ದೇಶದಲ್ಲಿ ಕರೋನಾ ಎರಡನೇ ಅಲೆ ಸಂಕಷ್ಟದ ಪರಿಸ್ಥಿತಿಗೆ ಎಡೆಮಾಡಿಕೊಟ್ಟಿದೆ. ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಹಿನ್ನಲೆ, ಕೋವಿಡ್ ಸಂಬಂಧ ಚುನಾವಣಾ ಆಯೋಗ ಕಠಿಣ ನಿಯಮಗಳನ್ನು ಜಾರಿಗೊಳಿಸಿತ್ತು. ನಿಯಮಕ್ಕೆ ಕ್ಯಾರೇ ಅನ್ನದೆ ನಿಯಮ ಉಲ್ಲಂಘಿಸಿ ಚುನಾವಣಾ ಕಾರ್ಯದಲ್ಲಿ ನಿರತರಾದ 13 ಅರ್ಭ್ಯರ್ಥಿಗಳಗೆ ವಿರುದ್ಧ ಚುನಾವಣಾ ಆಯೋಗ ಎಫ್‌ಐಆರ್ ದಾಖಲಿಸಿದೆ. 33 ಅಭ್ಯರ್ಥಿಗಳಿಗೆ ಶೋಕಾಸ್ ನೋಟಿಸ್ ನೀಡಿದೆ.
ಏಪ್ರಿಲ್ 22 ರಂದು ಕಲ್ಕತ್ತಾ ಹೈಕೋರ್ಟ್ ಪಶ್ವಿಮ ಬಂಗಾಳದ ಚುನಾವಣಾ ಪ್ರಚಾರದ ಸಮಯದಲ್ಲಿ COVID-19 ಪ್ರೋಟೋಕಾಲ್ಗಳ ಉಲ್ಲಂಘನೆ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆ ನಡೆಸಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲೇ, ಚುನಾವಣಾ ಆಯೋಗ ಎಚ್ಚೆತ್ತುಕೊಂಡು ನಿಯಮ ಉಲ್ಲಂಘಿಸಿರುವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ.
ಕೋವಿಡ್ ಹೆಚ್ಚಾದ ಕಾರಣ ಚುನಾವಣೆ ಸಂಬಂಧಿಸಿದಂತೆ ಆಯೋಗ ಕೆಲವು ನಿಯಮಗಳನ್ನು ಜಾರಿ ಮಾಡಿತ್ತು. ರೋಡ್ ಶೋಗಳನ್ನು ನಡೆಸುವಂತಿಲ್ಲ, 500 ಕ್ಕೂ ಹೆಚ್ಚು ಜನರೊಂದಿಗೆ ದೊಡ್ಡ ಸಾರ್ವಜನಿಕ ಸಭೆಗಳನ್ನು ನಡೆಸುವಂತಿಲ್ಲ ಎಂದು ತಿಳಿಸಿತ್ತು.
ಈ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಆಯೋಗ, ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು. COVID-19 ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಉಲ್ಲಂಘಿಸಿರುವ ಅಭ್ಯರ್ಥಿಗಳಿಗೆ ಕಠಿಣ ಕ್ರಮಕೈಗೊಳ್ಳಬೇಕೆಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಚನೆ ಕೂಡ ನೀಡಿದೆ.
ಕೋರ್ಟ್ ಆಯೋಗವನ್ನು ತರಾಟೆಗೆ ತೆಗೆದುಕೊಂಡ ಬೆನ್ನಲೇ,, ಚುನಾವಣಾ ಆಯೋಗ ಕರೋನಾ ಪ್ರೋಟೋಕಾಲ್ ಉಲ್ಲಂಘಿಸಿದ 13 ಅಭ್ಯರ್ಥಿಗಳ ವಿರುಧ್ಧ ಎಫ್‌ಐಆರ್ ದಾಖಲಿಸಿದೆ. ಇತ್ತ 33 ಅಭ್ಯರ್ಥಿಗಳ ವಿರುದ್ಧ ಶೋ ಕಾಸ್ ನೋಟಿಸ್ ನೀಡಿದೆ. ಈ ಸಂಬಂಧ ಅಭ್ಯರ್ಥಿಗಳು ಪ್ರತಿಕ್ರಿಯಿಸದಿದ್ದರೆ. ನಂತರ ಮುಲಾಜಿಲ್ಲದೆ ಎಫ್‌ಐಆರ್ ದಾಖಲಿಸುವಂತೆ ತಿಳಿಸಿದೆ. ಈ ಕುರಿತು ಅಧಿಕಾರಿಗಳು ಆಯೋಗಕ್ಕೆ ವರದಿಸಲ್ಲಿಸ ಬೇಕೆಂದಿದೆ.
ಯಾರೇ ಆಗಲಿ ಕರೋನಾ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಉಲ್ಲಂಘಿಸುವವರ ವಿರುದ್ಧ ಸಾಂಕ್ರಾಮಿಕ ರೋಗ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 188 ರ ಅಡಿಯಲ್ಲಿ ದೂರು ನೀಡಲು ಇಸಿಐ ನಿರ್ಧರಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.