ಮಧುಮಲೈ: ಏ.೦೯: ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತಾರಣ್ಯಕ್ಕೆ ಭಾನುವಾರ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ತೆಪ್ಪಕಾಡು ಆನೆ ಶಿಬಿರದ ಆನೆಗಳಿಗೆ ಆಹಾರ ತಿನ್ನಿಸಿದರು.
ಆಸ್ಕರ್ ಪ್ರಶಸ್ತಿ ವಿಜೇತ ದಿ ಎಲಿಪೆಂಟ್ ವಿಸ್ಪರ್ಸ್ ನ ಪ್ರಮುಖ ಸ್ಟಾರ್ ಗಳಾದ ಬೊಮ್ಮನ್ ಮತ್ತು ಬೆಳ್ಳಿ ದಂಪತಿಯೊಂದಿಗೆ ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಆನೆಯೊಂದಕ್ಕೆ ಕಬ್ಬನ್ನು ತಿನ್ನಿಸುತ್ತಿರುವ ದೃಶ್ಯ ವಿಡಿಯೋದಲ್ಲಿದೆ. ಅಲ್ಲದೇ, ಹುಲಿ ಸಂರಕ್ಷಿತಾರಣ್ಯದ ಕ್ಷೇತ್ರ ನಿರ್ದೇಶಕರೊಂದಿಗೂ ಮೋದಿ ಸಂವಾದ ನಡೆಸಿದರು.
ಇದಕ್ಕೂ ಮುನ್ನಾ, ಕರ್ನಾಟಕದ ಬಂಡೀಪುರ ಹುಲಿ ಸಂರಕ್ಷಿತಾರಣ್ಯಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ, ಅಲ್ಲಿನ ಸಂರಕ್ಷಣೆಯ ಪ್ರಯತ್ನದಲ್ಲಿ ತೊಡಗಿರುವ ಮುಂಚೂಣಿ ಕ್ಷೇತ್ರ ಸಿಬ್ಬಂದಿ ಮತ್ತು ಸ್ವಸಹಾಯ ಗುಂಪುಗಳೊಂದಿಗೆ ಸಂವಾದ ನಡೆಸಿದರು.