ದೆಹಲಿ: ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ, ಇಂದು ಪ್ರಧಾನಿ ಮೋದಿ, ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಅವರಿಗೆ ರಸ್ತೆಯಲ್ಲಿ ಕನ್ನಡಿಗ ದಂಪತಿಗಳು ಎದುರಾಗಿದ್ದಾರೆ.ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಇಂದು ಬಿಡುವಿಲ್ಲದ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಇಂದು ಬೆಳಿಗ್ಗೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದರು.
ಇದಾದ ಬಳಿಕ ಪ್ರಧಾನಿ ಮೋದಿಯವರನ್ನೂ ಭೇಟಿ ಮಾಡಿ ರಾಜ್ಯದ ನೀರಾವರಿ ಯೋಜನೆಗಳಿಗೆ ನೆರವು ನೀಡುವಂತೆ ಮನವಿ ಮಾಡಿದ್ದಾರೆ. ಪ್ರಧಾನಿ ನಿವಾಸದಿಂದ ಸಿಎಂ ಸಿದ್ದರಾಮಯ್ಯ ಕಾರಿನಲ್ಲಿ ವಾಪಸ್ ಆಗುತ್ತಿರುವಾಗ ಅವರಿಗೆ ಕನ್ನಡಿಗ ದಂಪತಿಯೊಬ್ಬರು ಎದುರಾಗಿದ್ದಾರೆ.
ಸಿಎಂ ಸಿದ್ದರಾಮಯ್ಯನವರನ್ನು ಗುರುತಿಸಿದ ಕನ್ನಡಿಗ ದಂಪತಿ ಅವರನ್ನು ರಸ್ತೆ ಮಧ್ಯೆಯೇ ನಿಲ್ಲಿಸಿ ಸೆಲ್ಫೀ ತೆಗೆದುಕೊಂಡಿದ್ದಾರೆ. ಸಿದ್ದರಾಮಯ್ಯನವರೂ ದೆಹಲಿಯಲ್ಲಿ ಅಪರೂಪಕ್ಕೆ ಕನ್ನಡಿಗರನ್ನು ಕಂಡಿದ್ದರಿಂದ ಸಂತೋಷದಿಂದಲೇ ರಸ್ತೆ ಮಧ್ಯೆಯೂ ಕಾರು ನಿಲ್ಲಿಸಿ ಸೆಲ್ಫೀಗೆ ಪೋಸ್ ನೀಡಿದ್ದಾರೆ.