• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ: ಸಂಚಾರಿ ಪೊಲೀಸರು ಕೈಗೊಂಡ ಕ್ರಮವೇನು..?

ಪ್ರತಿಧ್ವನಿ by ಪ್ರತಿಧ್ವನಿ
January 29, 2026
in Top Story, ಕರ್ನಾಟಕ
0
ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ: ಸಂಚಾರಿ ಪೊಲೀಸರು ಕೈಗೊಂಡ ಕ್ರಮವೇನು..?
Share on WhatsAppShare on FacebookShare on Telegram

ಬೆಂಗಳೂರು: ವಿಶ್ವದ ಅತಿಹೆಚ್ಚು ಸಂಚಾರ ದಟ್ಟಣೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ಬೆಂಗಳೂರು (Bangalore Traffic) ಎರಡನೇ ಸ್ಥಾನ ಪಡೆದಿದೆ. ವಾಹನ ದಟ್ಟಣೆ ಪಟ್ಟಿಯಲ್ಲಿ ಮೆಕ್ಸಿಕೊ ನಗರ ಮೊದಲ ಸ್ಥಾನದಲ್ಲಿದ್ದರೆ, ಬೆಂಗಳೂರು ಎರಡನೇ ಸ್ಥಾನದಲ್ಲಿದೆ ಎಂದು ‘ಟಾಮ್‌ಟಾಮ್’ ಸಂಸ್ಥೆ 2025ರ ಸಂಚಾರ ಸೂಚ್ಯಂಕ (Traffic Index) ವರದಿಯಲ್ಲಿ ತಿಳಿಸಿದೆ. ವರದಿ ಪ್ರಕಾರ, 2025ರಲ್ಲಿ ಬೆಂಗಳೂರಿನ ಸರಾಸರಿ ಸಂಚಾರ ದಟ್ಟಣೆ ಶೇ 74.4ಕ್ಕೆ ತಲುಪಿದೆ. 2024ರಲ್ಲಿ ಇದು ಶೇ 72.7 ಆಗಿದ್ದು, ಒಂದೇ ವರ್ಷದಲ್ಲಿ ಶೇ 1.7ರಷ್ಟು ದಟ್ಟಣೆ ಹೆಚ್ಚಾಗಿದೆ.

ADVERTISEMENT
Karnataka Legislative Council Session :ತಾರಕ್ಕೇರಿದ  ರೂಲ್ ಬುಕ್ ರೋಷ ವೇಷ #pratidhvani #session

ಈ ಹಿನ್ನೆಲೆಯಲ್ಲಿ ಬೆಂಗಳೂರಿನ ದಿನನಿತ್ಯದ ಟ್ರಾಫಿಕ್ ಕಿರಿಕಿರಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಗರ ಸಂಚಾರಿ ಪೊಲೀಸ್ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ, ಪಾದಚಾರಿಗಳ ಅಪಘಾತಗಳು ಹಾಗೂ ಮಳೆಗಾಲದ ನೀರು ನಿಲ್ಲುವ ಸಮಸ್ಯೆಗಳಿಗೆ ಕಡಿವಾಣ ಹಾಕಲು ಸಂಚಾರಿ ವಿಭಾಗವು ಪಾಲಿಕೆಗೆ ಸಮಗ್ರ ಅಭಿವೃದ್ಧಿ ಪ್ರಸ್ತಾವನೆ ಸಲ್ಲಿಸಿದೆ.

ನಗರದ ವಿವಿಧ ಪ್ರಮುಖ ರಸ್ತೆ ಮತ್ತು ಜಂಕ್ಷನ್‌ಗಳಲ್ಲಿ ಸಂಚಾರ ಸುಗಮಗೊಳಿಸುವ ಉದ್ದೇಶದಿಂದ ಒಟ್ಟು 101 ಸ್ಥಳಗಳಲ್ಲಿ ಪಾದಚಾರಿ ಮೇಲ್ಸೇತುವೆ (ಸ್ಕೈವಾಕ್) ನಿರ್ಮಾಣ ಸೇರಿದಂತೆ ಹಲವಾರು ಸುಧಾರಣಾ ಕ್ರಮಗಳನ್ನು ಸಂಚಾರಿ ಪೊಲೀಸರು ಶಿಫಾರಸು ಮಾಡಿದ್ದಾರೆ. ಈ ಪ್ರಸ್ತಾವನೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಪಾಲಿಕೆ, ತಕ್ಷಣವೇ ಸ್ಥಳ ಪರಿಶೀಲನೆ ನಡೆಸಿ ಸಾಧ್ಯವಿರುವ ಪ್ರದೇಶಗಳಲ್ಲಿ ಕಾಮಗಾರಿ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

