• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬಳಕೆದಾರರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಗುಡ್‌ನ್ಯೂಸ್‌ ಏನದು?

ನಮೂನೆ–11ಬಿ ಖಾತೆಗಳನ್ನು ನಮೂನೆ–11ಎ ಗಳಾಗಿ ಪರಿವರ್ತನೆ ಮಾಡಿಕೊಳ್ಳಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ..

ಪ್ರತಿಧ್ವನಿ by ಪ್ರತಿಧ್ವನಿ
April 13, 2026
in Top Story, ಇದೀಗ, ಕರ್ನಾಟಕ, ರಾಜಕೀಯ
0
ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬಳಕೆದಾರರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಗುಡ್‌ನ್ಯೂಸ್‌ ಏನದು?
Share on WhatsAppShare on FacebookShare on Telegram

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಡಿ ಸಾರ್ವಜನಿಕರಿಂದ ರಾಜ್ಯದಾದ್ಯಂತ ಈ ವರೆವಿಗೂ 1,52,863 ಅರ್ಜಿಗಳು ಸ್ವೀಕೃತಗೊಂಡಿದ್ದು, 1,33,803 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ADVERTISEMENT
Tamil Nadu Polls : ತಮಿಳುನಾಡಿನಲ್ಲಿ ಎಡಪ್ಪಾಡಿ ನೇತೃತ್ವದ ಸರ್ಕಾರ ಬರುತ್ತೆ, ಜನರಿಗೆ ನೆಮ್ಮದಿ ಜೀವನ ಸಿಗುತ್ತೆ..!

ನಗರದ ತಮ್ಮ ಕಚೇರಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಇ-ಸ್ವತ್ತು ತಂತ್ರಾಂಶದ ಕಾರ್ಯನಿರ್ವಹಣೆ ಹಾಗೂ ಪ್ರಗತಿಯನ್ನು ಪರಿಶೀಲಿಸಿದರು. ಅಲ್ಲದೇ, ಹೊಸ ನಮೂನೆ 11ಬಿ ಗೆ ಸಂಬಂಧಿಸಿದಂತೆ ಈವರೆಗೆ 76,093 ಅರ್ಜಿಗಳು ಸ್ವೀಕೃತವಾಗಿವೆ. ಈ ಅರ್ಜಿಗಳು ವಿವಿಧ ಹಂತಗಳಲ್ಲಿ ಅನುಮೋದನೆಗೆ ಬಾಕಿ ಉಳಿದಿದ್ದು, ಈ ಅರ್ಜಿಗಳನ್ನು ತ್ವರಿತ ಗತಿಯಲ್ಲಿ ವಿಲೇವಾರಿ ಮಾಡುವಲ್ಲಿ ಕ್ರಮವಹಿಸಲಾಗುತ್ತಿದೆ ಎಂದೂ ಸಚಿವರು ಹೇಳಿದ್ದಾರೆ.

ಇ-ಸ್ವತ್ತು 2.0 ತಂತ್ರಾಂಶದ ಸಿಟಿಜನ್‌ ಇಂಟರ್‌ಫೇಸ್‌ ಮೂಲಕ ಅರ್ಜಿಗಳನ್ನು ಸಲ್ಲಿಸುವಲ್ಲಿ ಮತ್ತು ಬಳಕೆದಾರರು ಅರ್ಜಿಗಳನ್ನು ಅನುಮೋದನೆ ಮಾಡುವಂತಹ ಸಂದರ್ಭದಲ್ಲಿ ತಾಂತ್ರಿಕ ಸಮಸ್ಯೆಗಳು ಉಂಟಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಲಹೆಗಳು ಬರುತ್ತಿವುದನ್ನು ಗಮನಿಸಿರುವ ಸಚಿವರು ತಂತ್ರಾಂಶದಲ್ಲಿ ಬದಲಾವಣೆ ಮಾಡಿ ಈ ಕೆಳಗಿನ ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸಚಿವ ಪ್ರಿಯಾಂಕ್‌ ಖರ್ಗೆ ಇ-ಸ್ವತ್ತಿನ ಕುರಿತು ನೀಡಿರುವ ಇನ್ನಷ್ಟು ವಿವರವಾದ ಮಾಹಿತಿ ಇಲ್ಲಿದೆ ನೋಡಿ..

1. ನಮೂನೆ–11ಬಿ ಖಾತೆಗಳನ್ನು ನಮೂನೆ–11ಎ ಗಳಾಗಿ ಪರಿವರ್ತನೆ ಮಾಡಿಕೊಳ್ಳಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ ನೀಡಲಾಗಿದೆ.

2. ಹೊಸ ಬಹುಮಹಡಿ (ಅಪಾರ್ಟ್‌ಮೆಂಟ್) ಗಳಿಗೆ ಅರ್ಜಿಗಳನ್ನು ಸಲ್ಲಿಸಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ ನೀಡಲಾಗಿದೆ.

ಇದನ್ನೂ ಓದಿ : ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

3. ಇ-ಸ್ವತ್ತು ತಂತ್ರಾಂಶದ ಸಿಟಿಜನ್‌ ಇಂಟರ್‌ಫೇಸ್‌ ಮೂಲಕ ಅರ್ಜಿಗಳನ್ನು ಸಲ್ಲಿಸುವಲ್ಲಿ ಗುಂಟೆ ಮತ್ತು ಸೆಂಟ್ಸ್‌ನಲ್ಲಿರುವ ವಿಸ್ತೀರ್ಣವನ್ನು ಚ.ಮೀ ನಲ್ಲಿ ಪರಿವರ್ತಿಸಿ, ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

4. ಇ-ಸ್ವತ್ತು ತಂತ್ರಾಂಶದ ಸಿಟಿಜನ್‌ ಇಂಟರ್‌ಫೇಸ್‌ ಮೂಲಕ ಅರ್ಜಿಗಳನ್ನು ಋಣಭಾರ ಪ್ರಮಾಣಪತ್ರ (ಇಸಿ)ಗಳನ್ನು ಸಲ್ಲಿಸಲು ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬರೆಹರಿಸಲಾಗಿದೆ.

5. ಇ-ಸ್ವತ್ತು ತಂತ್ರಾಂಶದ ಸಿಟಿಜನ್‌ ಇಂಟರ್‌ಫೇಸ್‌ ಮೂಲಕ ಅರ್ಜಿಗಳನ್ನು ಸೇವ್ ಮಾಡಲು ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬರೆಹರಿಸಲಾಗಿದೆ.

6. ಇ-ಸ್ವತ್ತು ತಂತ್ರಾಂಶದ ಸಿಟಿಜನ್‌ ಇಂಟರ್‌ಫೇಸ್‌ ಮೂಲಕ ಇ-ಖಾತಾಗಳನ್ನು ಡನ್‌ಲೋಡ್ ಮಾಡಿಕೊಳ್ಳಲು ಇದ್ದ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ.

Tamil Nadu Polls : ಇಂದಿಗೂ ಜಯಲಲಿತಾ ತಮಿಳಿಗರ ಮನದಲ್ಲಿ ನೆಲೆಸಿದ್ದಾರೆ..! #dmk

7. ಇ-ಸ್ವತ್ತು ತಂತ್ರಾಂಶದ ಸಿಟಿಜನ್‌ ಇಂಟರ್‌ಫೇಸ್‌ ಮೂಲಕ ಅರ್ಜಿಗಳನ್ನು ಸಲ್ಲಿಸುವಾಗ ಎಲ್ಲಾ ವಿದ್ಯುತ್ ಸರಬರಾಜು ಕಂಪನಿ ಗಳೊಂದಿಗೆ ಮಾಡಲಾಗಿದ್ದ ಸಂಯೋಜನೆಯಲ್ಲಿ ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬರೆಹರಿಸಲಾಗಿದೆ.

8. ಇ-ಸ್ವತ್ತು ತಂತ್ರಾಂಶದ ಗ್ರಾಮ ಪಂಚಾಯತಿ ಬಳಕೆದಾರರುಗಳ ಲಾಗಿನ್‌ ನಲ್ಲಿ ಅರ್ಜಿಗಳ ಅನುಮೋದನೆಯಲ್ಲಿ ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬರೆಹರಿಸಲಾಗಿದೆ.

ಇನ್ನೂ ಹೊಸದಾಗಿ ಅನುಮೋದನೆಗೊಂಡ ಆಸ್ತಿಗಳಿಗೆ ತಿದ್ದುಪಡಿ ಮಾಡುವ ಅವಕಾಶವನ್ನು ಹಾಗೂ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಮಾರ್ಗಸೂಚಿ ದರವನ್ನು ಇ-ಸ್ವತ್ತು ತಂತ್ರಾಂಶದೊಂದಿಗೆ ಸಂಯೋಜನೆ ಮಾಡುವ ಕಾರ್ಯವನ್ನು ಮುಂದಿನ ದಿನದೊಳಗೆ ಕ್ರಮವಹಿಸಲಾಗುವುದು. ಇ-ಸ್ವತ್ತು ತಂತ್ರಾಂಶದ ಬಳಕೆದಾರರು ಗಳ ಲಾಗಿನ್‌ ನಲ್ಲಿ ಉಂಟಾಗುತ್ತಿರುವ ಸಣ್ಣ ಪುಟ್ಟ ತಾಂತ್ರಿಕ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲಾಗುವುದು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ.

ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಕಾರ್ಯದರ್ಶಿ ರಣ್‌ದೀಪ್‌ ಭಾಗವಹಿಸಿದ್ದರು
ಜಿಲ್ಲಾ ಸಹಾಯವಾಣಿಗಳ ಸಂಖ್ಯೆಯನ್ನು ಮುಂದಿನ ಲಿಂಕ್‌ನಲ್ಲಿ ʼಸಂಪರ್ಕಿಸಿʼ ಶೀರ್ಷಿಕೆಯಡಿ ಪ್ರಕಟಿಸಲಾಗಿದೆ https://eswathu.karnataka.gov.in/Login.aspx ಮತ್ತು https://panchatantra.karnataka.gov.in ಸಹಾಯವಾಣಿ : 9483476000

Tags: B KhataDK ShivakumarE khataE swatthuGram PanchayatsKarnataka GovernmentOnline servicePratidhvaniPriyanka KhargeRDPR Ministesiddaramaiah
Previous Post

“ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆ ದೇವರಾಗಿದೆ”

Next Post

ಟ್ರಂಪ್ ವಿರುದ್ಧ ಪೋಪ್ ಲಿಯೋ ಕಟು ಟೀಕೆ:ಯುದ್ಧೋನ್ಮಾದಕ್ಕೆ ‘ಹುಚ್ಚುತನ’ ಎಚ್ಚರಿಕೆ

Related Posts

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?
ರಾಜಕೀಯ

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

by ಪ್ರತಿಧ್ವನಿ
April 15, 2026
0

ಧಾರವಾಡ ಜಿಲ್ಲೆಯ ರಾಜಕೀಯ ವಲಯವನ್ನು ಕದಡಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಕೊನೆಗೂ ತೀರ್ಪು ಹೊರಬಿದ್ದಿದೆ. ದೀರ್ಘಕಾಲದ ಕಾನೂನು ಹೋರಾಟದ ಬಳಿಕ...

Read moreDetails
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post
ಟ್ರಂಪ್ ವಿರುದ್ಧ ಪೋಪ್ ಲಿಯೋ ಕಟು ಟೀಕೆ:ಯುದ್ಧೋನ್ಮಾದಕ್ಕೆ ‘ಹುಚ್ಚುತನ’ ಎಚ್ಚರಿಕೆ

ಟ್ರಂಪ್ ವಿರುದ್ಧ ಪೋಪ್ ಲಿಯೋ ಕಟು ಟೀಕೆ:ಯುದ್ಧೋನ್ಮಾದಕ್ಕೆ ‘ಹುಚ್ಚುತನ’ ಎಚ್ಚರಿಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada