ರಾಜ್ಯದಲ್ಲಿ ಜಿದ್ದಾಜಿದ್ದಿನ ಕಣವಾಗಿ ಗುರುತಿಸಿಕೊಂಡಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ (Former CM HD Kumaraswamy)ಭರ್ಜರಿಯಾಗಿ ಜಯ ಸಾಧಿಸಿದ್ರು.. ಒಕ್ಕಲಿಗ ಸಾಮ್ರಾಜ್ಯದ ಮೇಲಿನ ಹಿಡಿತ ಮರು ಸ್ಥಾಪನೆಯ ಮಹಾಯುದ್ಧ ಎಂದೇ ಬಿಂಬಿತವಾಗಿದ್ದ ಮಂಡ್ಯ ಕದನಲ್ಲಿ ಕ್ಷೇತ್ರದ ಜನ ಕುಮಾರಸ್ವಾಮಿ ಅವರನ್ನು ಗೆಲ್ಲಿಸಿ ಹಿಗ್ಗಿಸಿದ್ರು. ಕೇಂದ್ರದಲ್ಲಿ ಸಚಿವರಾಗಿಯೂ ಬಿಟ್ಟರು. ಈ ಎಲ್ಲಾ ಖುಷಿಗಾಗಿ ಇಂದು ಮಂಡ್ಯದ ಪಾಂಡವಪುರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಬೃಹತ್ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜೊತೆಗೆ ಪಾಂಡವಪುರದ ಪುಟ್ಟರಾಜು ನಿವಾಸದ ಮುಂಭಾಗ ಸಸ್ಯಹಾರಿ ಊಟದ ಜೊತೆ ಭರ್ಜರಿ ಬಾಡೂಟದ ವ್ಯವಸ್ಥೆಯನ್ನೂ ಮಾಡಲಾಗಿದೆ.ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಪುಟ್ಟರಾಜು ಸೋಲು ಉಂಡಿದ್ದರೂ ಕುಮಾರಸ್ವಾಮಿಗೆ ಸುಮಾರು 50 ಸಾವಿರ ಭರ್ಜರಿ ಲೀಡ್ ಸಿಕ್ಕಿತ್ತು. ಹೀಗಾಗಿ ಪಾಂಡವಪುರದಲ್ಲೇ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸುಮಾರು 50 ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗುವ ನಿರೀಕ್ಷೆಯಿದ್ದು, ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭ ಆಗಲಿದೆ. ಜೆಡಿಎಸ್, ಬಿಜೆಪಿ ಎರಡೂ ಪಕ್ಷದ ಕಾರ್ಯಕರ್ತರು ಭಾಗಿಯಾಗಬೇಕು ಎಂದು ಮಾಜಿ ಶಾಸಕ ಪುಟ್ಟರಾಜು ಮನವಿ ಮಾಡಿದ್ದಾರೆ. ಇನ್ನು ಕಾರ್ಯಕ್ರಮದಲ್ಲಿ ಮದ್ಯ ಹಂಚಿಕೆ ಮಾಡಿ ಗೊಂದಲ ಮೂಡಿಸುವ ಪ್ರಯತ್ನ ನಡೆದಿದೆ ಎನ್ನಲಾಗಿದ್ದು, ಈ ಬಗ್ಗೆ ಗಮನ ಹರಿಸುವಂತೆ ಡಿಸಿ ಹಾಗು ಅಬಕಾರಿ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. ಇತ್ತೀಚಿಗಷ್ಟೇ ನೆಲಮಂಗಲದಲ್ಲಿ ಚಿಕ್ಕಬಳ್ಳಾಪುರ ಸಂಸದ ಡಾ ಕೆ ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಮದ್ಯ ಹಂಚಿಕೆ ಮಾಡಲಾಗಿತ್ತು. ಮದ್ಯ ಹಂಚಿಕೆಗೆ ಅಧಿಕಾರಿಗಳಿಂದ ಅನುಮತಿ ಪಡೆಯಲಾಗಿತ್ತು. ಪೊಲೀಸ್ ಅಧೃಇಕಾರಿಗಳ ಸಮ್ಮುಖದಲ್ಲೇ ಮದ್ಯ ಹಂಚಿಕೆ ಮಾಡಲಾಗಿತ್ತು. ಆದರೂ ಆ ಬಳಿಕ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರ ಆದ ಬಳಿಕ ಬಿಜೆಪಿ ತಾಲೂಕು ಘಟಕದ ಅಧ್ಯಕ್ಷರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡುವ ನಿರ್ಧಾರ ಮಾಡಲಾಗಿತ್ತು. ಈ ಘಟನೆ ಆದ ಬಳಿಕ ಮಂಡ್ಯದಲ್ಲಿ ಯಾವುದೇ ಮುಜುಗರ ಸಂಗತಿ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ.
ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ! ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಕ್ರಮಕ್ಕೆ ಆಗ್ರಹ!
ಮೈಸೂರಿನ ಮುಡಾ ಅಕ್ರಮ ನಿವೇಶನಗಳ ಹಂಚಿಕೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಪಿ.ಎನ್.ದೇಸಾಯಿಯವರನ್ನು ಈಗಾಗಲೇ ಡಿಬಾರ್ ಮಾಡಿದ್ದರೂ ಅವರು ಅದೇ ಸ್ಥಾನದಲ್ಲಿ ಮುಂದುವರೆದಿರುವ ಬಗ್ಗೆ ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ದಾರೆ. ...
Read moreDetails