Janardhan Reddy On Siddaramaiah | ಸಿದ್ದು ವಿರುದ್ಧ ಸಿಡಿದ ಜನಾರ್ದನ ರೆಡ್ಡಿ  #pratidhvani

ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ರಸ್ತೆ ದಾಟುವಾಗ ಪಾದಚಾರಿಗಳಿಗೆ ಆಗುವ ಅಪಘಾತಗಳನ್ನು ತಡೆಗಟ್ಟಲು ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ 101 ಆಯ್ದ ಸ್ಥಳಗಳಲ್ಲಿ ಸ್ಕೈವಾಕ್ ನಿರ್ಮಿಸಲು ಹಾಗ ಟ್ರಾಫಿಕ್ ಜಾಮ್‌ಗೆ ಕಾರಣವಾಗುತ್ತಿರುವ 103 ಬಸ್ ನಿಲ್ದಾಣಗಳನ್ನು ಸೂಕ್ತ ಹಾಗೂ ವೈಜ್ಞಾನಿಕ ಸ್ಥಳಗಳಿಗೆ ಸ್ಥಳಾಂತರಿಸಲು ಶಿಫಾರಸು ಮಾಡಲಾಗಿದೆ.

ಮಳೆಗಾಲದಲ್ಲಿ ಸಂಚಾರಕ್ಕೆ ತೀವ್ರ ಅಡಚಣೆ ಉಂಟುಮಾಡುವ 137 ನೀರು ನಿಲ್ಲುವ ಪ್ರದೇಶಗಳನ್ನು ಗುರುತಿಸಲಾಗಿದ್ದು, ಅಲ್ಲಿನ ಚರಂಡಿ ಹಾಗೂ ಮಳೆ ನೀರು ಹರಿವು ವ್ಯವಸ್ಥೆ ಸುಧಾರಣೆಗೆ ಸಲಹೆ ನೀಡಲಾಗಿದೆ. ಸಂಚಾರ ವೇಗಕ್ಕೆ ಅಡ್ಡಿಯಾಗುತ್ತಿರುವ ಹಾಗೂ ಅಪಘಾತಗಳಿಗೆ ಕಾರಣವಾಗುವ 84 ಸ್ಪೀಡ್ ಬ್ರೇಕರ್‌ಗಳನ್ನು ತೆಗೆದುಹಾಕಲು ನಿರ್ಧಾರ ಕೈಗೊಳ್ಳಲಾಗಿದೆ.

ಇದನ್ನೂ ಓದಿ: DARSHAN: ಮಾರ್ಚ್ ತಿಂಗಳಲ್ಲಿ ನಟ ದರ್ಶನ್ ಬಿಡುಗಡೆ ವದಂತಿ: ರಚಿತಾ ರಾಮ್ ಹೇಳಿದ್ದೇನು..?

ರಸ್ತೆಯ ಮಧ್ಯದಲ್ಲೇ ಬಸ್ ನಿಲ್ಲುವುದರಿಂದ ಉಂಟಾಗುವ ದಟ್ಟಣೆ ತಪ್ಪಿಸಲು 63 ಪ್ರಮುಖ ಪ್ರದೇಶಗಳಲ್ಲಿ ಪ್ರತ್ಯೇಕ ಬಸ್ ಬೇ ನಿರ್ಮಾಣಕ್ಕೆ ಶಿಫಾರಸು ಮಾಡಲಾಗಿದೆ. ಅಲ್ಲದೇ ಅತಿ ಹೆಚ್ಚು ವಾಹನ ಸಂಚಾರ ಇರುವ 35 ರಸ್ತೆಗಳನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸುವ ಯೋಜನೆಯೂ ಪಟ್ಟಿಯಲ್ಲಿ ಸೇರಿದೆ ಎನ್ನಲಾಗಿದೆ.

Special Assembly bjP vs Bjp: ಸದನದಲ್ಲಿ ಸರ್ಕಾರ- ವಿಪಕ್ಷದ ಮಧ್ಯೆ ಕಾವೇರಿದ ಚರ್ಚೆ- ಸ್ಪೀಕರ್ ಏನ್ ಮಾಡಿದ್ರು ನೋಡಿ

ಸಂಚಾರಿ ಪೊಲೀಸ್ ಇಲಾಖೆ ನೀಡಿರುವ ಈ ಪ್ರಸ್ತಾವನೆಗಳ ಆಧಾರದ ಮೇಲೆ ಪಾಲಿಕೆ ಅಧಿಕಾರಿಗಳು ಹಾಗೂ ಇಂಜಿನಿಯರ್‌ಗಳು ಜಂಟಿ ಸ್ಥಳ ಪರಿಶೀಲನೆ ನಡೆಸಲಿದ್ದು, ಬಳಿಕ ಯೋಜನೆಗಳಿಗೆ ತ್ವರಿತವಾಗಿ ಟೆಂಡರ್ ಪ್ರಕ್ರಿಯೆ ಆರಂಭಿಸಿ ಕಾಮಗಾರಿ ಕೈಗೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ. ಈ ಕ್ರಮಗಳು ಜಾರಿಯಾದಲ್ಲಿ, ಮುಂಬರುವ ದಿನಗಳಲ್ಲಿ ಬೆಂಗಳೂರಿನ ರಸ್ತೆಗಳಲ್ಲಿ ಟ್ರಾಫಿಕ್ ಸಮಸ್ಯೆ ಗಣನೀಯವಾಗಿ ಕಡಿಮೆಯಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

Tags: BBMPbengalurubengaluru policebengaluru trafficGBAKarnatakaTrafficTrffic Police
Previous Post

DARSHAN CASE: ಮಾರ್ಚ್ ತಿಂಗಳಲ್ಲಿ ನಟ ದರ್ಶನ್ ಬಿಡುಗಡೆ ವದಂತಿ: ರಚಿತಾ ರಾಮ್ ಹೇಳಿದ್ದೇನು..?

Next Post

Karnataka: ರಾಜ್ಯ ಸರ್ಕಾರಿ ನೌಕರರಿಗೆ ತಿಂಗಳಲ್ಲಿ ಒಂದು ದಿನ ಈ ಬಟ್ಟೆ ಕಡ್ಡಾಯ

Related Posts

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ
Top Story

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

by ಪ್ರತಿಧ್ವನಿ
April 11, 2026
0

2019ರಲ್ಲಿ ಒಂದು ಕನಸು ಆರಂಭವಾಯಿತು…ಸತ್ಯದ ಧ್ವನಿಯನ್ನು ಜನರಿಗೆ ತಲುಪಿಸುವ ಕನಸು…ಆ ಕನಸಿನ ಹೆಸರು – ಪ್ರತಿಧ್ವನಿ ನ್ಯೂಸ್. ಇಂದು, 2026ರ ಏಪ್ರಿಲ್ 11… ಪ್ರತಿಧ್ವನಿ ತನ್ನ ಏಳು...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post
Karnataka: ರಾಜ್ಯ ಸರ್ಕಾರಿ ನೌಕರರಿಗೆ ತಿಂಗಳಲ್ಲಿ ಒಂದು ದಿನ ಈ ಬಟ್ಟೆ ಕಡ್ಡಾಯ

Karnataka: ರಾಜ್ಯ ಸರ್ಕಾರಿ ನೌಕರರಿಗೆ ತಿಂಗಳಲ್ಲಿ ಒಂದು ದಿನ ಈ ಬಟ್ಟೆ ಕಡ್ಡಾಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada