• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BUDGET 2026 – ಶಿಕ್ಷಕರ ಭರ್ತಿ, ಖಾಲಿ ಹುದ್ದೆಗಳ ನೇಮಕಾತಿ : ಶಿಕ್ಷಣ ಇಲಾಖೆಗೆ ಬಜೆಟ್‌ನಲ್ಲಿ ದೊರೆತಿದ್ದೇನು..?

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಲಾಗುವುದು ಎಂದು ಘೋಷಿಸಿದ ಸಿದ್ದರಾಮಯ್ಯ..

ಪ್ರತಿಧ್ವನಿ by ಪ್ರತಿಧ್ವನಿ
March 6, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
BUDGET 2026 – ಶಿಕ್ಷಕರ ಭರ್ತಿ, ಖಾಲಿ ಹುದ್ದೆಗಳ ನೇಮಕಾತಿ : ಶಿಕ್ಷಣ ಇಲಾಖೆಗೆ ಬಜೆಟ್‌ನಲ್ಲಿ ದೊರೆತಿದ್ದೇನು..?
Share on WhatsAppShare on FacebookShare on Telegram

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ ಬಜಟ್‌ ಮಂಡಿಸಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಈ ಬಹು ನಿರೀಕ್ಷಿತ ಅದರಲ್ಲೂ ಆರ್ಥಿಕತೆಯ ಬಗ್ಗೆ ಆಳವಾಗಿ ಜ್ಞಾನ ಹೊಂದಿರುವ ಸಿಎಂ ಬಜೆಟ್‌ನಲ್ಲಿ ಇಲಾಖೆಗಳಿಗೆ ಅಪಾರ ಅನುದಾನ ಘೋಷಿಸಿದ್ದಾರೆ.

ADVERTISEMENT
Araga Jnanendra : ಯುವಕರ ಪಾಲಿಗೆ ಸತ್ತು ಹೋದ ಸರ್ಕಾರ ಎಂದ ಆರಗ ಜ್ಞಾನೇಂದ್ರ..! #siddaramaiah

ಮುಖ್ಯವಾಗಿ ಸಚಿವ ಮಧು ಬಂಗಾರಪ್ಪ ಜವಾಬ್ದಾರಿ ಹೊಂದಿರುವ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ವಿವಿಧ ಕಾರ್ಯಕ್ರಮಗಳ ಬಗ್ಗೆ ಘೋಷಿಸಿದ್ದಾರೆ. ಈ ಬಾರಿಯ 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ 184 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಖಾಸಗಿ ಶಾಲೆಗಳ ಮಾನ್ಯತೆ ಪಡೆಯುವ ಹಾಗೂ ನವೀಕರಿಸುವ ಪ್ರಕ್ರಿಯೆಯನ್ನು ಆನ್ಲೈನ್ ಮೂಲಕ ಅರ್ಜಿ ಹಾಗೂ ದಾಖಲೆಗಳನ್ನು ಸಲ್ಲಿಸಲು ಅನುಮತಿಸಿ ಸರಳೀಕರಣಗೊಳಿಸಲಾಗಿದೆ. 2025–26ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುವ ವಿವಿಧ ಸವಲತ್ತುಗಳನ್ನು ಮೊದಲ ಬಾರಿಗೆ ನೇರ ನಗದು ವರ್ಗಾವಣೆ (DBT) ಮಾಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಗ್ರಾಮೀಣ ಪತ್ರ, ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರಗಳನ್ನು ಆನ್-ಲೈನ್ ಮೂಲಕ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಉತ್ತಮ ಕಲಿಕೆ ಉಜ್ವಲ ಭವಿಷ್ಯʼ ಎಂಬ ಘೋಷವಾಕ್ಯದೊಂದಿಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ADB ನೆರವಿನೊಂದಿಗೆ 500 ಶಾಲೆಗಳು, KKRDB ನಿಧಿಯಿಂದ 200 ಶಾಲೆಗಳು ಹಾಗೂ KMERC ನಿಧಿಯಿಂದ 100 ಶಾಲೆಗಳು ಒಟ್ಟಾರೆ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು. ಇದಕ್ಕಾಗಿ ಒಟ್ಟಾರೆ 3,900 ಕೋಟಿ ರೂ.ಗಳನ್ನು ಮುಂದಿನ ಮೂರು ವರ್ಷಗಳಲ್ಲಿ ವೆಚ್ಚ ಮಾಡಲಾಗುವುದು ಎಂದಿದ್ದಾರೆ.

ಇದನ್ನೂ ಓದಿ : ಸರ್ವನಾಶದ ಹಾದಿಯೂ ಆಧಿಪತ್ಯದ ಹಂಬಲವೂ

ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಯ ವೇಳೆ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿನ (KPS) ಶಿಕ್ಷಕರ ಹುದ್ದೆಗಳನ್ನು ಮಹತ್ವದ ಹುದ್ದೆಗಳೆಂದು ಪರಿಗಣಿಸಿ ಮೊದಲ ಆದ್ಯತೆಯಲ್ಲಿ ಭರ್ತಿ ಮಾಡಲಾಗುವುದು ಹಾಗೂ ಸದರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶಿಕ್ಷಕರ ನೇಮಕಾತಿ ಮಾಡಲು ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ವಿಶೇಷವಾಗಿ ದಾಖಲಾತಿ ಪ್ರಮಾಣ ಮತ್ತು ಕಲಿಕೆಯ ಫಲಿತಾಂಶಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈಗಾಗಲೇ 1 ರಿಂದ 10ನೇ ತರಗತಿಯವರೆಗೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲಾಗುತ್ತಿದೆ. 2026-27ನೇ ಸಾಲಿನಿಂದ ವಿದ್ಯಾವಿಕಾಸ ಯೋಜನೆಯಡಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಚಟುವಟಿಕೆ ಪುಸ್ತಕಗಳನ್ನು, 1 ರಿಂದ 10ನೇ ತರಗತಿಯವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳನ್ನು ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಘೋಷಿಸಿದ್ದಾರೆ.

ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ಕೊಠಡಿ ನಿರ್ಮಾಣ ಮತ್ತು ಕೊಠಡಿಗಳ ದುರಸ್ತಿ ಕಾಮಗಾರಿಗಳಿಗೆ 565 ಕೋಟಿ ರೂ.ಗಳು, ಶೌಚಾಲಯ ನಿರ್ಮಾಣಕ್ಕಾಗಿ 75 ಕೋಟಿ ರೂ.ಗಳು ಹಾಗೂ ಶಾಲೆಗಳಿಗೆ ಪೀಠೋಪಕರಣಗಳನ್ನು ಖರೀದಿಸಲು 25 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು ಎಂದು ಹೇಳಿದ್ದಾರೆ.

ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ 125 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು. ಸದರಿ ಅನುದಾನವನ್ನು ಶಾಲಾ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ ನೇರವಾಗಿ ವರ್ಗಾಯಿಸಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

🔴LIVE | Karnataka Budget 2026: ಸಿದ್ದರಾಮಯ್ಯರಿಂದ ದಾಖಲೆಯ 17ನೇ ರಾಜ್ಯ ಬಜೆಟ್ ಮಂಡನೆ ನೇರಪ್ರಸಾರ #pratidhvani

ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ತರಗತಿಗಳನ್ನು ಜಾರಿಗೊಳಿಸಲು ಪ್ರಾಥಮಿಕ ಶಾಲಾ ಶಿಕ್ಷಕರ ಸಾಮರ್ಥ್ಯ ವೃದ್ಧಿಗಾಗಿ ಇಂಗ್ಲಿಷ್ ಭಾಷಾ ತರಬೇತಿ ಕಾರ್ಯಕ್ರಮವನ್ನು 24 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು. ಐಐಟಿ ಧಾರವಾಡದ ಸಹಯೋಗದೊಂದಿಗೆ 8 ರಿಂದ 12ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು 12.28 ಲಕ್ಷ ವಿದ್ಯಾರ್ಥಿಗಳಿಗೆ ಅಂದಾಜು ಐದು ಕೋಟಿ ರೂ.ಗಳ ವೆಚ್ಚದಲ್ಲಿ ಕಲಿಕಾ ಪ್ರಕ್ರಿಯೆಯಲ್ಲಿ AI ತಂತ್ರಜ್ಞಾನವನ್ನು ಅಳವಡಿಸಿಕೊಂಡು ವೈಯಕ್ತಿಕ ಸ್ವಯಂ-ಕಲಿಕಾ ಡಿಜಿಟಲ್ ಟ್ಯೂಟರ್ ಸೌಲಭ್ಯವನ್ನು ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

2026-27ನೇ ಸಾಲಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಸಂಪನ್ಮೂಲ ಕೇಂದ್ರಗಳಲ್ಲಿ (BRC) ಪ್ರತಿ ಕೇಂದ್ರಕ್ಕೆ ಒಬ್ಬರು ಅರ್ಹ ಮಾನಸಿಕ ಆರೋಗ್ಯ ಸಲಹೆಗಾರರನ್ನು ನೇಮಿಸಲಾಗುವುದು. ವಿಜಯಪುರದ ಸೈನಿಕ ಶಾಲೆಯ ಹಾಸ್ಟೆಲ್ ಕಟ್ಟಡಗಳನ್ನು ಹಂತ ಹಂತವಾಗಿ ಪುನರ್ ನಿರ್ಮಿಸಲು ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಹೇಳಿದ್ದಾರೆ.

ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡ ಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಲಾಗುವುದು. ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ ರೂಪಿಸುವ ಸ್ಥಳವಾಗಿರುವ ಶಾಲಾ-ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ, ಕಠಿಣ ನಿಯಮ ಹಾಗೂ ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ತಿಳಿಸಿದ್ದಾರೆ.

Tags: Budget 2026CM SiddaramaiahCollegesEducation DepartmentEducation MinisterGovernment SchoolsHigh School Studentskarnataka budget 2026KKRDBMadhu BangarappaMobile BanPratidhvaniPrimary Schoolssiddaramaiah 17th budgetsiddaramaiah budgetSocial Media BanTeachers RecruitementTeachers Transfer
Previous Post

6,432 ಉದ್ಯೋಗ ಭರ್ತಿಗೆ ಚಾಲನೆ- ನೇಮಕಾತಿಗೆ ವಯೋಮಿತಿ 5 ವರ್ಷಗಳ ಸಡಿಲಿಕೆ

Next Post

“ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ..!

Related Posts

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು
Top Story

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

by ಪ್ರತಿಧ್ವನಿ
May 21, 2026
0

ತಮಿಳುನಾಡಿನ ರಾಜಕೀಯದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕೇವಲ ಆರು ಗಂಟೆಗಳ ಅವಧಿಯಲ್ಲಿ ನೀಡಲಾಗಿದ್ದ ₹17 ಲಕ್ಷ ಮೌಲ್ಯದ...

Read moreDetails
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
Next Post

"ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada