• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರೈತರ ಆದಾಯ ದುಪ್ಪಟ್ಟು ಮಾಡುತ್ತೇನೆಂದ ಮೋದಿ, ರಸಗೊಬ್ಬರದ ಬೆಲೆ‌ ದುಪ್ಪಟ್ಟು ಮಾಡಿದ್ದಾರೆ -ಸಿದ್ದರಾಮಯ್ಯ

by
April 21, 2021
in ಕರ್ನಾಟಕ
0
ರೈತರ ಆದಾಯ ದುಪ್ಪಟ್ಟು ಮಾಡುತ್ತೇನೆಂದ ಮೋದಿ, ರಸಗೊಬ್ಬರದ ಬೆಲೆ‌ ದುಪ್ಪಟ್ಟು ಮಾಡಿದ್ದಾರೆ -ಸಿದ್ದರಾಮಯ್ಯ
Share on WhatsAppShare on FacebookShare on Telegram

ರಸಗೊಬ್ಬರ ಬೆಲೆ ಹೆಚ್ಚಳ, ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕರೋನಾ ರೋಗದ ಪರಿಣಾಮವಾಗಿ ಜರ್ಜರಿತರಾಗಿರುವ ರೈತರ ನೆರವಿಗೆ ಬರಬೇಕಾಗಿದ್ದ ಕೇಂದ್ರ ಸರ್ಕಾರ ರಸಗೊಬ್ಬರದ ಬೆಲೆ ಏರಿಸಿ ರೈತರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯದ ಮುಖ್ಯಮಂತ್ರಿಗಳು ರೈತರನ್ನು ಸಾಯಿಸಲು ಪೈಪೋಟಿಗೆ ಇಳಿದಂತಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ.

ADVERTISEMENT

ರೈತರ ಆದಾಯವನ್ನು ದುಪ್ಪಟ್ಟು ಮಾಡುತ್ತೇನೆಂದು ಆಶ್ವಾಸನೆ ನೀಡಿದ್ದ ಪ್ರಧಾನಿ ಮೋದಿ ಅವರು ರಸಗೊಬ್ಬರದ ಬೆಲೆ‌ ದುಪ್ಪಟ್ಟು ಮಾಡಿದ್ದಾರೆಂಬ

ರಸಗೊಬ್ಬರಕ್ಕೆ ನೀಡುತ್ತಿದ್ದ ಸಬ್ಸಿಡಿಯನ್ನು ಏಕಾಏಕಿ ಅಂದಾಜು ರೂ.45,000 ಕೋಟಿಯಷ್ಟು ಕಡಿತಗೊಳಿಸಿರುವುದೇ ರಸಗೊಬ್ಬರ ಕಂಪೆನಿಗಳು ಬೆಲೆ ಏರಿಸಲು ಕಾರಣ. ಕೇಂದ್ರ ಸರ್ಕಾರ ಈ ಸತ್ಯವನ್ನು ಮುಚ್ಚಿಟ್ಟು ಸುಳ್ಳು ಕಾರಣಗಳನ್ನು ನೀಡುತ್ತಿದೆ ಎಂದು ಆರೋಪಿಸಿದ್ದಾರೆ.

ಹಳೆಯ ದಾಸ್ತಾನಿನ ರಸಗೊಬ್ಬರವನ್ನು ಹಳೆಯ ದರದಲ್ಲಿ ಮಾರಾಟ ಮಾಡಬೇಕೆಂಬ ಕೇಂದ್ರ ಸರ್ಕಾರದ ಸೂಚನೆಗೆ ತದ್ವಿರುದ್ಧವಾಗಿ ರಾಜ್ಯ ಕೃಷಿ ಇಲಾಖೆ ಆದೇಶ ಹೊರಡಿಸಿದೆ. ರೈತರ ಹಾದಿ ತಪ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಾಟಕ‌ ಮಾಡುತ್ತಿವೆಯೇ? ಎಂದು ವಾಗ್ದಾಳಿ ನಡೆಸಿದ್ದಾರೆ.

ಪ್ರಸ್ತುತ ಆರುವರೆ ಲಕ್ಷ ಮೆಟನ್ ಡಿಎಪಿಗೆ ಬೇಡಿಕೆ ಇದೆ. ಈಗ ಇರುವ ದಾಸ್ತಾನು ಕೇವಲ 77,401 ಮೆಟನ್ ಮಾತ್ರ. ಇದರಿಂದಾಗಿ ಹಳೆದಾಸ್ತಾನಿಗೆ ಹಳೆಯ ದರದ ಸೂಚನೆಯಿಂದ ರೈತರಿಗೆ ಯಾವ ಲಾಭವೂ ಆಗಲಾರದು. ಈಗಾಗಲೇ ರಸಗೊಬ್ಬರ ಕಂಪೆನಿಗಳು ಹೊಸದರದ ರಸಗೊಬ್ಬರವನ್ನು ಮಾರುಕಟ್ಟೆಗೆ ಸುರಿದಿವೆ. ಎಲ್ಲ ರಸಗೊಬ್ಬರಗಳ ಬೆಲೆಯನ್ನು ಸರಾಸರಿ ಶೇಕಡಾ 60ರಷ್ಟು ಹೆಚ್ಚಿಸಲಾಗಿದೆ. ಏಪ್ರಿಲ್ ಒಂದಕ್ಕೆ ಕ್ವಿಂಟಲ್ ಡಿಎಪಿಗೆ ರೂ.2400ರಷ್ಟಿದ್ದ ಬೆಲೆ ಈಗ ರೂ.3400 ಆಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ನೂತನ ಕೃಷಿ ಕಾಯ್ದೆಗಳನ್ನು ದೇಶದಾದ್ಯಂತ ವಿರೋಧಿಸುತ್ತಿರುವ ರೈತರ ವಿರುದ್ಧ ಸೇಡುತೀರಿಸಿಕೊಳ್ಳುವ ದುರುದ್ದೇಶದಿಂದಲೇ ಕೇಂದ್ರ ಸರ್ಕಾರ ರಸಗೊಬ್ಬರ ಕಂಪೆನಿಗಳ ಜೊತೆ ಷಾಮೀಲಾಗಿ ರೈತರನ್ನು ಸುಲಿಗೆ ಮಾಡಲು ಹೊರಟಂತಿದೆ. ಹಳೆ ದಾಸ್ತಾನು, ಹೊಸ ದಾಸ್ತಾನು ಎಂಬ ನಾಟಕವನ್ನು ಕೇಂದ್ರ ಸರ್ಕಾರ ಕೈಬಿಟ್ಟು‌, ರಸಗೊಬ್ಬರಕ್ಕೆ ನೀಡುತ್ತಿರುವ ಸಬ್ಸಿಡಿಯನ್ನು ತಕ್ಷಣ ಹೆಚ್ಚಿಸಿ ಏರಿಸಿರುವ ಬೆಲೆಯನ್ನು ಮೊದಲಿನ ಸ್ಥಿತಿಗೆ ಇಳಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Previous Post

ರಂಜಾನ್ ನಮಾಜಿಗಿರುವ ಕಟ್ಟುನಿಟ್ಟಿನ ನಿಯಮ, ಕುಂಭಮೇಳಕ್ಕೆ ಯಾಕಿಲ್ಲ?

Next Post

Covid ನಿಯಂತ್ರಣದಲ್ಲಿ 7 ತಪ್ಪು ಹೆಜ್ಜೆ; ದಿನಕ್ಕೆ 2 ಲಕ್ಷ ಪ್ರಕರಣಗಳು, ದಾಖಲೆಯ ಸಾವಿಗೆ ಹೊಣೆ ಯಾರು?

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
Covid ನಿಯಂತ್ರಣದಲ್ಲಿ 7 ತಪ್ಪು ಹೆಜ್ಜೆ; ದಿನಕ್ಕೆ 2 ಲಕ್ಷ ಪ್ರಕರಣಗಳು, ದಾಖಲೆಯ ಸಾವಿಗೆ ಹೊಣೆ ಯಾರು?

Covid ನಿಯಂತ್ರಣದಲ್ಲಿ 7 ತಪ್ಪು ಹೆಜ್ಜೆ; ದಿನಕ್ಕೆ 2 ಲಕ್ಷ ಪ್ರಕರಣಗಳು, ದಾಖಲೆಯ ಸಾವಿಗೆ ಹೊಣೆ ಯಾರು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!