ದರ್ಶನ್ ಜೈಲಿನಲ್ಲಿ ಮಾನಸಿಕವಾಗಿ ಕುಗ್ಗಿದ್ದಾರೆ ಎಂಬ ವದಂತಿಗಳು ಈ ಮೊದಲು ಹರಿದಾಡಿದ್ದವು. ಆ ಬಳಿಕ ಮಾತನಾಡಿದ್ದ ವಿಜಯಲಕ್ಷ್ಮೀ ದರ್ಶನ್ ಅವರು, ಇದು ಸುಳ್ಳು ಎಂದು ಸ್ಪಷ್ಟನೆ ಕೊಟ್ಟಿದ್ದರು. ಈಗ ವಿಜಯಲಕ್ಷ್ಮೀ ದರ್ಶನ್ ಅವರು ಮತ್ತೊಮ್ಮೆ ಈ ಬಗ್ಗೆ ಮಾತನಾಡಿದ್ದಾರೆ.ಮಂಡ್ಯದಲ್ಲಿ ‘ಹಯಗ್ರೀವ’ ಟ್ರೇಲರ್ ಲಾಂಚ್ ಈವೆಂಟ್ ನಡೆಯಿತು. ಇದಕ್ಕೆ ವಿಜಯಲಕ್ಷ್ಮೀ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಅವರು ದರ್ಶನ್ ಬಗ್ಗೆ ಅಭಿಮಾನಿಗಳಿಗೆ ಮಾಹಿತಿ ಕೊಟ್ಟಿದ್ದಾರೆ.

ಧನ್ವೀರ್ ನಟನೆಯ ‘ಹಯಗ್ರೀವ’ ಟ್ರೇಲರ್ ಲಾಂಚ್ ಈವೆಂಟ್ನಲ್ಲಿ ಅವರು ಮಾತನಾಡಿ, ದರ್ಶನ್ ಫ್ಯಾನ್ಸ್ಗೆ ಖುಷಿ ಸುದ್ದಿ ಕೊಟ್ಟಿದ್ದಾರೆ. ಹಯಗ್ರೀವ ಸಿನಿಮಾದಲ್ಲಿ ನಟಿಸಿರುವ ಧನ್ವೀರ್, ಸಂಜನಾಗೆ ಒಳ್ಳೆದಾಗಲಿ. ಧನ್ವೀರ್ ನಮ್ಮ ಕುಟುಂಬದ ಸದಸ್ಯ. ನಮಗೆ ಪ್ರೀತಿ ತೋರಿಸಿದ ಹಾಗೇ ಧನ್ವೀರ್‌ಗೂ ಪ್ರೀತಿ ತೋರಿಸಿ.ಪೈರಸಿ ಸಪೋರ್ಟ್ ಮಾಡಬೇಡಿ, ಸಿನಿಮಾ ಥಿಯೇಟರಲ್ಲಿ ನೋಡಿ ಎಂಜಾಯ್ ಮಾಡಿ’ ಎಂದು ವಿಜಯಲಕ್ಷ್ಮೀ ಹೇಳಿದ್ದಾರೆ.

‘ಡಿ ಬಾಸ್ ಚೆನ್ನಾಗಿದ್ದಾರೆ. ಇಷ್ಟು ಕಷ್ಟದಲ್ಲೂ ತುಂಬಾ ಸ್ಟ್ರಾಂಗ್ ಆಗಿದ್ದಾರೆ. ಅದಕ್ಕೆಲ್ಲಾ ಕಾರಣ ನೀವು, ನಿಮ್ಮಿಂದ ಅವರು ಚೆನ್ನಾಗಿದ್ದಾರೆ’ ಎಂದು ವಿಜಯಲಕ್ಷ್ಮಿ ಹೇಳಿದರು. ಅವರು ಸ್ಟ್ರಾಂಗ್ ಆಗಿದ್ದಾರೆ ಎಂಬ ವಿಷಯ ಅಭಿಮಾನಿಗಳಿಗೆ ಖುಷಿ ನೀಡಿದೆ.






