿ ಜಿಲ್ಲೆ, ಕಲ್ಯಾಣ ಕರ್ನಾಟಕ ಭಾಗಕ್ಕೆ ಮಾತ್ರವಲ್ಲದೇ ಇಡೀ ಕರುನಾಡಿನಲ್ಲಿ ಹಲವಾರು ವಿನೂತನ ಹಾಗೂ ಜನೋಪಯೋಗಿ ಯೋಜನೆಗಳು ಕಾರ್ಯರೂಪಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಈಗ ಸಚಿವರ ಕನಸಿನ ಯೋಜನೆಯೊಂದು ಕಾರ್ಯರೂಪಕ್ಕೆ ಬರುತ್ತಿದೆ. ಕಲಬುರಗಿ ಜಿಲ್ಲೆಯಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆ ಮತ್ತು ಸಂಶೋಧನಾ ಸಂಸ್ಥೆಯ ಶಾಖೆಯ ಲೋಕಾರ್ಪಣೆಗೆ ಈಗ ಮುಹೂರ್ತ ನಿಗದಿಯಾಗಿದೆ.ಈ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಆಡಳಿತಾವಧಿಯಲ್ಲಿ(2013–2018) ಜಯದೇವ ಸಂಸ್ಥೆಯ ಸ್ಥಾಪನೆಗೆ ಮುನ್ನುಡಿ ಬರೆಯಲಾಗಿತ್ತು. ಬೃಹತ್‌ ಆಸ್ಪತ್ರೆ ನಿರ್ಮಾಣ ಮಾಡಲು ಹಿಂದಿನ ಸರ್ಕಾರ ನಿರ್ಲಕ್ಷ್ಯ ತೋರಿದ್ದರಿಂದ ಯೋಜನೆ ನನೆಗುದಿಗೆ ಬಿದ್ದಿತ್ತು.

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಶರಣ್‌ ಪ್ರಕಾಶ್‌ ಪಾಟೀಲ್‌ ಅವರು ವೈದ್ಯಕೀಯ ಶಿಕ್ಷಣ ಇಲಾಖೆಯ ಜವಾಬ್ದಾರಿ ವಹಿಸಿಕೊಂಡಕೂಡಲೇ ಈ ಯೋಜನೆ ಕೈಗೆತ್ತಿಕೊಂಡರು. ನಿರಂತರ ಪರಿಶೀಲನೆ ಹಾಗೂ ಯೋಜನೆಯನ್ನು ಅನುಷ್ಠಾನ ಮಾಡಲೇಬೇಕೆಂಬ ಸಂಕಲ್ಪ ತೊಟ್ಟಿದ್ದರಿಂದ ಇಂದು ಜಯದೇವ ಹೃದ್ರೋಗ ಸಂಸ್ಥೆಯ ಭವ್ಯ ಕಟ್ಟಡ ತಲೆ ಎತ್ತಿ ನಿಂತಿದೆ.ಇದೇ ಭಾನುವಾರ (ಡಿಸೆಂಬರ್‌ 22) ಲೋಕಾರ್ಪಣೆ ಕೂಡ ಆಗುತ್ತಿದೆ.

ಕಲಬುರಗಿ ಜಿಲ್ಲೆಯಲ್ಲಿ ಶರಣ ಪ್ರಕಾಶ್‌ ಪಾಟೀಲ್‌ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದಾರೆ ಎಂದರೆ ಅತಿಶಯೋಕ್ತಿಯಾಗಲಾರದು. ಇವರ ಆಡಳಿತಾವಧಿಯಲ್ಲಿ ಹಲವಾರು ಯೋಜನೆಗಳು ಇಲ್ಲಿ ಜಾರಿಯಾಗಿವೆ.

ಕಲಬುರಗಿಯ ಸರ್ದಾರ್‌ ವಲ್ಲಭಾಯ್‌ ಪಟೇಲ್‌ ರಸ್ತೆಯ ಎಸ್‌.ಎಂ.ಪಂಡಿತ್‌ ರಂಗಮಂದಿರದ ಎದುರು ಬೃಹತ್‌ ಪ್ರದೇಶದಲ್ಲಿ ನಿರ್ಮಾಣವಾಗಿರುವ ಜಯದೇವ ಹೃದ್ರೋಗ ಸಂಸ್ಥೆಯ ಕಟ್ಟಡ ಕಲ್ಯಾಣಕ ರ್ನಾಟಕ ಭಾಗದ ಜನರಿಗೆ ಆರೋಗ್ಯ ಸೇವೆ ನೀಡಲು ಸಜ್ಜಾಗಿದೆ.ಕಲಬುರಗಿಯ ಹೊಸ ಆಸ್ಪತ್ರೆ ಸಂಕೀರ್ಣದ ಒಟ್ಟು ಯೋಜನಾ ವೆಚ್ಚ 262.20 ಕೋಟಿ ರೂ. ಆಗಿದ್ದು, ಇದರಿಂದ ಕಲ್ಯಾಣ ಕರ್ನಾಟ ಭಾಗದ ಕಲಬುರಗಿ, ಕೊಪ್ಪಳ, ಬೀದರ್‌, ಯಾದಗಿರಿ, ಬಳ್ಳಾರಿ, ರಾಯಚೂರು ಜಿಲ್ಲೆಯ ನಾಗರಿಕರಿಗೆ ಸಾಕಷ್ಟು ಅನುಕೂಲವಾಗಲಿದೆ.

ಅತ್ಯಾಧುನಿಕ ಹಾಗೂ ಗುಣಮಟ್ಟದ ಸೌಲಭ್ಯಗಳನ್ನು ಒಳಗೊಂಡಿರುವ 371 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಜಯದೇವ ಹೃದ್ರೋಗ ಸಂಸ್ಥೆಯ ದಕ್ಷಿಣ ಏಷ್ಯಾದ ಅತ್ಯಂತ ಬೃಹತ್‌ ಹೃದ್ರೋಗ ಚಿಕಿತ್ಸಾಸಂಸ್ಥೆ ಎಂಬ ಕೀರ್ತಿಗೂ ಪಾತ್ರವಾಗಿದೆ. ಜಯದೇವ ಸಂಸ್ಥೆ ಎಂದರೆ “ಚಿಕಿತ್ಸೆ ಮೊದಲು, ಹಣ ನಂತರ (ಟ್ರೀಟ್‌ಮೆಂಟ್‌ ಫಸ್ಟ್‌-ಪೇಮೆಂಟ್‌ ನೆಕ್ಸ್ಟ್‌) ಎಂಬ ಮುಖ್ಯ ಧ್ಯೇಯಹೊಂದಿದೆ.

ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಹಲವಾರು ಆರೋಗ್ಯಕರ ಯೋಜನೆಗಳು ಜಿಲ್ಲೆಗೆ ಲಭಿಸಿವೆ. ಈ ಯೋಜನೆಗಳು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸುವ ಸರ್ಕಾರದ ಬದ್ಧತೆಗೆ ಸಾಕ್ಷಿಯಾಗಿವೆ. ಕಲ್ಯಾಣ ಕರ್ನಾಟಕ ಭಾಗದ ಜನರ ಮನೆಬಾಗಿಲಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸಬೇಕೆಂಬ ಸರ್ಕಾರದ ಹಾಗೂ ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌ ಆಶಯದಂತೆ ಈಗ ಕಲಬುರಗಿಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಬೃಹತ್ ಕಟ್ಟಡ ಲೋಕಾರ್ಪಣೆ ಸಿದ್ಧವಾಗಿದೆ. ಈ ಭಾಗದಲ್ಲಿ ಅಭಿವೃದ್ಧಿಯ”ಕಲ್ಯಾಣ”ವಾಗಲಿ ಎಂಬ ಜನರು ಕನಸು ನನಸಾಗುತ್ತಿದೆ.

ಜಯದೇವ ಕಲಬುರಗಿ ನೂತನ ಶಾಖೆಯ ವಿಶೇಷತೆಗಳು:❖ 262.20 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಿರುವ 371 ಹಾಸಿಗೆಸಾಮರ್ಥ್ಯದ ಕಟ್ಟಡ.

3 ಕ್ಯಾಥ್‌ಲ್ಯಾಬ್‌ಗಳು,3 ಆಪರೇಷನ್ ಥಿಯೇಟರ್‌ಗಳು,1 ಹೈಬ್ರಿಡ್ OT, 105 ICCU ಹಾಸಿಗೆಗಳು, 120 ಸಾಮಾನ್ಯ ವಾರ್ಡ್ ಬೆಡ್‌.

❖ ಅರೆ-ವಿಶೇಷ, ವಿಶೇಷ ಮತ್ತು ಡೀಲಕ್ಸ್ ವಾರ್ಡ್ ಹಾಸಿಗೆಗಳು, 12 ರಿಕವರಿ ಮತ್ತು 12 ಪೋಸ್ಟ್ ಆಪರೇಟಿವ್ ಹಾಸಿಗೆಗಳು.

❖ ಕಾರ್ಡಿಯಾಲಜಿ, ಕಾರ್ಡಿಯೋಥೊರಾಸಿಕ್ ಸರ್ಜರಿ, ವ್ಯಾಸ್ಕುಲಾರ್‌ಶಸ್ತ್ರಚಿಕಿತ್ಸೆ, ಪೀಡಿಯಾಟ್ರಿಕ್ ಕಾರ್ಡಿಯಾಲಜಿ, ರೇಡಿಯಾಲಜಿ, 128 ಸ್ಲೈಸ್ CT ಸ್ಕ್ಯಾನ್, 1.5T MRI, ಅಲ್ಟ್ರಾಸೋನೋಗ್ರಫಿ, ಹೈಟೆಕ್ಪ್ಯಾಥಾಲಜಿ ಮತ್ತು ರಕ್ತ ಬ್ಯಾಂಕ್ ಸೇವೆ.

ಶರಣ್‌ ಪ್ರಕಾಶ್‌ ಪಾಟೀಲ್‌ ಜಾರಿಗೆ ತಂದ ಯೋಜನೆಗಳು.

❖ ನರ್ಸಿಂಗ್ ಕಾಲೇಜು, ಡೆಂಟಲ್ ಕಾಲೇಜುಗಳನ್ನು ನಿರ್ಮಿಸುವಮೂಲಕ ಈ ಭಾಗವನ್ನು ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಹಬ್ಮಾಡುವ ಉದ್ದೇಶವಿದೆ. ಸಚಿವರು ಜಾರಿಗೆ ತಂದ ಪ್ರಮುಖಯೋಜನೆಗಳ ವಿವರ ಹೀಗಿದೆ.

❖ ಕಲಬುರಗಿಯಲ್ಲಿ 110 ಹಾಸಿಗೆ ಸಾಮರ್ಥ್ಯ ಟ್ರಾಮಾ ಕೇರ್ ಸೆಂಟರ್, ಇಲ್ಲಿ 2023-24ರಲ್ಲಿ ತುರ್ತು ಘಟಕ ಚಿಕಿತ್ಸೆಗಾಗಿ ಆಸ್ಪತ್ರೆ ನಿರ್ಮಾಣ.

❖ ಕಲಬುರಗಿಯಲ್ಲಿ ಪ್ರಾದೇಶಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ.

❖ ಕಲಬುರಗಿಯಲ್ಲಿ 106 ಕೋಟಿ ರೂ. ವೆಚ್ಚದಲ್ಲಿ 150 ಹಾಸಿಗೆಗಳಪ್ರಾದೇಶಿಕ ಕ್ಯಾನ್ಸರ್ ಕೇಂದ್ರ, ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಮಾದರಿಯಲ್ಲಿ.

❖ ಗುಲ್ಬರ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 16 ಕೋಟಿರೂ.ವೆಚ್ಚದಲ್ಲಿ 30 ಹಾಸಿಗೆಗಳ ಸುಟ್ಟಗಾಯಗಳ ಘಟಕ.

❖ ಗುಲ್ಬರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ 92 ಕೋಟಿರೂ.ವೆಚ್ಚದಲ್ಲಿ 200 ಹಾಸಿಗೆಗಳ ತಾಯಿ-ಮಗು ಆಸ್ಪತ್ರೆ.

❖ 92 ರೂ ವೆಚ್ಚದಲ್ಲಿ ಗುಲ್ಬರ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ150 ಹಾಸಿಗೆಗಳ ಮಕ್ಕಳ ಆರೋಗ್ಯ ಆಸ್ಪತ್ರೆ

Tags: Cardiology and Research InstituteHealth SectorInauguration of JayadevaJayadev InstituteKalaburagi Branch.KalaburgiPayment Next" (Treatment First-Payment Next)Treatment First
Previous Post

87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ

Next Post

ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿ ಟಿ ರವಿ ಅಶ್ಲೀಲ ಪದ ಬಳಕೆ ಆರೋಪ ಕೋರ್ಟ್ ನಲ್ಲಿ ವಿಚಾರಣೆ

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post
ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿ ಟಿ ರವಿ ಅಶ್ಲೀಲ ಪದ ಬಳಕೆ ಆರೋಪ ಕೋರ್ಟ್ ನಲ್ಲಿ ವಿಚಾರಣೆ

ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿ ಟಿ ರವಿ ಅಶ್ಲೀಲ ಪದ ಬಳಕೆ ಆರೋಪ ಕೋರ್ಟ್ ನಲ್ಲಿ ವಿಚಾರಣೆ

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!